AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NAM: ನಮೀಬಿಯಾ ವಿರುದ್ಧ 93 ರನ್​ಗಳಿಂದ ಗೆದ್ದ ಟೀಂ ಇಂಡಿಯಾ

T20 World Cup 2026: 2026ರ ಟಿ20 ವಿಶ್ವಕಪ್‌ನ 18ನೇ ಪಂದ್ಯದಲ್ಲಿ ಭಾರತವು ನಮೀಬಿಯಾವನ್ನು 93 ರನ್‌ಗಳಿಂದ ಸೋಲಿಸಿ ಸತತ ಎರಡನೇ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 209 ರನ್ ಗಳಿಸಿದರೆ, ನಮೀಬಿಯಾ 116 ರನ್‌ಗಳಿಗೆ ಆಲೌಟ್ ಆಯಿತು. ಇಶಾನ್ ಕಿಶನ್ 61 ರನ್ ಹಾಗೂ ಹಾರ್ದಿಕ್ ಪಾಂಡ್ಯ 52 ರನ್ ಮತ್ತು 2 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

IND vs NAM: ನಮೀಬಿಯಾ ವಿರುದ್ಧ 93 ರನ್​ಗಳಿಂದ ಗೆದ್ದ ಟೀಂ ಇಂಡಿಯಾ
Ind Vs Nam
ಪೃಥ್ವಿಶಂಕರ
|

Updated on:Feb 12, 2026 | 10:53 PM

Share

2026ರ ಟಿ20 ವಿಶ್ವಕಪ್​ನ (T20 World Cup 2026) 18ನೇ ಪಂದ್ಯದಲ್ಲಿ ಭಾರತ ಹಾಗೂ ನಮೀಬಿಯಾ (India vs Namibia) ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯಕ್ಕೂ ಮುನ್ನ ನಿರೀಕ್ಷಿಸಿದ ಫಲಿತಾಂಶವೇ ಪಂದ್ಯದ ಬಳಿಕವೂ ಹೊರಬಿದ್ದಿದೆ. ಈ ಪಂದ್ಯದಲ್ಲಿ ನಮೀಬಿಯಾ ತಂಡವನ್ನು 93 ರನ್​ಗಳ ಭಾರಿ ಅಂತರದಿಂದ ಮಣಿಸಿದ ಟೀಂ ಇಂಡಿಯಾ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನಮೀಬಿಯಾ ಕೇವಲ 116 ರನ್​ಗಳಿಗೆ ಆಲೌಟ್ ಆಯಿತು. ಭಾರತದ ಈ ಗೆಲುವಿನಲ್ಲಿ ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರವಹಿಸಿದರು. ಇಶಾನ್ 24 ಎಸೆತಗಳಲ್ಲಿ 61 ರನ್ ಗಳಿಸಿದರೆ, ಪಾಂಡ್ಯ 28 ಎಸೆತಗಳಲ್ಲಿ 52 ರನ್ ಬಾರಿಸುವುದರ ಜೊತೆಗೆ ಎರಡು ವಿಕೆಟ್‌ಗಳನ್ನು ಸಹ ಪಡೆದರು.

ಕಿಶನ್, ಹಾರ್ದಿಕ್ ಅರ್ಧಶತಕ

ಫೆಬ್ರವರಿ 12 ರಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಸ್ಫೋಟಕ ಆರಂಭವನ್ನು ನೀಡಿ, ಪವರ್‌ಪ್ಲೇನಲ್ಲಿ ತಂಡವನ್ನು 86 ರನ್‌ಗಳಿಗೆ ಕೊಂಡೊಯ್ದರು. ಇಶಾನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, 24 ಎಸೆತಗಳಲ್ಲಿ 61 ರನ್‌ಗಳಿಸಿ ಔಟಾದರು. ಅವರ ನಂತರ ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 52 ರನ್‌ಗಳ ಬಿರುಸಿನ ಆಟವಾಡಿದರು. ಆದಾಗ್ಯೂ, ಕೊನೆಯ 2 ಓವರ್‌ಗಳಲ್ಲಿ ಟೀಂ ಇಂಡಿಯಾ ಕೇವಲ 10 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತು. ನಮೀಬಿಯಾ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಗರಿಷ್ಠ 4 ವಿಕೆಟ್‌ಗಳನ್ನು ಪಡೆದರು.

IND vs NAM: 6,6,6,6,6.. 24 ಎಸೆತಗಳಲ್ಲಿ 61 ಚಚ್ಚಿದ ಇಶಾನ್ ಕಿಶನ್

ನಮೀಬಿಯಾಗೆ 93 ರನ್ ಸೋಲು

ಈ ಗುರಿ ಬೆನ್ನಟ್ಟಿದ ನಮೀಬಿಯಾ ಪವರ್‌ಪ್ಲೇನಲ್ಲಿ 57 ರನ್‌ಗಳನ್ನು ಗಳಿಸುವ ಮೂಲಕ ಸ್ಫೋಟಕ ಆರಂಭವನ್ನು ಪಡೆದುಕೊಂಡಿತು. ಆರಂಭಿಕರಾದ ಜಾನ್ ಫ್ರೈಲಿಂಕ್ ಮತ್ತು ಲಾರೆನ್ ಸ್ಟೀನ್‌ಕ್ಯಾಂಪ್ ಉತ್ತಮ ಜೊತೆಯಾಟ ಕಟ್ಟಿದರು. ಆದಾಗ್ಯೂ, ಪವರ್‌ಪ್ಲೇ ಮುಗಿದ ನಂತರ, ನಮೀಬಿಯಾದ ಇನ್ನಿಂಗ್ಸ್ ಕುಸಿಯಿತು. ವರುಣ್ ಚಕ್ರವರ್ತಿ ಸತತ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಪಡೆದರು. ನಂತರ ಅಕ್ಷರ್ ಪಟೇಲ್ ಎರಡು ವಿಕೆಟ್‌ಗಳನ್ನು ಪಡೆದರು. ಹಾಗೆಯೇ ಹಾರ್ದಿಕ್ ಪಾಂಡ್ಯ 18 ನೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದು ನಮೀಬಿಯಾದ ಸೋಲನ್ನು ಖಚಿತಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 pm, Thu, 12 February 26

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ