
ಬಹುನಿರೀಕ್ಷಿತ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 4 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಾಣಿಸಿಕೊಂಡಿದ್ದು, ಹೀಗಾಗಿ ಮೊದಲ ಸುತ್ತಿನಲ್ಲೇ ಬದ್ಧ ವೈರಿಗಳ ಮುಖಾಮುಖಿಯನ್ನು ವೀಕ್ಷಿಸಬಹುದು.
ಪಾಕಿಸ್ತಾನ್ ಅಲ್ಲದೆ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್ಎ, ನಮೀಬಿಯಾ ಮತ್ತು ನೆದರ್ಲೆಂಡ್ಸ್ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…
ಈ ನಾಲ್ಕು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ 4 ಗ್ರೂಪ್ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಅದರಂತೆ ಮೊದಲ ಸುತ್ತಿನ ಬಳಿಕ ಸೂಪರ್-8 ಹಂತದ ಮುಖಾಮುಖಿ ಶುರುವಾಗಲಿದೆ. ಸೂಪರ್-8 ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆಯಲಿದೆ.
ಸೆಮಿಫೈನಲ್ ಪಂದ್ಯಗಳಿಗೆ ಮುಂಬೈ ಮತ್ತು ಕೊಲ್ಕತ್ತಾ ನಗರಗಳನ್ನು ಆಯ್ಕೆ ಮಾಡಲಾಗಿದೆ. ಒಂದು ವೇಳೆ ಪಾಕಿಸ್ತಾನ್ ತಂಡವು ಸೆಮಿಫೈನಲ್ಗೆ ಪ್ರವೇಶಿಸಿದರೆ ಆ ಪಂದ್ಯವನ್ನು ಕೊಲಂಬೊದಲ್ಲಿ ಆಡಲಾಗುತ್ತದೆ. ಇದರಿಂದ ಕೊಲ್ಕತ್ತಾದ ಸೆಮಿಫೈನಲ್ ಆತಿಥ್ಯ ಕೈ ತಪ್ಪಬಹುದು.
ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯವು ಮಾರ್ಚ್ 8 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ. ಅತ್ತ ಪಾಕಿಸ್ತಾನ್ ತಂಡವು ಫೈನಲ್ಗೇರಿದರೆ ಅಂತಿಮ ಹಣಾಹಣಿ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ.
ಇದನ್ನೂ ಓದಿ: ವಿರಾಟ್ ಕೊಹ್ಲಿಯ ಮತ್ತೊಂದು ವಿಶ್ವ ದಾಖಲೆಯನ್ನ ಸರಿಗಟ್ಟಿದ ಬಾಬರ್ ಆಝಂ
___________________
___________________
___________________
___________________
Published On - 10:31 am, Tue, 25 November 25