AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: 2026 ರ ಟಿ20 ವಿಶ್ವಕಪ್​ಗೆ ದಿನಾಂಕ ನಿಗದಿ; ಫೈನಲ್ ಆತಿಥ್ಯ ಕೈಜಾರುವ ಭಯದಲ್ಲಿ ಭಾರತ

T20 World Cup 2026: 2026ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ ಎಂದು ESPNcricinfo ವರದಿ ಮಾಡಿದೆ. ಐಸಿಸಿ ಈ ಮಾಹಿತಿಯನ್ನು 20 ತಂಡಗಳಿಗೂ ತಿಳಿಸಿದೆ ಎನ್ನಲಾಗಿದೆ. ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲಂಬೊದಲ್ಲಿ ನಡೆಯುವ ಸಾಧ್ಯತೆಯಿದೆ. ಈಗಾಗಲೇ 15 ತಂಡಗಳು ಈ ಟೂರ್ನಿಗೆ ಅರ್ಹತೆ ಪಡೆದಿವೆ.

T20 World Cup 2026: 2026 ರ ಟಿ20 ವಿಶ್ವಕಪ್​ಗೆ ದಿನಾಂಕ ನಿಗದಿ; ಫೈನಲ್ ಆತಿಥ್ಯ ಕೈಜಾರುವ ಭಯದಲ್ಲಿ ಭಾರತ
T20 World Cup 2026
ಪೃಥ್ವಿಶಂಕರ
|

Updated on:Sep 09, 2025 | 8:20 PM

Share

ಇಂದಿನಿಂದ ಯುಎಇಯಲ್ಲಿ ಟಿ20 ಏಷ್ಯಾಕಪ್ (Asia Cup 2025) ಆರಂಭವಾಗುತ್ತಿದೆ. ವಾಸ್ತವವಾಗಿ ಮುಂದಿನ ವರ್ಷ ಟಿ20 ವಿಶ್ವಕಪ್ (T20 World Cup 2026) ನಡೆಯುತ್ತಿರುವುದರಿಂದ ಏಷ್ಯಾಕಪ್ ಅನ್ನು ಟಿ20 ಮಾದರಿಯಲ್ಲಿ ನಡೆಸಲಾಗುತ್ತಿದೆ. ಈ ನಡುವೆ ಮುಂದಿನ ವರ್ಷ ಅಂದರೆ 2026 ರಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ ಬಗ್ಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ 2026 ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗಲಿದ್ದು, ಅದರ ಫೈನಲ್ ಪಂದ್ಯ ಮಾರ್ಚ್​ 8 ರಂದು ನಡೆಯಲಿದೆ. ಈ ಬಗ್ಗೆ ಈ ವಿಶ್ವಕಪ್​ನಲ್ಲಿ ಭಾಗವಹಿಸುವ ಎಲ್ಲಾ 20 ತಂಡಗಳಿಗೂ ಐಸಿಸಿ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಆದಾಗ್ಯೂ ಈ ಬಗ್ಗೆ ಐಸಿಸಿಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಂದಿಲ್ಲ.

2026 ರ ಟಿ20 ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿದೆ. ಕಳೆದ ಬಾರಿಯಂತೆ, ಈ ಬಾರಿಯೂ ಒಟ್ಟು 20 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಈ ಪಂದ್ಯಾವಳಿಗಾಗಿ ಐಸಿಸಿ ಈಗಾಗಲೇ ಸಿದ್ಧತೆಗಳನ್ನು ತೀವ್ರಗೊಳಿಸಿದೆ. 2026 ರ ಟಿ20 ವಿಶ್ವಕಪ್ ಫೆಬ್ರವರಿಯಲ್ಲಿ ಆರಂಭವಾಗಿ ಮಾರ್ಚ್​ನಲ್ಲಿ ಅಂತ್ಯವಾಗಲಿದೆ ಎಂದು ಈ ಮೊದಲೇ ವರದಿಯಾಗಿತ್ತು. ಅದರಂತೆ ಈಗ ಯಾವ ದಿನದಿಂದ ಶುರುವಾಗಲಿದೆ ಎಂಬ ಮಾಹಿತಿ ಸಿಕ್ಕಿದೆ.

2026 ರ ಟಿ20 ವಿಶ್ವಕಪ್ ದಿನಾಂಕ ನಿಗದಿ

ಮೇಲೆ ಹೇಳಿದಂತೆ ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ, 2026 ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿದೆ. ಅಲ್ಲದೆ ಭಾರತದ ಐದು ಸ್ಥಳಗಳು ಮತ್ತು ಶ್ರೀಲಂಕಾದಲ್ಲಿ ಎರಡು ಸ್ಥಳಗಳು ಈ ವಿಶ್ವಕಪ್​ಗೆ ಆತಿಥ್ಯ ನೀಡಲಿವೆ. ಆದಾಗ್ಯೂ, ಯಾವ ಪಂದ್ಯವನ್ನು ಎಲ್ಲಿ ನಡೆಸಬೇಕೆಂದು ಇನ್ನೂ ನಿರ್ಧರಿಸಲಾಗಿಲ್ಲ. ಐಸಿಸಿ ಇನ್ನೂ ವೇಳಾಪಟ್ಟಿಯನ್ನು ಅಂತಿಮಗೊಳಿಸುತ್ತಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸುವ ದೇಶಗಳಿಗೆ ಈ ಬಗ್ಗೆ ತಿಳಿಸಿದೆ ಎಂದು ವರದಿಯಾಗಿದೆ.

2026 ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯವನ್ನು ಎಲ್ಲಿ ನಡೆಸಬೇಕೆಂದು ಇನ್ನೂ ನಿರ್ಧರಿಸಲಾಗಿಲ್ಲ. ವರದಿಗಳ ಪ್ರಕಾರ, ಪಾಕಿಸ್ತಾನ ಫೈನಲ್ ತಲುಪುತ್ತದೆಯೋ ಇಲ್ಲವೋ ಎಂಬುದರ ಆಧಾರದ ಮೇಲೆ ಫೈನಲ್ ಅಹಮದಾಬಾದ್ ಅಥವಾ ಕೊಲಂಬೊದಲ್ಲಿ ನಡೆಯಲಿದೆ. ಪಾಕಿಸ್ತಾನ ಫೈನಲ್‌ಗೆ ಅರ್ಹತೆ ಪಡೆದರೆ, ಈ ಪಂದ್ಯವನ್ನು ಭಾರತದಲ್ಲಿ ಆಡಲಾಗುವುದಿಲ್ಲ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ರಾಜಕೀಯ ಸಂಬಂಧಗಳಿಂದಾಗಿ, ಎರಡೂ ತಂಡಗಳು ಪರಸ್ಪರರ ದೇಶಗಳಲ್ಲಿ ಆಡುತ್ತಿಲ್ಲ. ಹೀಗಾಗಿ ಪಾಕಿಸ್ತಾನ ಫೈನಲ್​ಗೆ ಅರ್ಹತೆ ಪಡೆದರೆ, ಆ ಪಂದ್ಯ ಶ್ರೀಲಂಕಾದಲ್ಲಿ ನಡೆಯಲಿದೆ. ಒಂದು ವೇಳೆ ಪಾಕ್ ತಂಡ ಫೈನಲ್​ಗೆ ಬರದಿದ್ದರೆ, ಈ ಪಂದ್ಯ ಭಾರತದಲ್ಲಿ ನಡೆಯಲಿದೆ.

ಇಲ್ಲಿಯವರೆಗೆ 15 ತಂಡಗಳು ಅರ್ಹತೆ ಪಡೆದಿವೆ

ಇಲ್ಲಿಯವರೆಗೆ, 15 ತಂಡಗಳು 2026 ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿವೆ. ಭಾರತ, ಶ್ರೀಲಂಕಾ, ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಅಮೆರಿಕ, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ನೆದರ್ಲ್ಯಾಂಡ್ಸ್ ಮತ್ತು ಇಟಲಿ ತಮ್ಮ ಸ್ಥಾನವನ್ನು ಖಚಿತಪಡಿಸಿವೆ. ಉಳಿದ 5 ತಂಡಗಳಲ್ಲಿ, ಎರಡು ತಂಡಗಳು ಆಫ್ರಿಕಾ ಅರ್ಹತಾ ಸುತ್ತಿನಿಂದ ಮತ್ತು ಮೂರು ಏಷ್ಯಾ ಮತ್ತು ಪೂರ್ವ ಏಷ್ಯಾ ಪೆಸಿಫಿಕ್ ಅರ್ಹತಾ ಸುತ್ತಿನಿಂದ ಬರುತ್ತವೆ. ಈ ಪಂದ್ಯಾವಳಿಯನ್ನು 2024 ರ ಟಿ20 ವಿಶ್ವಕಪ್‌ನಂತೆಯೇ ಆಡಲಾಗುತ್ತದೆ. 20 ತಂಡಗಳನ್ನು ತಲಾ ಐದು ತಂಡಗಳ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ನಂತರ ಪ್ರತಿ ಗುಂಪಿನಿಂದ 2 ತಂಡಗಳು ಸೂಪರ್-8 ಗೆ ಅರ್ಹತೆ ಪಡೆಯುತ್ತವೆ. ನಂತರ ನಾಕೌಟ್ ಪಂದ್ಯಗಳನ್ನು ಆಡಲಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Tue, 9 September 25

Follow Us
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!