AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ ಆದ ಬಾಯ್ಕಾಟ್: ಭಾರತ vs ಪಾಕಿಸ್ತಾನ್ ಪಂದ್ಯ ಕನ್ಫರ್ಮ್​

India vs Pakistan: ಭಾರತದ ವಿರುದ್ಧ ಪಂದ್ಯವನ್ನು ಬಾಯ್ಕಾಟ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಯೂಟರ್ನ್ ಹೊಡೆದಿದೆ. ಈ ಯೂಟರ್ನ್​ನೊಂದಿಗೆ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯುವುದು ಸಹ ಖಚಿತವಾಗಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಫೆಬ್ರವರಿ 12 ರಂದು ನಮೀಬಿಯ ತಂಡವನ್ನು ಎದುರಿಸಲಿದೆ.

ಕಟ್ ಆದ ಬಾಯ್ಕಾಟ್: ಭಾರತ vs ಪಾಕಿಸ್ತಾನ್ ಪಂದ್ಯ ಕನ್ಫರ್ಮ್​
IND vs PAK
ಝಾಹಿರ್ ಯೂಸುಫ್
|

Updated on: Feb 10, 2026 | 8:58 AM

Share

ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುಬುದು ಖಚಿತವಾಗಿದೆ. ಇದಕ್ಕೂ ಮುನ್ನ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿಕೊಂಡಿತ್ತು. ಇದೀಗ ಪಿಸಿಬಿಯ ಮನವೊಲಿಸುವಲ್ಲಿ ಐಸಿಸಿ ಯಶಸ್ವಿಯಾಗಿದ್ದು, ಅದರಂತೆ ಫೆ.15 ರಂದು ಉಭಯ ತಂಡಗಳು ಕಣಕ್ಕಿಳಿಯಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರ ಮಾಡಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಆಗ್ರಹಿಸಿತ್ತು.

ಆದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಅಲ್ಲದೆ ಬಾಂಗ್ಲಾ ತಂಡವು ಭಾರತದಲ್ಲೇ ಆಡಬೇಕೆಂದು ಸೂಚಿಸಿದ್ದರು. ಐಸಿಸಿಯ ಈ ಸೂಚನೆಯನ್ನು ತಿರಸ್ಕರಿಸಿದ್ದರಿಂದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಕೈ ಬಿಡಲಾಯಿತು.

ಇತ್ತ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವ ಐಸಿಸಿ ಹಾಗೂ ಬಿಸಿಸಿಐ ಕ್ರಮಕ್ಕೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ನಡೆಯನ್ನು ಖಂಡಿಸುವ ಸಲುವಾಗಿ  ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಿಸಿಬಿ ತಿಳಿಸಿತ್ತು.

ಇತ್ತ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯದೇ ಇದ್ದರೆ ಐಸಿಸಿ ಆದಾಯಕ್ಕೆ ಆರ್ಥಿಕ ನಷ್ಟ ಉಂಟಾಗಲಿದೆ. ಹೀಗಾಗಿ ಇದೀಗ ಐಸಿಸಿ ಅಧಿಕಾರಿಗಳು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸುವ ಕಾಯಕಕ್ಕೆ ಕೈ ಹಾಕಿದ್ದರು. ಅದರಂತೆ ಇದೀಗ ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡುವ ಮೂಲಕ ಐಸಿಸಿ ಪಿಸಿಬಿಯ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದರೊಂದಿಗೆ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ನಡೆಯುವುದು ಖಚಿತವಾಗಿದೆ. ಅದರಂತೆ ಮುಂದಿನ ಭಾನುವಾರ ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದು ಬಹುತೇಕ ಖಚಿತವಾಗಲಿದೆ.

ಇದನ್ನೂ ಓದಿ: ಮುಂದಿನ ವಿಶ್ವಕಪ್‌ನಲ್ಲಿ ವೈಭವ್ ಸೂರ್ಯವಂಶಿಗೆ ಇಲ್ಲ ಅವಕಾಶ..!

ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಆಡಬೇಕಿದೆ. ಹೀಗಾಗಿ ಈ ಮ್ಯಾಚ್​ಗೂ ಮುನ್ನ ಭಾರತ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More