ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ

T20 World Cup 2026: 20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ಉಳಿದಿರುವುದು ಕೇವಲ 5 ಟೀಮ್​ಗಳು ಮಾತ್ರ. ಈ ಐದು ತಂಡಗಳಲ್ಲಿ ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೇರಿದೆ. ಇನ್ನು ವೆಸ್ಟ್ ಇಂಡೀಸ್ ಮತ್ತು ಭಾರತ ನಡುವಣ ಪಂದ್ಯದಲ್ಲಿ ಗೆಲ್ಲುವ ತಂಡ ಮುಂದಿನ ಹಂತಕ್ಕೇರಲಿದೆ.

ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ
T20 World Cup 2026

Updated on: Mar 01, 2026 | 7:31 AM

T20 World Cup 2026: ಟಿ20 ವಿಶ್ವಕಪ್​ 2026 ರ ಸೂಪರ್-8 ಸುತ್ತಿನ ಪಂದ್ಯಗಳು ಇಂದು ಪೂರ್ಣಗೊಳ್ಳಲಿದೆ. ದ್ವಿತೀಯ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳಾವುವು ಎಂಬುದು ಖಚಿತವಾಗಲಿದೆ. ಅಂದರೆ ಈಗಾಗಲೇ ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ಸೆಮಿಫೈನಲ್​ಗೇರಿದ್ದು, ನಾಲ್ಕನೇ ತಂಡವಾಗಿ ಭಾರತ ಅಥವಾ ವೆಸ್ಟ್ ಇಂಡೀಸ್​ ನಾಕೌಟ್ ಹಂತಕ್ಕೇರಲಿದೆ.

ಅತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಸೆಮಿಫೈನಲ್ ವೇಳಾಪಟ್ಟಿ ಕೂಡ ಪ್ರಕಟವಾಗಿದೆ. ಅಂದರೆ ಪಾಕ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದ್ದರೆ ಮೊದಲ ಸೆಮಿಫೈನಲ್ ಪಂದ್ಯವನ್ನು ಶ್ರೀಲಂಕಾದಲ್ಲಿ ಆಯೋಜಿಸಬೇಕಿತ್ತು.

ಇದೀಗ ಪಾಕ್ ಪಡೆ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಹಿನ್ನಲೆ ನಾಕೌಟ್ ಪಂದ್ಯಗಳು ಭಾರತದಲ್ಲೇ ನಡೆಯುವುದು ಖಚಿತವಾಗಿದೆ. ಅದರಂತೆ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಎಲ್ಲಿ ನಡೆಯಲಿದೆ ಎಂಬುದನ್ನು ಐಸಿಸಿ ಅಧಿಕೃತಗೊಳಿಸಿದೆ.

ಯಾವ ಸ್ಟೇಡಿಯಂಗಳಲ್ಲಿ ಸೆಮಿ ಕದನ?

  • ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯವಹಿಸಲಿದೆ.
  • ದ್ವಿತೀಯ ಸೆಮಿಫೈನಲ್ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ.

ಫೈನಲ್ ಫೈಟ್ ಎಲ್ಲಿ?

ಮಾರ್ಚ್ 8 ರಂದು ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಸೆಮಿಫೈನಲ್ ವೇಳಾಪಟ್ಟಿ:

  • ಮಾರ್ಚ್ 4, ಮೊದಲ ಸೆಮಿಫೈನಲ್: ಸೌತ್ ಆಫ್ರಿಕಾ vs ನ್ಯೂಝಿಲೆಂಡ್ (ಈಡನ್ ಗಾರ್ಡನ್ಸ್ ಮೈದಾನ, ಕೊಲ್ಕತ್ತಾ)
  • ಮಾರ್ಚ್ 5, ದ್ವಿತೀಯ ಸೆಮಿಫೈನಲ್: ಇಂಗ್ಲೆಂಡ್ vs ಭಾರತ ಅಥವಾ ವೆಸ್ಟ್ ಇಂಡೀಸ್ (ವಾಂಖೆಡೆ ಸ್ಟೇಡಿಯಂ, ಮುಂಬೈ)

ಎಷ್ಟು ಗಂಟೆಗೆ ಮ್ಯಾಚ್ ಶುರು?

ಟಿ20 ವಿಶ್ವಕಪ್ ಎರಡು ಸೆಮಿಫೈನಲ್ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಶುರುವಾಗಲಿದೆ.

ಇದನ್ನೂ ಓದಿ: T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

ಫೈನಲ್ ಪಂದ್ಯ ಯಾವಾಗ?

ಟಿ20 ವಿಶ್ವಕಪ್​ ಟೂರ್ನಿಯ ಮಹಾ ಫೈನಲ್ ಪಂದ್ಯವು ಮಾರ್ಚ್ 8, 2026 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕೂಡ ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ.

 

 

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us