ಆಸ್ಟ್ರೇಲಿಯಾಕ್ಕೆ ಬಿಗ್ ಶಾಕ್: ಸೂಪರ್ 8ಕ್ಕೆ ಏರಿದ ಜಿಂಬಾಬ್ವೆ
ಐಸಿಸಿ T20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ-ಐರ್ಲೆಂಡ್ ಪಂದ್ಯ ಮಳೆಯಿಂದ ರದ್ದಾಗಿದೆ. ಇದರಿಂದ ಎರಡೂ ತಂಡಗಳಿಗೆ ತಲಾ ಒಂದು ಅಂಕ ಲಭಿಸಿದ್ದು, ಜಿಂಬಾಬ್ವೆ 5 ಅಂಕಗಳೊಂದಿಗೆ ಸೂಪರ್ 8 ಹಂತಕ್ಕೆ ಅರ್ಹತೆ ಪಡೆದಿದೆ. ಅಚ್ಚರಿಯ ಬೆಳವಣಿಗೆಯಲ್ಲಿ, ಆಸ್ಟ್ರೇಲಿಯಾ ತಂಡವು ಕೇವಲ 2 ಅಂಕಗಳೊಂದಿಗೆ ಟೂರ್ನಿಯಿಂದ ಹೊರಬಿದ್ದಿದೆ. ಈ ಫಲಿತಾಂಶ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ಮೂಡಿಸಿದ್ದು, ಜಿಂಬಾಬ್ವೆ ತಂಡವು ಸೂಪರ್ 8 ಹಂತದಲ್ಲಿ ಭಾರತವನ್ನು ಎದುರಿಸುವ ಸಾಧ್ಯತೆ ಇದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಲ್ಲಿ (ICC T20 World Cup 2026) ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದೀಗ ಆಸ್ಟ್ರೇಲಿಯಾ ತಂಡವು ಟೂರ್ನಿಯಿಂದ ಹೊರಬಿದ್ದಿದೆ. ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ ಪಂದ್ಯವು ಸತತ ಮಳೆಯಿಂದಾಗಿ ರದ್ದಾಗಿದೆ. ಪಂದ್ಯ ರದ್ದಾದ ಕಾರಣ ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಯಿತು. ಇದರಿಂದ ಜಿಂಬಾಬ್ವೆ ಒಟ್ಟು 5 ಅಂಕಗಳನ್ನು ಗಳಿಸಿ ‘ಬಿ’ ಗುಂಪಿನಿಂದ ಸೂಪರ್ 8 ಹಂತಕ್ಕೆ ಅರ್ಹತೆ ಪಡೆದಿದೆ.
ಆಸ್ಟ್ರೇಲಿಯಾ ತಂಡವು ಈ ಬಾರಿಯ ವಿಶ್ವಕಪ್‌ನಿಂದ ಅಧಿಕೃತವಾಗಿ ಹೊರಬಿದ್ದಿದ್ದು, . ಆಸ್ಟ್ರೇಲಿಯಾ ಸದ್ಯ 3 ಪಂದ್ಯಗಳಿಂದ ಕೇವಲ 2 ಅಂಕಗಳನ್ನು ಹೊಂದಿದ್ದು, ಮುಂದಿನ ಓಮನ್ ವಿರುದ್ಧದ ಪಂದ್ಯ ಗೆದ್ದರೂ ಗರಿಷ್ಠ 4 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯ. ಜಿಂಬಾಬ್ವೆ ಈಗಾಗಲೇ 5 ಅಂಕ ತಲುಪಿರುವುದರಿಂದ ಆಸ್ಟ್ರೇಲಿಯಾಕ್ಕೆ ಅವಕಾಶ ಇರುವುದಿಲ್ಲ. ಶ್ರೀಲಂಕಾ ಈಗಾಗಲೇ ಸೂಪರ್ 8ಕ್ಕೆ ಅರ್ಹತೆ ಪಡೆದಿದೆ. ಜಿಂಬಾಬ್ವೆ 5 ಅಂಕಗಳೊಂದಿಗೆ ಸೂಪರ್ 8ಕ್ಕೆ ಅರ್ಹತೆ ಪಡೆದಿದೆ. ಆಸ್ಟ್ರೇಲಿಯಾ 2 ಅಂಕ ಪಡೆದಿರುವ ಕಾರಣ ಟೂರ್ನಿಯಿಂದ ಹೊರಕ್ಕೆ ಹೋಗಿದೆ. ಐರ್ಲೆಂಡ್ ಕೂಡ 2 ಅಂಕ ಪಡೆದಿರುವ ಕಾರಣ ಅದು ಟೂರ್ನಿಯಿಂದ ಹೊರಕ್ಕೆ.
ಈ ಫಲಿತಾಂಶವು ಕ್ರಿಕೆಟ್ ಲೋಕದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ನೆಚ್ಚಿನ ತಂಡವಾಗಿದ್ದ ಆಸ್ಟ್ರೇಲಿಯಾ ಹೊರಕ್ಕೆ ಹೋಗುವ ಕಾರಣ ಅಭಿಮಾನಿಗಳಿಗೆ ಆಘಾತ ತಂದಿದೆ. ಜಿಂಬಾಬ್ವೆ ತಂಡವು ಮುಂದಿನ ಹಂತದಲ್ಲಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳನ್ನು ಎದುರಿಸಲಿದೆ.
ಇದನ್ನೂ ಓದಿ: ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್: ಸೂಕ್ತ ಚಿಕಿತ್ಸೆ ನೀಡುವಂತೆ ಪಾಕ್ ಸರ್ಕಾರಕ್ಕೆ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮನವಿ
ಸೂಪರ್ 8 ಹಂತದಲ್ಲಿ ಭಾರತ ಮತ್ತು ಜಿಂಬಾಬ್ವೆ
ಟಿ20 ವಿಶ್ವಕಪ್ 2026ರ ಸೂಪರ್ 8 ಹಂತದಲ್ಲಿ ಭಾರತ ಮತ್ತು ಜಿಂಬಾಬ್ವೆ ಮುಖಾಮುಖಿಯಾಗುವುದು ಈಗ ಬಹುತೇಕ ಖಚಿತವಾಗಿದೆ. ಆಸ್ಟ್ರೇಲಿಯಾ ತಂಡ ಹೊರ ಹೋಗಿರುವ ಕಾರಣ ಈ ಸ್ಥಾನವನ್ನು ಜಿಂಬಾಬ್ವೆ ತುಂಬಾಲಿದೆ.
ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:26 pm, Tue, 17 February 26
