
T20 World Cup 2026: ಟಿ20 ವಿಶ್ವಕಪ್‌ನ ಮೊದಲ ಸುತ್ತಿನ ಪಂದ್ಯಗಳು ಮುಗಿದಿದೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 8 ಟೀಮ್ಗಳು ಸೂಪರ್-8 ಸುತ್ತಿಗೆ ಪ್ರವೇಶಿಸಿದೆ. ಈ ಎಂಟು ತಂಡಗಳನ್ನು 2 ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ದ್ವಿತೀಯ ಸುತ್ತಿನಲ್ಲಿ ಗ್ರೂಪ್ಗಳಲ್ಲಿರುವ ತಂಡಗಳ ನಡುವೆ ಸೆಣಸಾಟ ನಡೆಯಲಿದೆ.
ಇಲ್ಲಿ ಭಾರತ ತಂಡವು ಗ್ರೂಪ್-1 ರಲ್ಲಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಇದೇ ಮಾದರಿಯಲ್ಲಿ ಗ್ರೂಪ್-2 ನಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.
ಅದರಂತೆ ದ್ವಿತೀಯ ಸುತ್ತಿನಲ್ಲಿ ಒಂದು ತಂಡವು ಒಟ್ಟು 3 ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 4 ಟೀಮ್ಗಳು ಸೆಮಿಫೈನಲ್ಗೇರಲಿದೆ.
ಒಂದು ವೇಳೆ ಪಂದ್ಯಗಳಿಗೆ ಮಳೆ ಅಡಚಣೆ ಉಂಟು ಮಾಡಿದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ..
ಇತ್ತ ಭಾರತ ತಂಡವು ತನ್ನೆಲ್ಲಾ ಪಂದ್ಯಗಳನ್ನು ಭಾರತದಲ್ಲೇ ಆಡಲಿದೆ. ಹೀಗಾಗಿ ಮಳೆ ಭೀತಿ ಇಲ್ಲ ಎಂದೇ ಹೇಳಬಹುದು. ಆದರೆ ಶ್ರೀಲಂಕಾದಲ್ಲಿ ನಡೆಯಲಿರುವ ನ್ಯೂಝಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಪಂದ್ಯಗಳಿಗೆ ಮಳೆ ಆತಂಕ ಎದುರಾಗಿದೆ.
ಇದನ್ನೂ ಓದಿ: ‘ಹೈದರಾಬಾದ್’ ತಂಡಕ್ಕೆ ಗ್ಲೆನ್ ಮ್ಯಾಕ್ಸ್ವೆಲ್ ಡೈರೆಕ್ಟ್ ಎಂಟ್ರಿ
ಏಕೆಂದರೆ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಝಿಂಬಾಬ್ವೆ ಹಾಗೂ ಐರ್ಲೆಂಡ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಹಾಗೆಯೇ ಕೆಲ ಪಂದ್ಯಗಳು ಮಳೆಯಿಂದಾಗಿ ವಿಳಂಬವಾಗಿತ್ತು. ಹೀಗಾಗಿ ಗ್ರೂಪ್-2 ನಲ್ಲಿರುವ ತಂಡಗಳ ಪಂದ್ಯಗಳಿಗೆ ಮಳೆ ಅಡಚಣೆ ಉಂಟು ಮಾಡುವ ಸಾಧ್ಯತೆಯಿದೆ.
Published On - 11:53 am, Sat, 21 February 26