
T20 World Cup 2026: ಟಿ20 ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಇಂದು (ಫೆ.15) ನಡೆಯಲಿರುವ ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಉಭಯ ತಂಡಗಳ ಆಟಗಾರರು ಹ್ಯಾಂಡ್ ಮಾಡಲಿದ್ದಾರಾ ಎಂಬುದೇ ಈಗ ಕುತೂಹಲ.
ಏಕೆಂದರೆ ಕಳೆದ ವರ್ಷ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಟೀಮ್ ಇಂಡಿಯಾ ಆಟಗಾರರು ಪಾಕಿಸ್ತಾನ್ ಆಟಗಾರರೊಂದಿಗೆ ಹಸ್ತಲಾಘವ ಮಾಡಿಲ್ಲ. ಅದರಲ್ಲೂ ಕಳೆದ ಏಷ್ಯಾ ಕಪ್ 2025 ರ ಸಮಯದಲ್ಲಿ ಭಾರತೀಯ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಹಸ್ತಲಾಘವ ಮಾಡದೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಾರಿಯೂ ಅದೇ ನಿಲುವು ಮುಂದುವರಿಯುತ್ತದೆಯೇ ಎಂಬುದು ಕುತೂಹಲ.
ಫೆಬ್ರವರಿ 14 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಉಭಯ ತಂಡಗಳ ನಾಯಕರು ಈ ಹಸ್ತಲಾಘವ ಮಾಡುವ ಬಗ್ಗೆ ಸ್ಪಷ್ಟ ಉತ್ತರ ನೀಡಿಲ್ಲ.
ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯನ್ನು ಇತ್ತೀಚೆಗಷ್ಟೇ ಐಸಿಸಿ ಮನವೊಲಿಸಿತ್ತು. ಈ ವೇಳೆ ಪಿಸಿಬಿ ಕೆಲ ಬೇಡಿಕೆಗಳನ್ನು ಮುಂದಿಟ್ಡಿದ್ದರು. ಈ ಬೇಡಿಕೆಗಳಲ್ಲಿ ಹ್ಯಾಂಡ್ ಶೇಕ್ ಕಡ್ಡಾಯ ಮಾಡಬೇಕೆಂದು ತಿಳಿಸಲಾಗಿತ್ತು.
ಕ್ರೀಡೆಯಲ್ಲಿ ರಾಜಕೀಯ ಬೆರೆಸಬಾರದು. ಭಾರತ ಮತ್ತು ಪಾಕಿಸ್ತಾನ್ ಆಟಗಾರರು ಹಸ್ತಲಾಘವ ಮಾಡುವುದನ್ನು ಕಡ್ಡಾಯ ಮಾಡಬೇಕೆಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಗ್ರಹಿಸಿತ್ತು. ಇದಕ್ಕೆ ಐಸಿಸಿ ಕೂಡ ಸಮ್ಮತಿಸಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಭರ್ಜರಿ ಚೇಸಿಂಗ್… ವಿಶ್ವಕಪ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನೇಪಾಳ
ಹೀಗಾಗಿ ಐಸಿಸಿಯ ಶಿಷ್ಟಾಚಾರವನ್ನು ಮೀರದಂತೆ ಎರಡೂ ತಂಡಗಳ ನಾಯಕರುಗಳಿಗೆ ಐಸಿಸಿ ತಾಕೀತು ಮಾಡುವ ಸಾಧ್ಯತೆಯಿದೆ. ಅದರಂತೆ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಟಾಸ್ ವೇಳೆ ಸೂರ್ಯಕುಮಾರ್ ಯಾದವ್ ಹಾಗೂ ಸಲ್ಮಾನ್ ಅಲಿ ಅಘಾ ಹ್ಯಾಂಡ್ ಶೇಕ್ ಮಾಡವು ಸಾಧ್ಯತೆ ಹೆಚ್ಚಿದೆ.