AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup Qualifier: 39 ರನ್​ಗಳಿಗೆ ಆಲೌಟ್: ಥೈಲ್ಯಾಂಡ್​ಗೆ 101 ರನ್​ಗಳ ಭರ್ಜರಿ ಜಯ

T20 World Cup Asia Qualifier: ಮ್ಯಾನ್ಮಾರ್ ಬ್ಯಾಟರ್​ಗಳು ಕಲೆಹಾಕಿದ್ದು ಕೇವಲ 29 ರನ್​ಗಳು ಮಾತ್ರ. ಇನ್ನುಳಿದ 10 ರನ್​ಗಳನ್ನು ಥೈಲ್ಯಾಂಡ್ ಬೌಲರ್​ಗಳು ಅತಿರಿಕ್ತವಾಗಿ ನೀಡಿದ್ದರು.

T20 World Cup Qualifier: 39 ರನ್​ಗಳಿಗೆ ಆಲೌಟ್: ಥೈಲ್ಯಾಂಡ್​ಗೆ 101 ರನ್​ಗಳ ಭರ್ಜರಿ ಜಯ
Myanmar vs Thailand
TV9 Web
| Edited By: |

Updated on: Jul 29, 2023 | 3:53 PM

Share

T20 World Cup Asia Qualifier 2023: ಟಿ20 ವಿಶ್ವಕಪ್​ ಏಷ್ಯಾ ಕ್ವಾಲಿಫೈಯರ್-B ವಿಭಾಗದಲ್ಲಿ ನಡೆದ 5ನೇ ಪಂದ್ಯದಲ್ಲಿ ಥೈಲ್ಯಾಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮ್ಯಾನ್ಮಾರ್ ತಂಡವು ಮೊದಲು ಬೌಲಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಥೈಲ್ಯಾಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. 36 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಥೈಲ್ಯಾಂಡ್ ತಂಡಕ್ಕೆ ಈ ಹಂತದಲ್ಲಿ ಜೆ ಕೋಟ್ಜಿ ಹಾಗೂ ರಾಬರ್ಟ್ ರೈನಾ ಆಸರೆಯಾದರು.

29 ಎಸೆತಗಳನ್ನು ಎದುರಿಸಿದ ಜೆ ಕೋಟ್ಜಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 40 ರನ್ ಬಾರಿಸಿದರೆ, ರಾಬರ್ಟ್ ರೈನಾ 30 ಎಸೆತಗಳಲ್ಲಿ 7 ಫೋರ್​ಗಳೊಂದಿಗೆ 42 ರನ್ ಕಲೆಹಾಕಿದರು. ಈ ಮೂಲಕ ಥೈಲ್ಯಾಂಡ್ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 140 ರನ್​ ಕಲೆಹಾಕಿತು.

141 ರನ್​ಗಳ ಸುಲಭ ಗುರಿ ಬೆನ್ನತ್ತಿದ ಮ್ಯಾನ್ಮಾರ್ ತಂಡವು ಖಾತೆ ತೆರೆಯುವ ಮುನ್ನವೇ ಮೊದಲ ವಿಕೆಟ್ ಕಳೆದುಕೊಂಡಿತು. ಅಲ್ಲದೆ ನಾಲ್ಕನೇ ಓವರ್​ನಲ್ಲಿ ಕೇವಲ 8 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಅತ್ತ ರನ್​ಗಳಿಸಲು ಪರದಾಡಿದ ಮ್ಯಾನ್ಮಾರ್ ಬ್ಯಾಟರ್​ಗಳು ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಲ್ಲುವ ಪ್ರಯತ್ನ ಮಾಡಿದರು.

ಅದರಂತೆ 10 ಓವರ್​ಗಳನ್ನು ಎದುರಿಸಿದ ಮ್ಯಾನ್ಮಾರ್ ತಂಡವು 26 ರನ್​ಗಳಿಸಿತು. ಆದರೆ ಅದಾಗಲೇ 6 ವಿಕೆಟ್​ಗಳನ್ನು ಕಳೆದುಕೊಂಡಿದ್ದರು. ಅಂತಿಮವಾಗಿ 16 ಓವರ್​ಗಳಲ್ಲಿ ಮ್ಯಾನ್ಮಾರ್ ತಂಡವನ್ನು 39 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಥೈಲ್ಯಾಂಡ್ ಬೌಲರ್​ಗಳು ಯಶಸ್ವಿಯಾದರು.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ತಯಾರಿ ಶುರು..!

ಅಚ್ಚರಿ ಎಂದರೆ ಇಲ್ಲಿ ಮ್ಯಾನ್ಮಾರ್ ಬ್ಯಾಟರ್​ಗಳು ಕಲೆಹಾಕಿದ್ದು ಕೇವಲ 29 ರನ್​ಗಳು ಮಾತ್ರ. ಇನ್ನುಳಿದ 10 ರನ್​ಗಳನ್ನು ಥೈಲ್ಯಾಂಡ್ ಬೌಲರ್​ಗಳು ಅತಿರಿಕ್ತವಾಗಿ ನೀಡಿದ್ದರು. ಇನ್ನು ಈ ಪಂದ್ಯದಲ್ಲಿ ಮ್ಯಾನ್ಮಾರ್​ನ ಐವರು ಬ್ಯಾಟರ್​ಗಳು ಸೊನ್ನೆ ಸುತ್ತಿದ್ದರು. ಈ ಮೂಲಕ ಅತ್ಯುತ್ತಮ ದಾಳಿ ಸಂಘಟಿಸಿದ ಥೈಲ್ಯಾಂಡ್ ತಂಡವು 101 ರನ್​ಗಳ ಭರ್ಜರಿ ಜಯ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ