AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಆಸ್ಟ್ರೇಲಿಯಾ ವಿರುದ್ದದ ಫೈನಲ್ ಸೋಲಿನ ಸೇಡನ್ನು ತೀರಿಸಲಿದೆಯಾ ನ್ಯೂಜಿಲೆಂಡ್

Australia Vs New Zealand: ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಆರೋನ್ ಫಿಂಚ್ ಶೂನ್ಯಕ್ಕೆ ಔಟಾಗಿ ಶಾಕ್ ನೀಡಿದ್ದರು. ಆದರೆ ಡೇವಿಡ್ ವಾರ್ನರ್ (45) ಹಾಗೂ ಸ್ಟೀವ್ ಸ್ಮಿತ್ (56) ಅವರ ಎಚ್ಚರಿಕೆಯ ಆಟ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿತು.

T20 World Cup 2021: ಆಸ್ಟ್ರೇಲಿಯಾ ವಿರುದ್ದದ ಫೈನಲ್ ಸೋಲಿನ ಸೇಡನ್ನು ತೀರಿಸಲಿದೆಯಾ ನ್ಯೂಜಿಲೆಂಡ್
Australia Vs New Zealand
TV9 Web
| Updated By: ಝಾಹಿರ್ ಯೂಸುಫ್|

Updated on: Nov 13, 2021 | 3:51 PM

Share

ಅದು ಮಾರ್ಚ್ 29, 2015…ಮೆಲ್ಬೋರ್ನ್​ ಕ್ರಿಕೆಟ್​ ಮೈದಾನದಲ್ಲಿ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮುಖಾಮುಖಿಯಾಗಿತ್ತು. ಒಂದೆಡೆ ಬ್ರೆಂಡನ್ ಮೆಕಲಂ ನೇತೃತ್ವದ ಕಿವೀಸ್ ಪಡೆ ಇದ್ದರೆ, ಮತ್ತೊಂದೆಡೆ ಮೈಕಲ್ ಕ್ಲಾರ್ಕ್​ ಸಾರಥ್ಯದ ಆಸೀಸ್ ಪಡೆ ಅಂತಿಮ ಕದನಕ್ಕೆ ಸಜ್ಜಾಗಿತ್ತು. ಅಂದು ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮೆಕಲಂ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಮಿಚೆಲ್ ಸ್ಟಾರ್ಕ್​ ಎಂಬ ಯುವ ವೇಗಿಯ ಎಸೆತವನ್ನು ಗುರುತಿಸುವಲ್ಲಿ ಎಡವಿದ ಕ್ಲೀನ್ ಬೌಲ್ಡ್ ಆಗುವ ಮೂಲಕ ಶೂನ್ಯಕ್ಕೆ ಔಟಾದರು. ಇದರ ಬೆನ್ನಲ್ಲೇ ಮಾರ್ಟಿನ್ ಗಪ್ಟಿಲ್ ಹಾಗೂ ಕೇನ್ ವಿಲಿಯಮ್ಸನ್ ಕೂಡ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ರಾಸ್ ಟೇಲರ್ (40) ಹಾಗೂ ಗ್ರ್ಯಾಂಟ್ ಎಲಿಯೆಟ್ (83) ಉತ್ತಮ ಜೊತೆಯಾಟವಾಡಿದರು. ಅಂತಿಮವಾಗಿ ನ್ಯೂಜಿಲೆಂಡ್ ತಂಡವು 183 ರನ್​ಗಳಿಗೆ ಆಲೌಟ್ ಆಯಿತು.

ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಆರೋನ್ ಫಿಂಚ್ ಶೂನ್ಯಕ್ಕೆ ಔಟಾಗಿ ಶಾಕ್ ನೀಡಿದ್ದರು. ಆದರೆ ಡೇವಿಡ್ ವಾರ್ನರ್ (45) ಹಾಗೂ ಸ್ಟೀವ್ ಸ್ಮಿತ್ (56) ಅವರ ಎಚ್ಚರಿಕೆಯ ಆಟ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿತು. ಇನ್ನು ನಾಯಕ ಮೈಕೆಲ್ ಕ್ಲಾರ್ಕ್​ 74 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅದರಂತೆ ಆಸ್ಟ್ರೇಲಿಯಾ 33.1 ಓವರ್​ನಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳಿಂದ ಜಯಭೇರಿ ಬಾರಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿತು.

ಇದರೊಂದಿಗೆ ಮತ್ತೊಮ್ಮೆ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಮುಗ್ಗರಿಸಿದ ಅಪಕೀರ್ತಿ ನ್ಯೂಜಿಲೆಂಡ್ ಪಾಲಾಯಿತು. ಇದಕ್ಕೂ ಮುನ್ನ ನ್ಯೂಜಿಲೆಂಡ್ 1996 ರ ವಿಶ್ವಕಪ್ ಕ್ವಾರ್ಟರ್‌ಫೈನಲ್ ಮತ್ತು 2009 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ದ ಸೋಲನುಭವಿಸಿತ್ತು. ಇದೀಗ ಐದು ವರ್ಷಗಳ ಬಳಿಕ ಮತ್ತೆ ಉಭಯ ತಂಡಗಳು ಮುಖಾಮುಖಿಯಾಗುತ್ತಿದೆ. ಟಿ20 ವಿಶ್ವಕಪ್​​ನ ಫೈನಲ್​ ಪಂದ್ಯದಲ್ಲಿ ಎರಡೂ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ.

ಇಲ್ಲಿ ಮತ್ತೊಂದು ವಿಶೇಷ ಎಂದರೆ ಈ ಬಾರಿ ಗೆದ್ದ ತಂಡವು ಚೊಚ್ಚಲ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಲಿರುವುದು. ಅಂದರೆ ಉಭಯ ತಂಡಗಳು ಇದುವರೆಗೆ ಟಿ20 ವಿಶ್ವಕಪ್​ ಗೆದ್ದಿಲ್ಲ ಎಂಬುದು ವಿಶೇಷ. ಹೀಗಾಗಿ ಎರಡೂ ತಂಡಗಳಿಗೂ ಇದು ಮೊದಲ ಅವಕಾಶ. ಹಾಗಾಗಿ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

ಇಂಗ್ಲೆಂಡ್​ ವಿರುದ್ದದ 2019ರ ಏಕದಿನ ವಿಶ್ವಕಪ್​ ಫೈನಲ್ ಸೋಲಿನ ಸೇಡನ್ನು ಸೆಮಿಫೈನಲ್​ನಲ್ಲಿ ತೀರಿಸಿಕೊಂಡಿರುವ ನ್ಯೂಜಿಲೆಂಡ್​ಗೆ ಇದೀಗ ಮತ್ತೊಂದು ಫೈನಲ್ ಸೋಲಿನ ಸೇಡನ್ನು ತೀರಿಸುವ ಅವಕಾಶ ಸಿಕ್ಕಿದೆ. ಅದರಂತೆ ಐದು ವರ್ಷಗಳ ಹಿಂದಿನ ಸೋಲಿನ ಸೇಡು ತೀರಿಸಿ ನ್ಯೂಜಿಲೆಂಡ್ ಹೊಸ ಇತಿಹಾಸ ಬರೆಯಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: India T20 squad: ಟೀಮ್ ಇಂಡಿಯಾಗೆ ಹೊಸ ನಾಯಕ: ಯುವ ಪಡೆಯನ್ನು ಪ್ರಕಟಿಸಿದ ಬಿಸಿಸಿಐ

(T20 World Cup: Australia Vs New Zealand Summit Clash To Be A Repeat Of 2015 WC Final)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ