New Zealand vs Australia: ಇಂದು ಟಿ20 ವಿಶ್ವಕಪ್ ಫೈನಲ್: ಚೊಚ್ಚಲ ಪ್ರಶಸ್ತಿಗಾಗಿ ನ್ಯೂಜಿಲೆಂಡ್- ಆಸ್ಟ್ರೇಲಿಯಾ ನಡುವೆ ಕಾದಾಟ

T20 World Cup Final, NZ vs AUS: ಉಭಯ ತಂಡಗಳಿಗೆ ಈ ಫೈನಲ್ ಪಂದ್ಯ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್‌ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ ತಲುಪಿದೆ. ಇತ್ತ ಆಸ್ಟ್ರೇಲಿಯಾ ತಂಡ ಕಳೆದ 2010ರಲ್ಲಿ ಫೈನಲ್‌ ತಲುಪಿತ್ತು ಹಾಗೂ ಇಂಗ್ಲೆಂಡ್‌ ವಿರುದ್ಧ ಸೋತು ರನ್ನರ್‌ ಅಪ್‌ಗೆ ತೃಪ್ತಿಪಟ್ಟುಕೊಂಡಿತ್ತು.

New Zealand vs Australia: ಇಂದು ಟಿ20 ವಿಶ್ವಕಪ್ ಫೈನಲ್: ಚೊಚ್ಚಲ ಪ್ರಶಸ್ತಿಗಾಗಿ ನ್ಯೂಜಿಲೆಂಡ್- ಆಸ್ಟ್ರೇಲಿಯಾ ನಡುವೆ ಕಾದಾಟ
T20 World Cup Final NZ vs AUS
Follow us
TV9 Web
| Updated By: Vinay Bhat

Updated on: Nov 14, 2021 | 7:26 AM

ಯುಎಇನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯು ಇದೀಗ ನಿರ್ಣಾಯಕ ಘಟ್ಟಕ್ಕೆ ತಲುಪಿದ್ದು, ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಚೊಚ್ಚಲ ಪ್ರಶಸ್ತಿಗಾಗಿ ಕೇನ್ ವಿಲಿಯಮ್ಸನ್ (Kane Williamson) ನೇತೃತ್ವದ ನ್ಯೂಜಿಲೆಂಡ್ ಮತ್ತು ಆ್ಯರೋನ್ ಫಿಂಚ್ (Aaron Finch) ನಾಯಕತ್ವದ ಆಸ್ಟ್ರೇಲಿಯಾ (New Zealand vs Australia) ತಂಡಗಳು ಕಾದಾಡಲಿವೆ. ಇಂದು ಹೊಸ ಚಾಂಪಿಯನ್ ಹುಟ್ಟಿಕೊಳ್ಳಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ (Dubai International Stadium) ಸಜ್ಜಾಗಿದೆ. ಸೆಮಿಫೈನಲ್‌ ಪಂದ್ಯಗಳಲ್ಲಿ ಒಂದೇ ಹಾದಿಯಲ್ಲಿ ಗೆದ್ದು ಬಂದಿರುವ ನೆರೆಹೊರೆಯ ಎದುರಾಳಿಗಳ ಕಾದಾಟ ಸಾಕಷ್ಟು ಕುತೂಹಲ ಕೆರಳಿಸಿವೆ.

ಉಭಯ ತಂಡಗಳಿಗೆ ಈ ಫೈನಲ್ ಪಂದ್ಯ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್‌ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ ತಲುಪಿದೆ. ಇತ್ತ ಆಸ್ಟ್ರೇಲಿಯಾ ತಂಡ ಕಳೆದ 2010ರಲ್ಲಿ ಫೈನಲ್‌ ತಲುಪಿತ್ತು ಹಾಗೂ ಇಂಗ್ಲೆಂಡ್‌ ವಿರುದ್ಧ ಸೋತು ರನ್ನರ್‌ ಅಪ್‌ಗೆ ತೃಪ್ತಿಪಟ್ಟುಕೊಂಡಿತ್ತು. ಐದು ಬಾರಿಯ ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ಈಗ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್‌ಗೆ ಲಗ್ಗೆಯಿಟ್ಟಿದೆ. ಹೀಗಾಗಿ ಇದುವರೆಗೆ ಎರಡೂ ತಂಡ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ.

ನ್ಯೂಜಿಲೆಂಡ್​ಗೆ ಗಾಯದ ಸಮಸ್ಯೆ ಹಿನ್ನಡೆಯಾಗುತ್ತಾ ಎಂಬುದು ನೋಡಬೇಕಿದೆ. ಯಾಕಂದ್ರೆ ಸೆಮಿಫೈನಲ್‌ ಹಣಾಹಣಿಯಲ್ಲಿ ಡೆವೊನ್‌ ಕಾನ್ವೇ ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಅವರು ಫೈನಲ್‌ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇವರ ಜಾಗದಲ್ಲಿ ಟಿಮ್‌ ಸೀಫರ್ಟ್ ಕಣಕ್ಕಿಳಿಯಬಹುದು. ಡ್ಯಾರಿಲ್‌ ಮಿಚೆಲ್‌ ಹಾಗೂ ಜಿಮ್ಮಿ ನೀಶಮ್‌ ಮೇಲೆ ತಂಡ ಸಾಕಷ್ಟು ನಂಬಿಕೆ ಇಟ್ಟಟುಕೊಂಡಿದೆ. ಮಾರ್ಟಿನ್‌ ಗಪ್ಟಿಲ್‌, ನಾಯಕ ಕೇನ್ ವಿಲಿಯಮ್ಸನ್‌, ಗ್ಲೆನ್‌ ಫಿಲಿಪ್ಸ್‌ ಒಳಗೊಂಡ ಕಿವೀಸ್‌ ಬ್ಯಾಟಿಂಗ್‌ ವಿಭಾಗ ಬಲಿಷ್ಠವಾಗಿದೆ. ಇನ್ನು ಬೌಲಿಂಗ್‌ ವಿಭಾಗದಲ್ಲಿ ಟ್ರೆಂಟ್‌ ಬೌಲ್ಟ್, ಟಿಮ್‌ ಸೌಥಿ, ಇಶ್‌ ಸೋಧಿ ಹಾಗೂ ಆಡಮ್‌ ಮಿಲ್ನೆ ಬೊಂಬಾಟ್ ಬೌಲಿಂಗ್ ಮಾಡುತ್ತಿದ್ದಾರೆ. ಅದರಲ್ಲೂ ಬೌಲ್ಟ್ ಹಾಗೂ ಸೌಥಿ ಪವರ್ ಪ್ಲೇನಲ್ಲಿ ಮಾರಕವಾಗಿ ಗೋಚರಿಸಿದ್ದಾರೆ.

ಇತ್ತ ಆಸ್ಟ್ರೇಲಿಯಾ ತಂಡಕ್ಕೆ ಡೇವಿಡ್‌ ವಾರ್ನರ್‌ ಫಾರ್ಮ್‌ಗೆ ಮರಳಿರುವುದು ಆಸ್ಟ್ರೇಲಿಯಾ ತಂಡದ ಬಲವನ್ನು ಹೆಚ್ಚಿಸಿದೆ. ಕಳೆದ ಪಂದ್ಯದಲ್ಲಿ ಪಾಕ್‌ ನೀಡಿದ್ದ 177 ರನ್‌ ಗುರಿಯನ್ನು ಆಸ್ಟ್ರೇಲಿಯಾ ವಾರ್ನರ್‌, ಮಾರ್ಕಸ್‌ ಸ್ಟೋಯ್ನಿಸ್‌ ಹಾಗೂ ಮ್ಯಾಥ್ಯೂ ವೇಡ್ ಅವರ ಸಹಾಯದಿಂದ ಸುಲಭವಾಗಿ ಮುಟ್ಟಿತ್ತು. ಇನ್ನು ಬೌಲಿಂಗ್‌ ವಿಭಾಗದಲ್ಲಿ ಸ್ಪಿನ್ನರ್‌ ಆ್ಯಡಂ ಝಾಂಪ, ಮಿಚೆಲ್‌ ಸ್ಟಾರ್ಕ್ ಹಾಗೂ ಪ್ಯಾಟ್‌ ಕಮಿನ್ಸ್‌ ಯಾವುದೇ ಸಂದರ್ಭದಲ್ಲಿ ವಿಕೆಟ್‌ ಉರುಳಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ.

ಒಟ್ಟಾರೆ ಉಭಯ ತಂಡಗಳೂ ಬಲಿಷ್ಠದಿಂದ ಕೂಡಿದೆ. ಆದರೆ, ಟಿ20 ವಿಶ್ವಕಪ್ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ನ್ಯೂಜಿಲೆಂಡ್ ಇದೆ. ವಿಶ್ವ ಕ್ರಿಕೆಟ್ ನಲ್ಲಿ ಈ ಹಿಂದೆ ಆಸ್ಟ್ರೇಲಿಯಾ ತಂಡ ಕ್ರೀಡೆಯ ಎಲ್ಲ ಮಾದರಿಗಳಲ್ಲೂ ಅಧಿಪತ್ಯ ಸಾಧಿಸಿ ಅಗ್ರ ಸ್ಥಾನದಲ್ಲಿತ್ತು. ಇದೀಗ ಆ ಸ್ಥಾನ ನ್ಯೂಜಿಲೆಂಡ್ ಬಳಿಯಿದ್ದು, ಚುಟುಕು ಕ್ರಿಕೆಟ್ ನಲ್ಲೂ ತನ್ನ ಹೋರಾಟದ ಮೂಲಕ ಫೈನಲ್ ತಲುಪಿರುವ ಕೇನ್ ವಿಲಿಯಮ್ಸನ್ ಪಡೆ ಟಿ20 ವಿಶ್ವಕಪ್ ಗೆದ್ದು ಅಗ್ರ ಸ್ಥಾನ ಪಡೆಯುವತ್ತ ದಿಟ್ಟ ಹೆಜ್ಜೆ ಇಟ್ಟಿದೆ.

ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಇದುವರೆಗೆ 2016 ರಲ್ಲಿ ಒಂದು ಬಾರಿ ಮಾತ್ರ ಮುಖಾಮುಖಿ ಆಗಿದೆ. ಇದರಲ್ಲಿ ನ್ಯೂಜಿಲೆಂಡ್ ಗೆದ್ದಿತ್ತು. ಒಟ್ಟಾರೆಯಾಗಿ ಉಭಯ ತಂಡಗಳು 14 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ನ್ಯೂಜಿಲೆಂಡ್ 5 ರಲ್ಲಿ ಗೆದ್ದರೆ, ಆಸ್ಟ್ರೇಲಿಯಾ 9 ಪಂದ್ಯಗಳಲ್ಲಿ ಜಯ ಸಾಧಿಸಿದ ಇತಿಹಾಸವಿದೆ.

Jimmy Neesham: ಸೆಮಿಫೈನಲ್​ ಗೆಲ್ಲಲು ನಾವು ಇಲ್ಲಿಗೆ ಬಂದಿಲ್ಲ, ಆಸ್ಟ್ರೇಲಿಯನ್ನರಿಗೆ ಎಚ್ಚರಿಕೆ..!

(T20 World Cup Final New Zealand vs Australia both of whom would be eyeing their maiden T20 WC title)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ