2024 ರ ಜೂನ್ ತಿಂಗಳಿನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್‌ಗೆ (ICC Men’s T20 World Cup 2024) ಅರ್ಹತಾ ಸುತ್ತಿನ ಪಂದ್ಯಗಳು ಈಗಾಗಲೇ ನಡೆಯುತ್ತಿವೆ. ಸದ್ಯ ತಮ್ಮ ಆರು ಪಂದ್ಯಗಳಲ್ಲಿ ಐದು ಗೆಲುವು ಸಾಧಿಸುವ ಮೂಲಕ ಉಗಾಂಡ ತಂಡ ಐಸಿಸಿ ಪುರುಷರ T20 ವಿಶ್ವಕಪ್ನಲ್ಲು ಅರ್ಹತೆ ಪಡೆದುಕೊಂಡಿದೆ. ಆ ಮೂಲಕ ಉಗಾಂಡ ತಂಡ ತಮ್ಮ ಮೊದಲ ಟಿ20 ವಿಶ್ವಕಪ್ ಪಂದ್ಯವನ್ನು ಆಡಲಿದೆ. ಆ ಮೂಲಕ ಉಗಾಂಡ ತಂಡ ಇತಿಹಾಸ ನಿರ್ಮಿಸಲು ಮುಂದಾಗಿದೆ. ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುವ ಐದನೇ ಆಫ್ರಿಕನ್ ರಾಷ್ಟ್ರವಾಗಿ ಉಗಾಂಡ ಹೊರಹೊಮ್ಮಿದೆ.
ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ ಕೇವಲ 65 ರನ್‌ಗಳಿಗೆ ಆಲೌಟ್ ಆಯಿತು. ಅಲ್ಪೇಶ್ ರಾಮ್ಜಾನಿ, ದಿನೇಶ್ ನಕ್ರಾಣಿ, ಹೆನ್ರಿ ಸೆನ್ಯೊಂಡೋ ಮತ್ತು ಬ್ರಿಯಾನ್ ಮಸಾಬಾ ತಲಾ ಎರಡು ವಿಕೆಟ್ ಪಡೆದುಕೊಂಡರು.
One for the history books ✍️
Uganda are going to their first-ever ICC World Cup! They qualify for the 2024 T20 World Cup along with Namibia. 👏🇺🇬
.
.#T20WorldCup2024 pic.twitter.com/M4kZVhEhU6— FanCode (@FanCode) November 30, 2023
ಜಿಂಬಾಬ್ವೆ ವಿರುದ್ಧ ಉಗಾಂಡ ಐದು ವಿಕೆಟ್‌ಗಳ ಜಯ ಸಾಧಿಸಿದೆ. ನಮೀಬಿಯಾ ಮತ್ತು ಉಗಾಂಡ ವಿರುದ್ಧ ಜಿಂಬಾಬ್ವೆ ಸೋಲಬೇಕಾಯಿತು. ಈ ಸೋಲು ವಿಶ್ವಕಪ್‌ನಿಂದ ಹೊರಗುಳಿಯಲು ಕಾರಣವಾಗಿದೆ. ಜಿಂಬಾಬ್ವೆ 2019ರ ವಿಶ್ವಕಪ್ ಮತ್ತು 2023ರ ವಿಶ್ವಕಪ್‌ಗೆ ಅರ್ಹತೆ ಪಡೆದುಕೊಂಡಿಲ್ಲ.
2024 T20 ವಿಶ್ವಕಪ್ ತಂಡಗಳು:
ಅಮೆರಿಕ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ, ನೆದರ್ಲ್ಯಾಂಡ್ಸ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್ಲೆಂಡ್, ಪಪುವಾ ನ್ಯೂಗಿನಿಯಾ, ಕೆನಡಾ, ನೇಪಾಳ, ಒಮನ್ ನಮೀಬಿಯಾ ಮತ್ತು ಉಗಾಂಡ ತಂಡಗಳು ಇಲ್ಲಿಯವರೆಗೆ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದುಕೊಂಡಿವೆ.
ಇದನ್ನೂ ಓದಿ: ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ನಮೀಬಿಯಾ; ಉಳಿದ 1 ಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ
ಈ ಬಾರಿಯ ಟೂರ್ನಿಯ ಆರಂಭದಲ್ಲಿ ತಲಾ ಐದು ತಂಡಗಳ ನಾಲ್ಕು ಗುಂಪುಗಳು ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 8 ಗೆ ಮುನ್ನಡೆಯುತ್ತವೆ. ಅಲ್ಲಿಂದ ಮತ್ತೆ ಸೂಪರ್ 8 ರ ಕೊನೆಯಲ್ಲಿ ಅಗ್ರ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ.
2024ರ ಟಿ20 ವಿಶ್ವಕಪ್‌ಗಾಗಿ ಆಫ್ರಿಕಾ ವಲಯದ ಅರ್ಹತಾ ಪಂದ್ಯಗಳನ್ನು 7 ತಂಡಗಳ ನಡುವೆ ಆಡಲಾಗುತ್ತಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:06 pm, Thu, 30 November 23