India vs Pakistan: ಭಾರತ-ಪಾಕ್ ಪಂದ್ಯದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧಾರವಾಗುವುದು ಹೇಗೆ?

T20 World Cup: ನಾಕೌಟ್ ಹಂತದಲ್ಲಿ ಮಳೆ ಬಂದರೆ ಮೀಸಲು ದಿನ ಇರಲಿದೆ. ಅಂದರೆ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳ ವೇಳೆ ಮಳೆ ಬಂದರೆ ಮರುದಿನ ಪಂದ್ಯವನ್ನು ಮುಂದುವರೆಸಲಾಗುತ್ತದೆ.

India vs Pakistan: ಭಾರತ-ಪಾಕ್ ಪಂದ್ಯದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧಾರವಾಗುವುದು ಹೇಗೆ?
IND vs PAK
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 16, 2022 | 11:33 PM

T20 World Cup: ಟಿ20 ವಿಶ್ವಕಪ್ ಆರಂಭದ ಬೆನ್ನಲ್ಲೇ ಇದೀಗ ಮಳೆಯ ಭೀತಿ ಎದುರಾಗಿದೆ. ಆಸ್ಟ್ರೇಲಿಯಾದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇದು ಟಿ20 ವಿಶ್ವಕಪ್​ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲೂ ಮೆಲ್ಬೋರ್ನ್​ನಲ್ಲಿ ಅಕ್ಟೋಬರ್ 23 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಮುಂದಿನ ಭಾನುವಾರ ಮೆಲ್ಬೋರ್ನ್​ ಸುತ್ತ ಮುತ್ತ ಶೇ.60 ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಇದರಿಂದ ಭಾರತ-ಪಾಕಿಸ್ತಾನ್ (India vs Pakistan) ನಡುವಣ ಪಂದ್ಯ ನಡೆಯುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಅಕ್ಟೋಬರ್ 23 ರಂದೇ ಭಾರತ-ಪಾಕಿಸ್ತಾನ್ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ಮುಖಾಮುಖಿಯಾಗಲಿದೆ. ಪ್ರಸ್ತುತ ಹವಾಮಾನ ವರದಿಯಂತೆ, ಒಂದು ವೇಳೆ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಫಲಿತಾಂಶ ಹೇಗೆ ನಿರ್ಧಾರವಾಗಲಿದೆ ಎಂಬ ಸಂಶಯ ಹಲವರಲ್ಲಿದೆ. ಈ ಎಲ್ಲಾ ಡೌಟ್​ಗಳಿಗೆ ಇಲ್ಲಿದೆ ಉತ್ತರ…

ಒಂದು ವೇಳೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಮಳೆ ಬಂದರೆ, ಓವರ್​ಗಳ ಕಡಿತದೊಂದಿಗೆ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಅಂದರೆ ಮಳೆಯಿಂದಾಗಿ ಪಂದ್ಯ ಶುರುವಾಗುವುದು ವಿಳಂಬವಾದರೆ ಅಥವಾ ಪಂದ್ಯ ನಡೆಯುತ್ತಿದ್ದ ವೇಳೆ ಮಳೆ ಬಂದರೆ ಓವರ್​ ಕಡಿಮೆಗೊಳಿಸಿ ಪಂದ್ಯವನ್ನು ನಡೆಸಲಾಗುತ್ತದೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಇದಾಗ್ಯೂ ನಿರಂತರ ಮಳೆಯಿಂದ ಅಡಚಣೆ ಉಂಟಾದರೆ ಪಂದ್ಯದ ನಿಗದಿತ ಸಮಯದವರೆಗೂ ಕಾಯಲಾಗುತ್ತದೆ. ಇದರ ನಡುವೆ ಮಳೆ ನಿಂತರೆ 5 ಓವರ್​ಗಳ ಪಂದ್ಯವನ್ನು ಆಯೋಜಿಸಲಾಗುತ್ತದೆ. ಅಂದರೆ ಐದೈದು ಓವರ್​ಗಳ ಪಂದ್ಯ ನಡೆಯಲಿದೆ. ಕನಿಷ್ಠ 5 ಓವರ್​ಗಳ ಪಂದ್ಯ ನಡೆಸಲು ಕೂಡ ಸಾಧ್ಯವಾಗದಿದ್ದರೆ ಮಾತ್ರ ಆ ಪಂದ್ಯವನ್ನು ರದ್ದು ಮಾಡಲಾಗುತ್ತದೆ. ಇಲ್ಲಿ ರದ್ದು ಮಾಡಿದರೆ ಮೀಸಲು ದಿನ ಇರುವುದಿಲ್ಲ. ಬದಲಾಗಿ ಉಭಯ ತಂಡಗಳಿಗೂ ತಲಾ 1 ಪಾಯಿಂಟ್ ನೀಡಲಾಗುತ್ತದೆ.

ಇನ್ನು ನಾಕೌಟ್ ಹಂತದಲ್ಲಿ ಮಳೆ ಬಂದರೆ ಮೀಸಲು ದಿನ ಇರಲಿದೆ. ಅಂದರೆ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳ ವೇಳೆ ಮಳೆ ಬಂದರೆ ಮರುದಿನ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಅಂದರೆ ಪಂದ್ಯ ಎಲ್ಲಿಗೆ ಸ್ಥಗಿತವಾಗಿರುತ್ತದೆಯೋ ಅಲ್ಲಿಂದಲೇ ಮರುದಿನ ಪಂದ್ಯ ಶುರುವಾಗಲಿದೆ.

ಉದಾಹರಣೆಗೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 15 ಓವರ್​ ಬ್ಯಾಟಿಂಗ್ ಮಾಡಿದ ವೇಳೆ ಮಳೆ ಬಂದರೆ, ಮರುದಿನ ಟೀಮ್ ಇಂಡಿಯಾಗೆ ಕೊನೆಯ 5 ಓವರ್​ ಬ್ಯಾಟ್ ಮಾಡಲು ಮಾತ್ರ ಅವಕಾಶ ಇರಲಿದೆ. ಬದಲಾಗಿ ಮತ್ತೆ ಆರಂಭದಿಂದ ಪಂದ್ಯ ಶುರುವಾಗುವುದಿಲ್ಲ.

ಅದಾಗ್ಯೂ ಮೀಸಲು ದಿನದಲ್ಲೂ ಸೆಮಿ ಫೈನಲ್​ ಪಂದ್ಯಗಳನ್ನು ನಡೆಸಲು ಸಾಧ್ಯವಾಗದಿದ್ದರೆ ಸೂಪರ್-12 ಹಂತದಲ್ಲಿ ಪಡೆದಿರುವ ಪಾಯಿಂಟ್​ಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ ಫೈನಲ್ ಆಡುವ ತಂಡಗಳನ್ನು ನಿರ್ಧರಿಸಲಾಗುತ್ತದೆ.

ಅಂದರೆ ಇಲ್ಲಿ ಸೂಪರ್-12 ಹಂತದಲ್ಲಿ ಯಾವುದೇ ಮೀಸಲು ದಿನ ಇರುವುದಿಲ್ಲ. ಹೀಗಾಗಿ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಮಳೆ ಬಂದರೆ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಓವರ್​ಗಳ ಕಡಿತದೊಂದಿಗೆ ಪಂದ್ಯವನ್ನು ಮುಂದುವರೆಸಲಾಗುತ್ತದೆ.

ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಕನಿಷ್ಠ 5 ಓವರ್​ಗಳ ಪಂದ್ಯ ನಡೆಸಿದ್ರೆ ಮಾತ್ರ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಇದರ ಹೊರತಾಗಿ ಸೂಪರ್ ಓವರ್​ ಇರುವುದಿಲ್ಲ. ಇನ್ನು 5 ಓವರ್​ಗಳ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಮಾತ್ರ ಆ ಮ್ಯಾಚ್​ ಅನ್ನು ರದ್ದುಗೊಳಿಸಿ ಉಭಯ ತಂಡಗಳಿಗೆ ತಲಾ ಒಂದೊಂದು ಪಾಯಿಂಟ್ ನೀಡಲಾಗುತ್ತದೆ.

ಹೀಗಾಗಿ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಮಳೆ ಅಡಚಣೆ ಉಂಟಾದರೆ, ಪಂದ್ಯಕ್ಕಾಗಿ ನಿಗದಿ ಮಾಡಲಾದ ಸಮಯದವರೆಗೂ ಕಾದು ನೋಡಲಿದ್ದಾರೆ. ಹಾಗಾಗಿ ಕನಿಷ್ಠ 5 ಓವರ್​ಗಳ ಪಂದ್ಯವನ್ನಾದರೂ ಕ್ರಿಕೆಟ್ ಪ್ರೇಮಿಗಳು ಎದುರು ನೋಡಬಹುದು.

Published On - 10:10 pm, Sun, 16 October 22

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?