AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Pak, T20 World Cup LIVE Streaming: ಭಾರತ-ಪಾಕ್ ಪಂದ್ಯ ಯಾವಾಗ, ಎಲ್ಲಿ, ಯಾವ ಸಮಯದಲ್ಲಿ ಆರಂಭ? ಇಲ್ಲಿದೆ ಮಾಹಿತಿ

Ind vs Pak, T20 World Cup: ದುಬೈನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ನೇರ ಪ್ರಸಾರವನ್ನು 200 ದೇಶಗಳಲ್ಲಿ ಮಾಡಲಾಗುವುದು. ಭಾನುವಾರ ಭಾರತ ತಂಡ ಮೈದಾನಕ್ಕಿಳಿದರೆ, ಅದು ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತನ್ನ ವಿಜಯದ ಅಭಿಯಾನವನ್ನು ಮುಂದುವರಿಸಲು ಪ್ರಯತ್ನಿಸುತ್ತದೆ.

Ind vs Pak, T20 World Cup LIVE Streaming: ಭಾರತ-ಪಾಕ್ ಪಂದ್ಯ ಯಾವಾಗ, ಎಲ್ಲಿ, ಯಾವ ಸಮಯದಲ್ಲಿ ಆರಂಭ? ಇಲ್ಲಿದೆ ಮಾಹಿತಿ
ಇಂಡಿಯಾ ಮತ್ತು ಪಾಕಿಸ್ತಾನ ತಂಡ
TV9 Web
| Updated By: ಪೃಥ್ವಿಶಂಕರ|

Updated on: Oct 24, 2021 | 3:35 PM

Share

ಭಾರತೀಯ ಅಭಿಮಾನಿಗಳು ಬಹುದಿನಗಳಿಂದ ಕಾಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಇಂದು ಭರ್ಜರಿ ಪಂದ್ಯವೊಂದು ನಡೆಯಲಿದೆ. ಟೀಮ್ ಇಂಡಿಯಾ ಇಂದು ಸೂಪರ್ 12 ರಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಸುಮಾರು ಎರಡು ವರ್ಷಗಳ ನಂತರ, ಈ ಎರಡು ತಂಡಗಳು ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಟೂರ್ನಿಯ ಈ ಹೈವೋಲ್ಟೇಜ್ ಪಂದ್ಯಕ್ಕೆ ವಿಶೇಷ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ದುಬೈನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ನೇರ ಪ್ರಸಾರವನ್ನು 200 ದೇಶಗಳಲ್ಲಿ ಮಾಡಲಾಗುವುದು. ಭಾನುವಾರ ಭಾರತ ತಂಡ ಮೈದಾನಕ್ಕಿಳಿದರೆ, ಅದು ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತನ್ನ ವಿಜಯದ ಅಭಿಯಾನವನ್ನು ಮುಂದುವರಿಸಲು ಪ್ರಯತ್ನಿಸುತ್ತದೆ.

ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಐದು ಬಾರಿ ಮುಖಾಮುಖಿಯಾಗಿವೆ. ಈ ಎಲ್ಲ ಪಂದ್ಯಗಳನ್ನು ಭಾರತ ಗೆದ್ದಿದೆ. ನಾವು ಟಿ 20 ಯಲ್ಲಿ ಎರಡೂ ತಂಡಗಳ ಒಟ್ಟಾರೆ ದಾಖಲೆಯನ್ನು ನೋಡಿದರೆ, ಭಾರತ-ಪಾಕಿಸ್ತಾನ 8 ಪಂದ್ಯಗಳನ್ನು ಆಡಿದೆ ಮತ್ತು ಭಾರತ ತಂಡವು ಏಳು ಪಂದ್ಯಗಳನ್ನು ಗೆದ್ದಿದೆ, ಆದರೆ ಪಾಕಿಸ್ತಾನ ಕೇವಲ ಒಂದು ಬಾರಿ ಗೆದ್ದಿದೆ. ಭಾರತ ತನ್ನ ಎರಡೂ ಅಭ್ಯಾಸ ಪಂದ್ಯಗಳನ್ನು ಗೆದ್ದಿದೆ. ಟೀಮ್ ಇಂಡಿಯಾ ಮೊದಲ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದರೆ, ಪಾಕಿಸ್ತಾನದ ತಂಡ ಒಂದು ಪಂದ್ಯವನ್ನು ಗೆದ್ದಿತು ಮತ್ತು ಒಂದು ಪಂದ್ಯದಲ್ಲಿ ಸೋತಿತು. ವಿಂಡೀಸ್ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ, ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿತು.

2021 ರ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಯಾವಾಗ ಮುಖಾಮುಖಿಯಾಗುತ್ತವೆ? ಭಾರತ ಮತ್ತು ಪಾಕಿಸ್ತಾನದ ತಂಡಗಳು ಅಕ್ಟೋಬರ್ 24 ರಂದು (ಭಾನುವಾರ) ಮುಖಾಮುಖಿಯಾಗಲಿವೆ

ಭಾರತ ಮತ್ತು ಪಾಕಿಸ್ತಾನ ನಡುವಿನ T20 ವಿಶ್ವಕಪ್ 2021 ಪಂದ್ಯ ಎಲ್ಲಿ ನಡೆಯಲಿದೆ? ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ 2021 ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ T20 ವಿಶ್ವಕಪ್ 2021 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಟಿ 20 ವಿಶ್ವಕಪ್ 2021 ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7.30 ಕ್ಕೆ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಟಾಸ್ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ಪಂದ್ಯದ ನೇರ ಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು? ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ನೋಡಬಹುದು.

ಭಾರತ vs ಪಾಕಿಸ್ತಾನ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ನೋಡಬಹುದು? ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಚಂದಾದಾರಿಕೆಯೊಂದಿಗೆ ಪಂದ್ಯವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು. ಇದಲ್ಲದೇ ಪಂದ್ಯದ ಲೈವ್ ಅಪ್‌ಡೇಟ್‌ಗಳನ್ನು tv9kannada.com ನಲ್ಲಿಯೂ ಓದಬಹುದು.

ತಂಡಗಳು ಕೆಳಕಂಡಂತಿವೆ: ಭಾರತ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ವರುಣ್ ಚಕ್ರವರ್ತಿ, ರಾಹುಲ್ ಚಹರ್

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಮ್, ಶಾದಾಬ್ ಖಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಶಾ ಆಫ್ರಿದಿ, ಹೈದರ್ ಅಲಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ