ಭಾರತೀಯ ಅಭಿಮಾನಿಗಳು ಬಹುದಿನಗಳಿಂದ ಕಾಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಇಂದು ಭರ್ಜರಿ ಪಂದ್ಯವೊಂದು ನಡೆಯಲಿದೆ. ಟೀಮ್ ಇಂಡಿಯಾ ಇಂದು ಸೂಪರ್ 12 ರಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಸುಮಾರು ಎರಡು ವರ್ಷಗಳ ನಂತರ, ಈ ಎರಡು ತಂಡಗಳು ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಟೂರ್ನಿಯ ಈ ಹೈವೋಲ್ಟೇಜ್ ಪಂದ್ಯಕ್ಕೆ ವಿಶೇಷ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ದುಬೈನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ನೇರ ಪ್ರಸಾರವನ್ನು 200 ದೇಶಗಳಲ್ಲಿ ಮಾಡಲಾಗುವುದು. ಭಾನುವಾರ ಭಾರತ ತಂಡ ಮೈದಾನಕ್ಕಿಳಿದರೆ, ಅದು ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತನ್ನ ವಿಜಯದ ಅಭಿಯಾನವನ್ನು ಮುಂದುವರಿಸಲು ಪ್ರಯತ್ನಿಸುತ್ತದೆ.
ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಐದು ಬಾರಿ ಮುಖಾಮುಖಿಯಾಗಿವೆ. ಈ ಎಲ್ಲ ಪಂದ್ಯಗಳನ್ನು ಭಾರತ ಗೆದ್ದಿದೆ. ನಾವು ಟಿ 20 ಯಲ್ಲಿ ಎರಡೂ ತಂಡಗಳ ಒಟ್ಟಾರೆ ದಾಖಲೆಯನ್ನು ನೋಡಿದರೆ, ಭಾರತ-ಪಾಕಿಸ್ತಾನ 8 ಪಂದ್ಯಗಳನ್ನು ಆಡಿದೆ ಮತ್ತು ಭಾರತ ತಂಡವು ಏಳು ಪಂದ್ಯಗಳನ್ನು ಗೆದ್ದಿದೆ, ಆದರೆ ಪಾಕಿಸ್ತಾನ ಕೇವಲ ಒಂದು ಬಾರಿ ಗೆದ್ದಿದೆ. ಭಾರತ ತನ್ನ ಎರಡೂ ಅಭ್ಯಾಸ ಪಂದ್ಯಗಳನ್ನು ಗೆದ್ದಿದೆ. ಟೀಮ್ ಇಂಡಿಯಾ ಮೊದಲ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದರೆ, ಪಾಕಿಸ್ತಾನದ ತಂಡ ಒಂದು ಪಂದ್ಯವನ್ನು ಗೆದ್ದಿತು ಮತ್ತು ಒಂದು ಪಂದ್ಯದಲ್ಲಿ ಸೋತಿತು. ವಿಂಡೀಸ್ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ, ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿತು.
2021 ರ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಯಾವಾಗ ಮುಖಾಮುಖಿಯಾಗುತ್ತವೆ?
ಭಾರತ ಮತ್ತು ಪಾಕಿಸ್ತಾನದ ತಂಡಗಳು ಅಕ್ಟೋಬರ್ 24 ರಂದು (ಭಾನುವಾರ) ಮುಖಾಮುಖಿಯಾಗಲಿವೆ
ಭಾರತ ಮತ್ತು ಪಾಕಿಸ್ತಾನ ನಡುವಿನ T20 ವಿಶ್ವಕಪ್ 2021 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ 2021 ಪಂದ್ಯವು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ T20 ವಿಶ್ವಕಪ್ 2021 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ಟಿ 20 ವಿಶ್ವಕಪ್ 2021 ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7.30 ಕ್ಕೆ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಟಾಸ್ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ಪಂದ್ಯದ ನೇರ ಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ನೋಡಬಹುದು.
ಭಾರತ vs ಪಾಕಿಸ್ತಾನ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ನೋಡಬಹುದು?
ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಚಂದಾದಾರಿಕೆಯೊಂದಿಗೆ ಪಂದ್ಯವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು. ಇದಲ್ಲದೇ ಪಂದ್ಯದ ಲೈವ್ ಅಪ್‌ಡೇಟ್‌ಗಳನ್ನು tv9kannada.com ನಲ್ಲಿಯೂ ಓದಬಹುದು.
ತಂಡಗಳು ಕೆಳಕಂಡಂತಿವೆ:
ಭಾರತ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ವರುಣ್ ಚಕ್ರವರ್ತಿ, ರಾಹುಲ್ ಚಹರ್
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಮ್, ಶಾದಾಬ್ ಖಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಶಾ ಆಫ್ರಿದಿ, ಹೈದರ್ ಅಲಿ