AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Points Table T20 World Cup: ಯಾವ ತಂಡ ಅಗ್ರಸ್ಥಾನದಲ್ಲಿದೆ?: ಇಲ್ಲಿದೆ ನೋಡಿ ಟಿ20 ವಿಶ್ವಕಪ್​ನ ಪಾಯಿಂಟ್ ಟೇಬಲ್

T20 World Cup Points Table: ನ್ಯೂಜಿಲೆಂಡ್ ಮತ್ತು ಭಾರತ ಒಂದು ಪಂದ್ಯವನ್ನಷ್ಟೆ ಆಡಿದೆ. ಅದರಲ್ಲಿ ಸೋಲು ಕಂಡಿದ್ದು  ಖಾತೆ ತೆರೆಯದೆ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದೆ. ಸ್ಕಾಟ್ಲೆಂಡ್ ಆಡಿದ ಎರಡು ಪಂದ್ಯಗಳಲ್ಲಿ ಎರಡರಲ್ಲೂ ಸೋತಿದೆ. 6ನೇ ಸ್ಥಾನದಲ್ಲಿದೆ.

Points Table T20 World Cup: ಯಾವ ತಂಡ ಅಗ್ರಸ್ಥಾನದಲ್ಲಿದೆ?: ಇಲ್ಲಿದೆ ನೋಡಿ ಟಿ20 ವಿಶ್ವಕಪ್​ನ ಪಾಯಿಂಟ್ ಟೇಬಲ್
T20 World Cup Points Table
TV9 Web
| Updated By: Vinay Bhat|

Updated on: Oct 30, 2021 | 10:29 AM

Share

ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾಟೂರ್ನಿ ರಂಗೇರುತ್ತಿದೆ. ಈಗಾಗಲೇ ಪಾಕಿಸ್ತಾನ (Pakistan) ತಂಡ ಭಾರತ (Team India), ನ್ಯೂಜಿಲೆಂಡ್ (New Zealand) ಮತ್ತು ಅಫ್ಘಾನಿಸ್ತಾನವನ್ನು ಸೋಲಿಸಿ ಸೆಮಿ ಫೈನಲ್ ಹಂತಕ್ಕೆ ಬಹುತೇಕ ಕಾಲಿಟ್ಟಿದೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ (Australia vs England) ನಡುವೆ ಕಠಿಣ ಪೈಪೋಟಿ ಏರ್ಪಟ್ಟಿದ್ದು, ಇಂದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ವಿರಾಟ್ ಕೊಹ್ಲಿ (VIRAT KOHLI ಪಡೆ ಈ ವರೆಗೆ ಕೇವಲ ಒಂದು ಪಂದ್ಯವನ್ನಷ್ಟೆ ಆಡಿದೆ. ನಾಳೆ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಕಣಕ್ಕಿಳಿಯಲಿದ್ದು, ಮಹತ್ವದ ಪಂದ್ಯವಾಗಲಿದೆ. ಹಾಗಾದ್ರೆ ಸದ್ಯದ ಟಿ20 ವಿಶ್ವಕಪ್ ಪಾಯಿಂಟ್ ಟೇಬಲ್ ಹೇಗಿದೆ? (T20 World Cup Points Table), ಯಾವ ತಂಡ ಅತಿ ಹೆಚ್ಚು ಪಂದ್ಯ ಗೆದ್ದಿದೆ ಎಂಬುದನ್ನು ನೋಡೋಣ.

ಗ್ರೂಪ್ 1 ಮತ್ತು ಗ್ರೂಪ್ 2 ಎಂಬ ಎರಡು ವಿಭಾಗಗಳಿವೆ. ಈ ಪೈಕಿ ಗ್ರೂಪ್ 1 ರಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳಿವೆ. ಇದರಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಆಡಿದ ಎರಡೂ ಪಂದ್ಯವನ್ನು ಗೆದ್ದು ಬೀಗಿದೆ. ಆದರೆ, ರನ್​ರೇಟ್ ಆಧಾರದ ಮೇಲೆ ಆಂಗ್ಲರು 4 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸೀಸ್ 4 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ಇದ್ದು, ಒಂದು ಪಂದ್ಯ ಸೋತು ಒಂದು ಪಂದ್ಯ ಗೆದ್ದು 2 ಅಂಕ ಸಂಪಾದಿಸಿದೆ. ಇತ್ತ ಶ್ರೀಲಂಕಾ ಸ್ಥಿತಿಕೂಡ ಇದೇರೀತಿಯಿದ್ದು 4ನೇ ಸ್ಥಾನದಲ್ಲಿದೆ.

ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ಪೈಕಿ, ಬಾಂಗ್ಲಾ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಆಡಿದ ಮೂರೂ ಪಂದ್ಯಗಳಲ್ಲಿ ಬಾಂಗ್ಲಾ ಸೋಲು ಕಂಡಿದೆ. ವೆಸ್ಟ್ ಇಂಡೀಸ್ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಜಯ ಕಂಡು ಟೂರ್ನಿಯಲ್ಲಿ ಇನ್ನೂ ಜೀವಂತವಾಗಿದೆ.

ಇನ್ನು ಗ್ರೂಪ್ 2 ರಲ್ಲಿ ಪಾಕಿಸ್ತಾನ, ಭಾರತ, ಅಫ್ಘಾನಿಸ್ತಾನ, ನಮಿಬಿಯಾ, ನ್ಯೂಜಿಲೆಂಡ್, ಸ್ಕಾಟ್ಲೆಂಡ್ ತಂಡಗಳಿವೆ. ಇದರಲ್ಲಿ ಪಾಕಿಸ್ತಾನ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಸೆಮಿ ಫೈನಲ್ ಹಂತಕ್ಕೇರುವುದು ಖಚಿತ ಪಡಿಸಿದೆ. 6 ಅಂಕ ಸಂಪಾದಿಸಿರುವ ಪಾಕ್ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಅಫ್ಘಾನಿಸ್ತಾನ ತಂಡವಿದ್ದು ಆಡಿದ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದು 2 ಪಾಯಿಂಟ್ ತನ್ನ ಖಾತೆಯಲ್ಲಿ ಸೇರಿಸಿಕೊಂಡಿದೆ. ಮೂರನೇ ಸ್ಥಾನದಲ್ಲಿ ನಮಿಬಿಯಾ ತಂಡವಿದ್ದು ಆಡಿದ ಒಂದು ಪಂದ್ಯದಲ್ಲಿ ಜಯ ಕಂಡಿದೆ.

ನ್ಯೂಜಿಲೆಂಡ್ ಮತ್ತು ಭಾರತ ಒಂದು ಪಂದ್ಯವನ್ನಷ್ಟೆ ಆಡಿದೆ. ಅದರಲ್ಲಿ ಸೋಲು ಕಂಡಿದ್ದು  ಖಾತೆ ತೆರೆಯದೆ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದೆ. ಸ್ಕಾಟ್ಲೆಂಡ್ ಆಡಿದ ಎರಡು ಪಂದ್ಯಗಳಲ್ಲಿ ಎರಡರಲ್ಲೂ ಸೋತಿದೆ. 6ನೇ ಸ್ಥಾನದಲ್ಲಿದೆ.

T20 World Cup: ಟಿ20 ವಿಶ್ವಕಪ್​ನಲ್ಲಿಂದು ಎರಡು ಕದನ: ನಿರ್ಣಾಯಕ ಪಂದ್ಯದಲ್ಲಿ ದ. ಆಫ್ರಿಕಾ-ಶ್ರೀಲಂಕಾ ಮುಖಾಮುಖಿ

Asif Ali: ಗೆಲ್ಲಲು ಬೇಕಾಗಿದ್ದು 24 ರನ್: ಒಂದೇ ಓವರ್​ನಲ್ಲಿ 4 ಸಿಕ್ಸರ್ ಸಿಡಿಸಿ ಪಂದ್ಯ ಫಿನಿಶ್ ಮಾಡಿದ ಅಸಿಫ್ ಅಲಿ

(T20 World Cup Points Table Pakistan consolidates top spot in Group 2 move one step closer to semis)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ