AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಬ್ಯಾಟ್ಸ್‌ಮನ್​ಗಳು ಶೂನ್ಯಕ್ಕೆ ಔಟ್; 13 ಎಸೆತಗಳಲ್ಲೇ ಪಂದ್ಯ ಮುಕ್ತಾಯ

T20 World Cup Qualifiers: ಮಲೇಷ್ಯಾದ UKM ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದ ಮಂಗೋಲಿಯಾ ತಂಡ 31 ರನ್​ಗಳಿಗೆ ಆಲೌಟ್ ಆದರೆ, ಈ ಗುರಿ ಬೆನ್ನಟ್ಟಿದ ಮಲೇಷ್ಯಾ ತಂಡ ಕೇವಲ 13 ಎಸೆತಗಳಲ್ಲಿ ಪಂದ್ಯವನ್ನು ಗೆದ್ದುಕೊಂಡಿತು.

6 ಬ್ಯಾಟ್ಸ್‌ಮನ್​ಗಳು ಶೂನ್ಯಕ್ಕೆ ಔಟ್; 13 ಎಸೆತಗಳಲ್ಲೇ ಪಂದ್ಯ ಮುಕ್ತಾಯ
ಮಂಗೋಲಿಯಾ ತಂಡ
ಪೃಥ್ವಿಶಂಕರ
|

Updated on:Sep 09, 2024 | 10:40 PM

Share

ಕೆಲವೇ ಕೆಲವು ದಿನಗಳ ಹಿಂದೆ ಟಿ20 ಕ್ರಿಕೆಟ್​ನಲ್ಲಿ ಕೇವಲ 17 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಎರಡನೇ ಬಾರಿಗೆ ಅತ್ಯಂತ ಕಡಿಮೆ ಮೊತ್ತಕ್ಕೆ ಇನ್ನಿಂಗ್ಸ್ ಮುಗಿಸಿದ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದ ಮಂಗೋಲಿಯಾ ತಂಡ ಇದೀಗ ಮತ್ತೊಮ್ಮೆ ಮುಜುಗರದ ಸೋಲಿಗೆ ಕೊರಳೊಡ್ಡಿದೆ. ಮಲೇಷ್ಯಾದ UKM ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದ ಮಂಗೋಲಿಯಾ ತಂಡ 31 ರನ್​ಗಳಿಗೆ ಆಲೌಟ್ ಆದರೆ, ಈ ಗುರಿ ಬೆನ್ನಟ್ಟಿದ ಮಲೇಷ್ಯಾ ತಂಡ ಕೇವಲ 13 ಎಸೆತಗಳಲ್ಲಿ ಪಂದ್ಯವನ್ನು ಗೆದ್ದುಕೊಂಡಿತು.

16 ಓವರ್‌ಗಳಲ್ಲಿ ಕೇವಲ 31 ರನ್

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಂಗೋಲಿಯಾ 16.1 ಓವರ್‌ ಬ್ಯಾಟಿಂಗ್ ಮಾಡಿ ಕೇವಲ 31 ರನ್ ಗಳಿಸಿತು. ವಿಶೇಷವೆಂದರೆ ತಂಡದ 6 ಬ್ಯಾಟ್ಸ್‌ಮನ್‌ಗಳು ಖಾತೆ ತೆರೆಯಲೂ ಸಾಧ್ಯವಾಗದೆ ಶೂನ್ಯಕ್ಕೆ ಪೆವಿಲಿಯನ್‌ ಸೇರಿಕೊಂಡರು. 26 ಎಸೆತಗಳಲ್ಲಿ 8 ರನ್ ಬಾರಿಸಿದ ಆರಂಭಿಕ ಮೋಹನ್ ವಿವೇಕಾನಂದನ್ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಇವರನ್ನು ಬಿಟ್ಟರೆ ಬೇರೆ ಯಾವುದೇ ಬ್ಯಾಟ್ಸ್‌ಮನ್‌ಗಳು 4 ರನ್‌ಗಳಿಗಿಂತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಕುತೂಹಲಕಾರಿ ಸಂಗತಿಯೆಂದರೆ ಒಬ್ಬ ಮಂಗೋಲಿಯನ್ ಬ್ಯಾಟ್ಸ್‌ಮನ್ ಮಾತ್ರ ಈ ಪಂದ್ಯದಲ್ಲಿ ಏಕೈಕ ಬೌಂಡರಿ ಬಾರಿಸಿದ್ದು, ಎನ್ಖ್ಬತ್ ಬತ್ಖುಯಾಗ್ 5 ಎಸೆತಗಳಲ್ಲಿ ಒಂದು ಬೌಂಡರಿ ಸಹಿತ 4 ರನ್ ಕಲೆಹಾಕಿದರು.

ವಿರಂದೀಪ್ ಸಿಂಗ್ ಅದ್ಭುತ ಬೌಲಿಂಗ್

ಮಲೇಷ್ಯಾ ಪರ ವೀರನ್ ದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿದರು. ತಮ್ಮ ಖೋಟಾದ 4 ಓವರ್‌ಗಳಲ್ಲಿ ಕೇವಲ 5 ರನ್ ನೀಡಿ 4 ವಿಕೆಟ್ ಪಡೆದರು. ಇವರಲ್ಲದೆ ರಿಜ್ವಾನ್ ಹೈದರ್, ಪವನ್‌ದೀಪ್ ಸಿಂಗ್, ವಿಜಯ್ ಉನ್ನಿ, ಮುಹಮ್ಮದ್ ಆಮಿರ್ ಮತ್ತು ಸೈಯದ್ ಅಜೀಜ್ ತಲಾ ಒಂದು ವಿಕೆಟ್ ಪಡೆದರು.

ಸೈಯದ್ ಅಜೀಜ್ ಸ್ಫೋಟಕ ಬ್ಯಾಟಿಂಗ್

ಮಂಗೋಲಿಯಾ ನೀಡಿದ 31 ರನ್​ಗಳ ಗುರಿ ಬೆನ್ನಟ್ಟಿದ ಮಲೇಷ್ಯಾ ಪರ ನಾಯಕ ಸೈಯದ್ ಅಜೀಜ್ ಅದ್ಭುತ ಬ್ಯಾಟಿಂಗ್ ಮಾಡಿದರು. ಕೇವಲ 11 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಿತ 281.82 ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 31 ರನ್ ಸಿಡಿಸಿದರು. ಉಳಿದಂತೆ ಜುಬೈದ್ 3 ರನ್ ಕೊಡುಗೆ ನೀಡಿದರು. ಈ ಸೋಲಿನೊಂದಿಗೆ ಮಂಗೋಲಿಯಾ ತಂಡದ ಟಿ20 ವಿಶ್ವಕಪ್ ಅರ್ಹತೆಯ ಕನಸು ಕೂಡ ಭಗ್ನಗೊಂಡಿದೆ. ಮಂಗೋಲಿಯಾವನ್ನು ಈ ಹಿಂದೆ ಕುವೈತ್, ಹಾಂಗ್ ಕಾಂಗ್, ಮ್ಯಾನ್ಮಾರ್, ಸಿಂಗಾಪುರ ಮತ್ತು ಮಾಲ್ಡೀವ್ಸ್ ತಂಡಗಳು ಹೀನಾಯವಾಗಿ ಸೋಲಿಸಿದ್ದವು. ಟಿ20 ವಿಶ್ವಕಪ್ ಕ್ವಾಲಿಫೈಯರ್‌ನಲ್ಲಿ ಇದುವರೆಗೆ 6 ಪಂದ್ಯಗಳನ್ನಾಡಿರುವ ಮಂಗೋಲಿಯಾ 6 ಪಂದ್ಯಗಳನ್ನು ಸೋತು, ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 pm, Mon, 9 September 24

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?