AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕ್ ಪಂದ್ಯದ ದಿನ ಸೋಶಿಯಲ್ ಮೀಡಿಯಾದಿಂದ ದೂರವಾಗಲಿದ್ದಾರೆ ಸಾನಿಯಾ ಮಿರ್ಜಾ! ಕಾರಣವೇನು ಗೊತ್ತಾ?

T20 World Cup: ಭಾರತ-ಪಾಕ್ ಘರ್ಷಣೆಯಿಂದಾಗಿ ಸಾನಿಯಾ ಈ ಹಿಂದೆ ಟ್ರೋಲರ್‌ಗಳಿಗೆ ಬಲಿಯಾಗಿದ್ದರು. ಆದರೆ ಈಗ ಟ್ರೋಲ್​ಗಳಿಂದ ತಪ್ಪಿಸಿಕೊಳ್ಳಲು ಈ ತೀರ್ಮಾನ ತೆಗೆದುಕೊಂಡಿದ್ದಾರೆ.

ಭಾರತ-ಪಾಕ್ ಪಂದ್ಯದ ದಿನ ಸೋಶಿಯಲ್ ಮೀಡಿಯಾದಿಂದ ದೂರವಾಗಲಿದ್ದಾರೆ ಸಾನಿಯಾ ಮಿರ್ಜಾ! ಕಾರಣವೇನು ಗೊತ್ತಾ?
ಸಾನಿಯಾ ಮಿರ್ಜಾ, ಭಾರತ-ಪಾಕಿಸ್ತಾನ ಪಂದ್ಯ
TV9 Web
| Updated By: ಪೃಥ್ವಿಶಂಕರ|

Updated on: Oct 17, 2021 | 4:40 PM

Share

ಟಿ 20 ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ಬಗ್ಗೆ ಕುತೂಹಲ ಆರಂಭವಾಗಿದೆ. ಎರಡೂ ದೇಶಗಳ ಕ್ರಿಕೆಟ್ ಅಭಿಮಾನಿಗಳು ಕೇವಲ 24 ಅಕ್ಟೋಬರ್​ಗಾಗಿ ಕಾಯುತ್ತಿದ್ದಾರೆ. ಆದರೆ, ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಯೋಜನೆ ಸ್ವಲ್ಪ ಭಿನ್ನವಾಗಿದೆ. ಅವರೂ ಕೂಡ ಭಾರತ-ಪಾಕಿಸ್ತಾನ ಪಂದ್ಯದ ದಿನಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಪಂದ್ಯದ ರೋಮಾಂಚನವನ್ನು ಅನುಭವಿಸಲು ಅಲ್ಲ, ಆದರೆ ಒಂದು ನಿರ್ದಿಷ್ಟ ಉದ್ದೇಶಕ್ಕಾಗಿ. ವಾಸ್ತವವಾಗಿ, ಅಕ್ಟೋಬರ್ 24 ರಂದು ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣಗಳಿಂದ ದೂರವಿರಲು ನಿರ್ಧರಿಸಿದ್ದಾರೆ.

ಸಾನಿಯಾ ಮಿರ್ಜಾ ಅವರು ಪಂದ್ಯದ ಸಮಯದಲ್ಲಿ ಸೋಶಿಯಲ್ ಮೀಡಿಯಾದ್ದಲ್ಲಿ ಉಂಟಾಗುವ ಕೆಟ್ಟ ವಾತಾವರಣವನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ವಾಸ್ತವವಾಗಿ ಸಾನಿಯಾ ಭಾರತದವರು, ಆದರೆ ಆಕೆಯ ಪತಿ ಶೋಯೆಬ್ ಮಲಿಕ್ ಪಾಕಿಸ್ತಾನದವರು. ಶೊಯೆಬ್ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಾಗಿದ್ದಾರೆ. ಭಾರತ-ಪಾಕ್ ಘರ್ಷಣೆಯಿಂದಾಗಿ ಸಾನಿಯಾ ಈ ಹಿಂದೆ ಟ್ರೋಲರ್‌ಗಳಿಗೆ ಬಲಿಯಾಗಿದ್ದರು. ಆದರೆ ಈಗ ಟ್ರೋಲ್​ಗಳಿಂದ ತಪ್ಪಿಸಿಕೊಳ್ಳಲು ಈ ತೀರ್ಮಾನ ತೆಗೆದುಕೊಂಡಿದ್ದಾರೆ.

ಸಾನಿಯಾ ಪಂದ್ಯದ ದಿನ ಸೋಶಿಯಲ್ ಮೀಡಿಯಾದಿಂದ ದೂರ ಸಾನಿಯಾ ಮಿರ್ಜಾ ಅವರು ಇನ್‌ಸ್ಟಾಗ್ರಾಮ್ ಮೂಲಕ ಇಂಡೋ-ಪಾಕ್ ಮಹಾನ್ ಪಂದ್ಯದ ದಿನ ಸೋಶಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಭಾರತ ಮತ್ತು ಪಾಕಿಸ್ತಾನ ಪಂದ್ಯದ ದಿನ ವಿಷಕಾರಿ ವಾತಾವರಣದಿಂದ ತಪ್ಪಿಸಿಕೊಳ್ಳಲು ನಾನು ಸೋಶಿಯಲ್ ಮೀಡಿಯಾದಿಂದ ಕಣ್ಮರೆಯಾಗುತ್ತಿದ್ದೇನೆ. ಬೈ ಬೈ ಎಂದು ಸಾನಿಯಾ ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸಾನಿಯಾ ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದರು. ಟಿ 20 ವಿಶ್ವಕಪ್‌ನಲ್ಲಿ ಶೋಯಿಬ್ ಪಾಕಿಸ್ತಾನದ ತಂಡದ ಭಾಗವಾಗಿದ್ದಾರೆ. ಶೋಯೆಬ್ ಮಲಿಕ್ ಮೊದಲು ತಂಡದಲ್ಲಿ ಆಯ್ಕೆಯಾಗಿರಲಿಲ್ಲ. ಆದರೆ ನಂತರ ಅವರು ಸೊಹೆಬ್ ಮಕ್ಸೂದ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸೊಹೈಬ್ ಬೆನ್ನಿನ ಗಾಯದಿಂದಾಗಿ ಟಿ 20 ವಿಶ್ವಕಪ್ ನಿಂದ ಹೊರಗುಳಿದಿದ್ದಾರೆ.

ಶೋಯೆಬ್ 5 ಟಿ 20 ಡಬ್ಲ್ಯೂಸಿಗಳಲ್ಲಿ ಆಡಿದ್ದಾರೆ ಪಾಕಿಸ್ತಾನ 2009 ರಲ್ಲಿ ಯೂನಿಸ್ ಖಾನ್ ನಾಯಕತ್ವದಲ್ಲಿ ಟಿ 20 ವಿಶ್ವಕಪ್ ಗೆದ್ದಿತ್ತು. ಶೋಯೆಬ್ ಮಲಿಕ್ ಆ ತಂಡದ ಸದಸ್ಯರಾಗಿದ್ದರು. 2007 ರಿಂದ, ಟಿ 20 ಯ 6 ವಿಶ್ವಕಪ್‌ಗಳನ್ನು ಆಡಲಾಗಿದೆ. ಈ ಪೈಕಿ, ಮಲಿಕ್ 5 ವಿಶ್ವಕಪ್‌ಗಳಲ್ಲಿ ಪಾಕಿಸ್ತಾನ ತಂಡದ ಸದಸ್ಯರಾಗಿದ್ದಾರೆ. ಶೋಯೆಬ್ 22 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ನ ವ್ಯಾಪಕ ಅನುಭವ ಹೊಂದಿದ್ದಾರೆ. ಅವರು 28 ವಿಶ್ವಕಪ್ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 32.11 ಸರಾಸರಿಯಲ್ಲಿ 546 ರನ್ ಗಳಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ