IND vs ENG Weather: ಗಯಾನಾದಲ್ಲಿ ಶೇ. 70 ರಷ್ಟು ಮಳೆ..! ಪಂದ್ಯ ರದ್ದಾದರೆ ಯಾವ ತಂಡ ಫೈನಲ್​ಗೆ?

IND vs ENG Weather: ಹವಾಮಾನ ವೆಬ್‌ಸೈಟ್ ಅಕ್ಯೂವೆದರ್ ಪ್ರಕಾರ, ಪಂದ್ಯದಲ್ಲಿ ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ. ವೆಬ್‌ಸೈಟ್ ವರದಿಯ ಪ್ರಕಾರ, ಗಯಾನಾದಲ್ಲಿ ಬೆಳಿಗ್ಗೆ 10 ಗಂಟೆಗೆ ಭಾರಿ ಮಳೆಯ ಮುನ್ಸೂಚನೆ ಇದೆ. ಪಂದ್ಯದ ಸಮಯ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಇದೆ. ಈ ಅವಧಿಯಲ್ಲಿ ಶೇ.35ರಿಂದ 70 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಮಳೆಯಿಂದಾಗಿ ಪಂದ್ಯ ತಡವಾಗಿ ಆರಂಭವಾಗಬಹುದು.

IND vs ENG Weather: ಗಯಾನಾದಲ್ಲಿ ಶೇ. 70 ರಷ್ಟು ಮಳೆ..! ಪಂದ್ಯ ರದ್ದಾದರೆ ಯಾವ ತಂಡ ಫೈನಲ್​ಗೆ?
ಗಯಾನಾ ಹವಾಮಾನ ವರದಿ
Follow us
|

Updated on: Jun 26, 2024 | 6:31 PM

ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಅಜೇಯ ತಂಡವಾಗಿ ಸೆಮಿಫೈನಲ್‌ ಪ್ರವೇಶಿಸಿದೆ. ಇದೀಗ ಭಾರತ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಫೈನಲ್‌ಗೇರುವ ತವಕದಲ್ಲಿದೆ. ಇತ್ತ ಈ ಪಂದ್ಯಕ್ಕೂ ಮುನ್ನ ನಡೆಯಲ್ಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಲಿವೆ. ಇನ್ನು ಟೀಂ ಇಂಡಿಯಾ ಪಂದ್ಯದ ಬಗ್ಗೆ ಹೇಳುವುದಾದರೆ.. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯ ನಾಳೆ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ) ಆರಂಭವಾಗಲಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಆದರೆ ಕಳೆದ ಕೆಲವು ಪಂದ್ಯಗಳಂತೆ ನಾಳಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಹವಾಮಾನ ವರದಿ

ಹವಾಮಾನ ವೆಬ್‌ಸೈಟ್ ಅಕ್ಯೂವೆದರ್ ಪ್ರಕಾರ, ಪಂದ್ಯದಲ್ಲಿ ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ. ವೆಬ್‌ಸೈಟ್ ವರದಿಯ ಪ್ರಕಾರ, ಗಯಾನಾದಲ್ಲಿ ಬೆಳಿಗ್ಗೆ 10 ಗಂಟೆಗೆ ಭಾರಿ ಮಳೆಯ ಮುನ್ಸೂಚನೆ ಇದೆ. ಪಂದ್ಯದ ಸಮಯ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಇದೆ. ಈ ಅವಧಿಯಲ್ಲಿ ಶೇ.35ರಿಂದ 70 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಮಳೆಯಿಂದಾಗಿ ಪಂದ್ಯ ತಡವಾಗಿ ಆರಂಭವಾಗಬಹುದು. ವರದಿ ಪ್ರಕಾರ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಭಾರೀ ಮಳೆಯಾಗುವ ಸಾಧ್ಯತೆ ಇಲ್ಲದಿದ್ದರೂ ಮಳೆಯಾಗುವ ಸಾಧ್ಯತೆ ಇದೆ. ಆದರೆ ವೆಸ್ಟ್ ಇಂಡೀಸ್‌ನಲ್ಲಿ ಉತ್ತಮವಾದ ಒಂದು ವಿಷಯವೆಂದರೆ ಮಳೆ ನಿಂತ 10 ನಿಮಿಷಗಳಲ್ಲಿ ಪಂದ್ಯ ಪ್ರಾರಂಭವಾಗುತ್ತಿದೆ.

T20 World Cup 2024: ಸೆಮಿಫೈನಲ್‌ ಪಂದ್ಯಗಳಿಗೆ ಅಂಪೈರ್​​ಗಳು ನೇಮಕ; ನಿಟ್ಟುಸಿರು ಬಿಟ್ಟ ಟೀಂ ಇಂಡಿಯಾ ಫ್ಯಾನ್ಸ್

ಮಳೆಯಿಂದಾಗಿ ಪಂದ್ಯ ರದ್ದಾದರೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ, ಸಾಧ್ಯವಾದರೆ ಪಂದ್ಯವನ್ನು ಅಂದೇ ಮುಗಿಸಬೇಕಾಗಿದೆ. ಏಕೆಂದರೆ ಈ ಪಂದ್ಯಕ್ಕೆ ಯಾವುದೇ ಮೀಸಲು ದಿನವನ್ನು ಇರಿಸಲಾಗಿಲ್ಲ. ಆದಾಗ್ಯೂ, ಈ ಪಂದ್ಯವನ್ನು ನಡೆಸಲು 250 ಹೆಚ್ಚುವರಿ ನಿಮಿಷಗಳನ್ನು ಮೀಸಲಿಡಲಾಗಿದೆ. ಇದರಲ್ಲಿ ತಲಾ 10 ಓವರ್‌ಗಳ ಪಂದ್ಯವನ್ನು ನಡೆಸಬಹುದಾಗಿದೆ. ಐಸಿಸಿ ನಿಯಮಗಳ ಪ್ರಕಾರ, ಸೂಪರ್-8 ಪಂದ್ಯದ ಫಲಿತಾಂಶಕ್ಕಾಗಿ ಕನಿಷ್ಠ ತಲಾ 5 ಓವರ್‌ಗಳ ಪಂದ್ಯಗಳು ಅಗತ್ಯವಾಗಿತ್ತು. ಆದರೆ ಸೆಮಿಫೈನಲ್‌ನಲ್ಲಿ ತಲಾ 10 ಓವರ್‌ಗಳ ಪಂದ್ಯಗಳನ್ನಾಡುವುದು ಅವಶ್ಯಕ. ಒಂದು ವೇಳೆ ತಲಾ 10 ಓವರ್‌ಗಳ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಅಂತಿಮವಾಗಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಫೈನಲ್‌ಗೆ ಟಿಕೆಟ್ ಪಡೆಯುತ್ತದೆ.

ಮುಖಾಮುಖಿ ವರದಿ

ಟಿ20 ಕ್ರಿಕೆಟ್‌ನಲ್ಲಿ ಉಭಯ ತಂಡಗಳು 23 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತವೇ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ 12 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 11 ಪಂದ್ಯಗಳಲ್ಲಿ ಗೆಲುವಿನ ರುಚಿ ಕಂಡಿದೆ. ಅದೇ ಸಮಯದಲ್ಲಿ, ಟಿ20 ವಿಶ್ವಕಪ್ ಇತಿಹಾಸದಲ್ಲಿ, ಇಂಗ್ಲೆಂಡ್ ನಾಲ್ಕು ಬಾರಿ ಭಾರತವನ್ನು ಎದುರಿಸಿದೆ. ಎರಡೂ ತಂಡಗಳು ತಲಾ ಎರಡು ಪಂದ್ಯಗಳನ್ನು ಗೆದ್ದಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ