
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ (T20 World Cup Semi-Final) ಪಂದ್ಯ ಕ್ರಿಕೆಟ್ ಇತಿಹಾಸದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಎರಡೂ ತಂಡಗಳು ಒಟ್ಟಾರೆಯಾಗಿ ಬರೋಬ್ಬರಿ 499 ರನ್ ಕಲೆಹಾಕಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 253 ರನ್ ಗಳಿಸಿತು. ಈ ಮೂಲಕ ಟೀಂ ಇಂಡಿಯಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ನಾಕೌಟ್ ಸುತ್ತಿನಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ ದಾಖಲೆಯನ್ನು ಬರೆಯಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಕೂಡ ಗೆಲುವಿಗಾಗಿ ಹೋರಾಟ ನಡೆಸಿತ್ತಾದರೂ 246 ರನ್‌ಗಳಿಸಲಷ್ಟೇ ಶಕ್ತವಾಗಿ 7 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಪಂದ್ಯ ರನ್‌ಗಳ ವಿಚಾರದಲ್ಲಿ ದಾಖಲೆ ಬರೆಯುವುದರ ಜೊತೆಗೆ ವೀಕ್ಷಣೆಯ ವಿಚಾರದಲ್ಲೂ ವಿಶ್ವದಾಖಲೆ ನಿರ್ಮಿಸಿದೆ.
ಮಾರ್ಚ್ 5 ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯ ಅತಿ ಹೆಚ್ಚು ವೀಕ್ಷಣೆ ಕಂಡ ಪಂದ್ಯವೆಂಬ ವಿಶ್ವದಾಖಲೆ ಬರೆದಿದೆ. ಈ ವಿಚಾರವನ್ನು ಸ್ವತಃ ಐಸಿಸಿ ಅಧ್ಯಕ್ಷ ಜಯ್ ಶಾ ಅವರೇ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಐಸಿಸಿ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಡಿಜಿಟಲ್ ವೀಕ್ಷಕರ ಸಂಖ್ಯೆಯಲ್ಲಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್‌ನಲ್ಲಿ 65.2 ಮಿಲಿಯನ್ ವೀಕ್ಷಕರು ವೀಕ್ಷಿಸಿದ್ದಾರೆ. ಇದು ವಿಶ್ವದ ಯಾವುದೇ ಲೈವ್ ಕಾರ್ಯಕ್ರಮಕ್ಕೆ ಹೋಲಿಸಿದರೆ ಅತ್ಯಧಿಕವಾಗಿದೆ. ಫೈನಲ್ ಪಂದ್ಯವನ್ನು ಇನ್ನೂ ಆಡಬೇಕಾಗಿದೆ. ಆದರೆ ಇದು (ಟಿ20 ವಿಶ್ವಕಪ್ 2026) ಈಗಾಗಲೇ 2024 ರಲ್ಲಿ ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆದ ಪಂದ್ಯಾವಳಿಯಲ್ಲಿ ನಿರ್ಮಿಸಿದ್ದ ವೀಕ್ಷಕರ ದಾಖಲೆಯನ್ನು ಮುರಿದಿದೆ’ ಎಂದು ಬರೆದುಕೊಂಡಿದ್ದಾರೆ.
Second semi-final of the @ICC #T20WorldCup 2026 has shattered the world record for digital viewership. The match between @BCCI and @EnglandCricket registered a peak digital concurrency of 65.2 million viewers @JioHotstar which is the highest for any live event across the world.…
— Jay Shah (@JayShah) March 6, 2026
ವೀಕ್ಷಣೆಯ ವಿಚಾರದಲ್ಲಿ ಮಾತ್ರವಲ್ಲದೆ ಈ ಪಂದ್ಯ ಇನ್ನು ಹಲವು ಐತಿಹಾಸಿಕ ದಾಖಲೆಗಳಿಗೆ ಸಾಕ್ಷಿಯಾಯಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:53 pm, Fri, 6 March 26