ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

SA vs NZ 2026 T20 World Cup Semi-Final: 2026ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಫೆಬ್ರವರಿ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮುಖಾಮುಖಿಯಾಗಲಿವೆ. ಸಂಜೆ 7 ಗಂಟೆಗೆ ಆರಂಭವಾಗುವ ಈ ಮಹತ್ವದ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಸಿನಿಮಾ ಮೂಲಕ ನೇರವಾಗಿ ವೀಕ್ಷಿಸಬಹುದು. ಫೈನಲ್‌ಗೆ ಪ್ರವೇಶ ಪಡೆಯಲು ಉಭಯ ತಂಡಗಳಿಗೂ ಈ ಗೆಲುವು ಅನಿವಾರ್ಯ.

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?
South Africa Vs New Zealand

Updated on: Mar 03, 2026 | 8:40 PM

2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ( 2026 T20 World Cup Semi-Final) ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯಲಿದೆ. ದಕ್ಷಿಣ ಆಫ್ರಿಕಾ ಸೂಪರ್ 8 ರ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ನ್ಯೂಜಿಲೆಂಡ್ ಗ್ರೂಪ್ ಬಿ ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ ತಲುಪಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದ ತಂಡ ಮೊದಲ ತಂಡವಾಗಿ ಫೈನಲ್​ಗೆ ಅರ್ಹತೆ ಪಡೆಯಲಿದೆ. ಇತ್ತ ಸೋತ ತಂಡಕ್ಕೆ ಟೂರ್ನಿಯಿಂದ ಗೇಟ್​ಪಾಸ ಸಿಗಲಿದೆ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಸಕಲ ತಯಾರಿ ಮಾಡಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿದೆ. ಆದರೆ ಅದಕ್ಕೂ ಮುನ್ನ ಈ ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ? ಎಷ್ಟು ಗಂಟೆಗೆ ಆರಂಭವಾಗಲಿದೆ? ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬಿತ್ಯಾದಿ ವಿವರಗಳನ್ನು ನಾವು ನೀಡಲಿದ್ದೇವೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಯಾವಾಗ ನಡೆಯಲಿದೆ?

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಫೆಬ್ರವರಿ 4 ರಂದು ನಡೆಯಲಿದೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಎಲ್ಲಿ ನಡೆಯಲಿದೆ?

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭ?

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್​ನ ವಿವಿಧ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್​ನಲ್ಲೂ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

PAK vs SL: ಟಿ20 ವಿಶ್ವಕಪ್​ನಿಂದ ಹೊರಬಿದ್ದ ‘ಪ್ಯಾಕಿ’ಸ್ತಾನ; ಕಿವೀಸ್​ಗೆ ಸೆಮೀಸ್ ಟಿಕೆಟ್

ಉಭಯ ತಂಡಗಳು

ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ, ಜೇಮ್ಸ್ ನೀಶಮ್, ಮ್ಯಾಟ್ ಹೆನ್ರಿ, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಿಯಾನ್ ರಿಕೆಲ್ಟನ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಜೇಸನ್ ಸ್ಮಿತ್, ಜಾರ್ಜ್ ಲಿಂಡೆ, ಅನ್ರಿಚ್ ನೋಕಿಯಾ, ಕ್ವೆನಾ ಮಫಕಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Tue, 3 March 26

Follow Us