T20 World Cup: ಪಾಕ್ ತಂಡಕ್ಕೆ ಭಾರತವನ್ನು ಸೋಲಿಸುವ ಮತ್ತು ಇತಿಹಾಸವನ್ನು ಬದಲಾಯಿಸುವ ಶಕ್ತಿ ಇದೆ; ಸೆಹ್ವಾಗ್ ಅಚ್ಚರಿಯ ಹೇಳಿಕೆ

T20 World Cup: ಪ್ರಸ್ತುತ ಪಾಕಿಸ್ತಾನ ತಂಡಕ್ಕೆ ಭಾರತವನ್ನು ಸೋಲಿಸುವ ಮತ್ತು ಇತಿಹಾಸವನ್ನು ಬದಲಾಯಿಸುವ ಶಕ್ತಿ ಇದೆ ಎಂದು ಹೇಳುವ ಮೂಲಕ ಸೆಹ್ವಾಗ್ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.

T20 World Cup: ಪಾಕ್ ತಂಡಕ್ಕೆ ಭಾರತವನ್ನು ಸೋಲಿಸುವ ಮತ್ತು ಇತಿಹಾಸವನ್ನು ಬದಲಾಯಿಸುವ ಶಕ್ತಿ ಇದೆ; ಸೆಹ್ವಾಗ್ ಅಚ್ಚರಿಯ ಹೇಳಿಕೆ
ವೀರೇಂದ್ರ ಸೆಹ್ವಾಗ್
Follow us
TV9 Web
| Updated By: ಪೃಥ್ವಿಶಂಕರ

Updated on: Oct 19, 2021 | 5:59 PM

ಟಿ 20 ವಿಶ್ವಕಪ್ ಆರಂಭವಾಗಿದ್ದು, ಎಲ್ಲರ ಕಣ್ಣು ಮಹಾನ್ ಪಂದ್ಯದ ಮೇಲೆ ನೆಟ್ಟಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯಕ್ಕಾಗಿ ಇಡೀ ಜಗತ್ತೇ ಕಾಯುತ್ತಿದೆ. ಎರಡೂ ತಂಡಗಳು ಅಕ್ಟೋಬರ್ 24 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಉಭಯ ತಂಡಗಳಿಗೆ ಈ ಪಂದ್ಯದಲ್ಲಿ ಗೆಲುವಿಗಿಂತ ಬೇರೆನೂ ಬೇಕಿಲ್ಲ. ಏಕೆಂದರೆ ಈ ಪಂದ್ಯದಲ್ಲಿನ ಸೋಲು ವಿಶ್ವಕಪ್ ಫೈನಲ್​ ಸೋಲಿಗಿಂತ ಹೆಚ್ಚು ಎಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ಪಾಕಿಸ್ತಾನವು ಹಲವು ವರ್ಷಗಳಿಂದ ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಗೆಲ್ಲಲು ಸಾಧ್ಯವಾಗಲಿಲ್ಲ, ಅದು ಏಕದಿನ ವಿಶ್ವಕಪ್ ಅಥವಾ ಟಿ 20 ವಿಶ್ವಕಪ್ ಆಗಿರಬಹುದು. ಇಲ್ಲಿಯವರೆಗೆ, ಎರಡು ವಿಶ್ವಕಪ್‌ಗಳಲ್ಲಿ ಎರಡು ತಂಡಗಳ ನಡುವೆ 12 ಪಂದ್ಯಗಳು ನಡೆದಿವೆ. ಏಕದಿನ ವಿಶ್ವಕಪ್‌ನಲ್ಲಿ ಏಳು ಪಂದ್ಯಗಳು ಮತ್ತು ಟಿ 20 ವಿಶ್ವಕಪ್‌ನಲ್ಲಿ ಐದು ಪಂದ್ಯಗಳಿವೆ. ಈ ಎಲ್ಲ ಪಂದ್ಯಗಳನ್ನು ಭಾರತ ಗೆದ್ದಿದೆ.

ಭಾರತದ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್ ಕೂಡ ಈ ಪಂದ್ಯದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಈ ಎರಡು ತಂಡಗಳು ಮುಖಾಮುಖಿಯಾಗಿ ಬಂದಾಗಲೆಲ್ಲ ಅಭಿಮಾನಿಗಳ ನಡುವೆ ಚರ್ಚೆ ಮತ್ತು ಹೋರಾಟಕ್ಕೆ ಕೊರತೆಯಿಲ್ಲ ಎಂದು ಹೇಳಿದರು. ಜೊತೆಗೆ ಭಾರತದ ಅಭಿಮಾನಿಗಳಿಗೆ ಇಷ್ಟವಾಗದಂತಹ ವಿಷಯವನ್ನು ಕೂಡ ಸೆಹ್ವಾಗ್ ಹೇಳಿದ್ದಾರೆ. ಪ್ರಸ್ತುತ ಪಾಕಿಸ್ತಾನ ತಂಡಕ್ಕೆ ಭಾರತವನ್ನು ಸೋಲಿಸುವ ಮತ್ತು ಇತಿಹಾಸವನ್ನು ಬದಲಾಯಿಸುವ ಶಕ್ತಿ ಇದೆ ಎಂದು ಹೇಳುವ ಮೂಲಕ ಸೆಹ್ವಾಗ್ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.

ಹಲವು ವರ್ಷಗಳಿಂದ ಅದನ್ನೇ ಕೇಳುತ್ತಿದ್ದೇನೆ ಎಬಿಪಿ ನ್ಯೂಸ್ ಶೋ ವಿಶ್ವ ವಿಜೇತಾದಲ್ಲಿ ಮಾತನಾಡಿದ ಸೆಹ್ವಾಗ್, ನಾವು ಕಳೆದ ಹಲವು ವರ್ಷಗಳಿಂದ ಒಂದೇ ರೀತಿಯ ವಿಷಯಗಳನ್ನು ಕೇಳುತ್ತಿದ್ದೇವೆ. ಈ ಪಂದ್ಯದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ವಿಶ್ವಕಪ್‌ನಲ್ಲಿ ಇದುವರೆಗೆ ಪಾಕಿಸ್ತಾನವು ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗಿಲ್ಲ. ಈ ಬಾರಿ ಪಾಕಿಸ್ತಾನ ಗೆಲ್ಲಲು ಸಾಧ್ಯವೇ ಎಂಬುದು ವಿಷಯವಾಗಿದೆ. ಈ ಬಾರಿಯೂ ಅದೇ ವಿಷಯದ ಬಗ್ಗೆ ಚರ್ಚೆಯಾಗಿದೆ. ಆದರೆ ನೀವು ಪ್ರಸ್ತುತ ಪರಿಸ್ಥಿತಿಯನ್ನು ನೋಡಿದರೆ ಈ ಫಾರ್ಮ್ಯಾಟ್‌ನಲ್ಲಿ, ಪಾಕಿಸ್ತಾನವು ಭಾರತವನ್ನು ಸೋಲಿಸಲು ಹೆಚ್ಚಿನ ಅವಕಾಶಗಳನ್ನು ಹೊಂದಿದೆ ಎಂದು ಭಾವಿಸುತ್ತೇನೆ ಏಕೆಂದರೆ ಅವರು 50 ಓವರ್‌ಗಳಲ್ಲಿ ಉತ್ತಮವಾಗಿರಬಹುದು. ಆದರೆ ಈ ಫಾರ್ಮ್ಯಾಟ್‌ನಲ್ಲಿ ಒಬ್ಬ ಆಟಗಾರ ಕೂಡ ಪಂದ್ಯದ ದಿಕ್ಕನ್ನು ಬದಲಿಸಿ ಎದುರಾಳಿ ತಂಡಕ್ಕೆ ಸೋಲುಣಿಸಬಹುದು. ಆದರೆ ಇಲ್ಲಿಯವರೆಗೆ ಅದು ಸಂಭವಿಸದಿದ್ದರೂ … 24 ರಂದು ಏನಾಗುತ್ತದೆ ಎಂದು ಕಾದು ನೋಡಬೇಕಿದೆ ಎಂದರು.

ಇದಕ್ಕಾಗಿಯೇ ಭಾರತ ಗೆಲ್ಲುತ್ತದೆ ಪಾಕಿಸ್ತಾನವು ಭಾರತದ ವಿರುದ್ಧ ಇನ್ನೂ ಏಕೆ ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಸೆಹ್ವಾಗ್ ವಿವರಿಸಿದರು. ಭಾರತದ ಬಿರುಗಾಳಿಯ ಬ್ಯಾಟ್ಸ್‌ಮನ್ ಈ ಹೈ ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಒತ್ತಡವನ್ನು ಚೆನ್ನಾಗಿ ನಿಭಾಯಿಸುತ್ತಾರೆ ಎಂದು ಹೇಳಿದರು. ನಾನು 2003 ಮತ್ತು 2011 ರ ವಿಶ್ವಕಪ್ ಪಂದ್ಯಗಳ ಬಗ್ಗೆ ಮಾತನಾಡಿದರೆ, ನಾವು ಒತ್ತಡದಲ್ಲಿದ್ದೆವು. ಏಕೆಂದರೆ ವಿಶ್ವಕಪ್​ನಲ್ಲಿ ಪಾಕಿಸ್ತಾನಕ್ಕಿಂತ ನಮ್ಮ ಸ್ಥಾನ ಉತ್ತಮವಾಗಿದೆ. ನನ್ನ ದೃಷ್ಟಿಯಲ್ಲಿ, ನಾವು ಈ ದೃಷ್ಟಿಕೋನದಿಂದ ಆಡುವಾಗ, ನಾವು ದೊಡ್ಡ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ಪಾಕಿಸ್ತಾನದ ಕಡೆಯಿಂದ ಯಾವಾಗಲೂ ದೊಡ್ಡ ಹೇಳಿಕೆಗಳು ಬರುತ್ತಿವೆ ಎಂದಿದ್ದಾರೆ.

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್