AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robin Uthappa: ದಾಖಲೆ ಬರೆದ ದಿನಾಂಕದಂದೇ ವಿದಾಯ ಹೇಳಿದ ಉತ್ತಪ್ಪ..!

Robin Uthappa: ಕಳೆದ ಸೀಸನ್​ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ರಾಬಿನ್ ಉತ್ತಪ್ಪ ಸ್ಪೋಟಕ ಇನಿಂಗ್ಸ್​ ಮೂಲಕ ಗಮನ ಸೆಳೆದಿದ್ದರು.

Robin Uthappa: ದಾಖಲೆ ಬರೆದ ದಿನಾಂಕದಂದೇ ವಿದಾಯ ಹೇಳಿದ ಉತ್ತಪ್ಪ..!
Robin Uthappa
TV9 Web
| Edited By: |

Updated on: Sep 15, 2022 | 11:32 AM

Share

ಕರ್ನಾಟಕದ ಸ್ಟಾರ್ ಆಟಗಾರ ರಾಬಿನ್‌ ಉತ್ತಪ್ಪ (Robin Uthappa) ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಬುಧವಾರ ಟ್ವೀಟರ್‌ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸುವ ಮೂಲಕ 20 ವರ್ಷಗಳ ತಮ್ಮ ಕ್ರಿಕೆಟ್​ಗೆ ಗುಡ್​ ಬೈ ಹೇಳಿದರು. 2006 ರಲ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮೂಲಕ ಉತ್ತಪ್ಪ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಮೊದಲ ಪಂದ್ಯದಲ್ಲೇ ಆರಂಭಿಕರಾಗಿ ಬ್ಯಾಟಿಂಗ್ ಮಾಡಿದ್ದ ಉತ್ತಪ್ಪ 96 ಎಸೆತಗಳಲ್ಲಿ 86 ರನ್ ಬಾರಿಸಿ ಮಿಂಚಿದ್ದರು.

ಅಷ್ಟೇ ಅಲ್ಲದೆ 2007 ರಲ್ಲಿ ಟಿ20 ವಿಶ್ವಕಪ್​ ಗೆದ್ದ ತಂಡದ ಭಾಗವಾಗಿದ್ದರು. ವಿಶೇಷ ಎಂದರೆ ಅಂದು ಪಾಕಿಸ್ತಾನ್ ವಿರುದ್ಧ 39 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸ್​ನೊಂದಿಗೆ 50 ರನ್ ಬಾರಿಸಿ ಮಿಂಚಿದ್ದರು. ಈ ಅರ್ಧಶತಕ ರಾಬಿನ್ ಉತ್ತಪ್ಪ ಹೆಸರಿನಲ್ಲಿರುವ ವಿಶೇಷ ದಾಖಲೆ ಕೂಡ ಹೌದು. ಅಂದರೆ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಮೊದಲ ಅರ್ಧಶತಕ ಬಾರಿಸಿದ ದಾಖಲೆ ಉತ್ತಪ್ಪ ಹೆಸರಿನಲ್ಲಿದೆ.

ಇಲ್ಲಿ ಮತ್ತೊಂದು ವಿಶೇಷ ಎಂದರೆ ರಾಬಿನ್ ಉತ್ತಪ್ಪ ಟೀಮ್ ಇಂಡಿಯಾ ಪರ ದಾಖಲೆ ಬರೆದ ದಿನವೇ ವಿದಾಯ ಕೂಡ ಹೇಳಿದ್ದಾರೆ. ಅಂದರೆ 2007 ರ ಸೆಪ್ಟೆಂಬರ್ 14 ರಂದು ಪಾಕಿಸ್ತಾನ್ ವಿರುದ್ದ ಉತ್ತಪ್ಪ ಅರ್ಧಶತಕ ಬಾರಿಸಿ ಟೀಮ್ ಇಂಡಿಯಾ ಚೊಚ್ಚಲ ಹಾಫ್ ಸೆಂಚುರಿ ಸಿಡಿಸಿದ ದಾಖಲೆ ಬರೆದಿದ್ದರು. ಇದೀಗ 2022, ಸೆಪ್ಟೆಂಬರ್ 14 ರಂದೇ ಕ್ರಿಕೆಟ್ ಕೆರಿಯರ್​ಗೆ ವಿದಾಯ ಹೇಳಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದ ನಡುವೆ ಉತ್ತಪ್ಪ ಐಪಿಎಲ್​ನಲ್ಲೂ ಸಹ ಮಿಂಚಿದ್ದರು. ಮುಂಬೈ ಇಂಡಿಯನ್ಸ್​ ತಂಡದೊಂದಿಗೆ ಐಪಿಎಲ್ ಕೆರಿಯರ್ ಆರಂಭಿಸಿದ್ದ ಉತ್ತಪ್ಪ, ಆ ಬಳಿಕ ಆರ್​ಸಿಬಿ, ಪುಣೆ ವಾರಿಯರ್ಸ್, ಕೆಕೆಆರ್, ರಾಜಸ್ಥಾನ್ ರಾಯಲ್ಸ್ ಹಾಗೂ ಸಿಎಸ್​ಕೆ ಪರ ಆಡಿದ್ದರು. ವಿಶೇಷ ಎಂದರೆ ಕೆಕೆಆರ್ 2014 ರಲ್ಲಿ ಚಾಂಪಿಯನ್ ಆಗಿದ್ದ ವೇಳೆ ಉತ್ತಪ್ಪ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಅಲ್ಲದೆ ಆರೆಂಜ್ ಕ್ಯಾಪ್ ವಿನ್ನರ್ ಆಗಿ ಹೊರಹೊಮ್ಮಿದ್ದರು.

ಕಳೆದ ಸೀಸನ್​ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ರಾಬಿನ್ ಉತ್ತಪ್ಪ ಸ್ಪೋಟಕ ಇನಿಂಗ್ಸ್​ ಮೂಲಕ ಗಮನ ಸೆಳೆದಿದ್ದರು. ಇದಾಗ್ಯೂ ಎಲ್ಲಾ ಮಾದರಿಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ನೀಡುವ ಮೂಲಕ ಕೊಡಗಿನ ಕುವರ ಅಚ್ಚರಿ ಮೂಡಿಸಿದ್ದಾರೆ.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ