
ಸೌತ್ ಆಫ್ರಿಕಾದ ಸ್ಪಿನ್ನರ್ ತಬ್ರೇಝ್ ಶಂಸಿ ಟಿ20 ಕ್ರಿಕೆಟ್ನ ಸಾರ್ವಕಾಲಿಕ ಟಿ20 ಇಲೆವೆನ್ ಪ್ರಕಟಿಸಿದ್ದಾರೆ. ಸ್ಟಾರ್ ಆಟಗಾರರನ್ನು ಒಳಗೊಂಡಿರುವ ಈ ಬಳಗದಲ್ಲಿ ಟೀಮ್ ಇಂಡಿಯಾದ ಯಶಸ್ವಿ ನಾಯಕ ರೋಹಿತ್ ಶರ್ಮಾ ಇಲ್ಲ ಎಂಬುದು ವಿಶೇಷ. ಹಾಗೆಯೇ ಈ ಇಲೆವೆನ್ನಲ್ಲಿ ಭಾರತದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ.
ತಬ್ರೇಝ್ ಶಂಸಿ ಹೆಸರಿಸಿರುವ ಆಲ್ ಟೈಮ್ 20 ಇಲೆವೆನ್ನಲ್ಲಿ ಆರಂಭಿಕರಾಗಿ ಸ್ಥಾನ ಪಡೆದಿರುವುದು ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹಾಗೂ ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್. ಇನ್ನು ಮೂರನೇ ಕ್ರಮಾಂಕಕ್ಕೆ ಭಾರತದ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ.
ಹಾಗೆಯೇ ನಾಲ್ಕನೇ ಕ್ರಮಾಂಕಕ್ಕೆ ಸ್ಫೋಟಕ ದಾಂಡಿಗ ಎಬಿ ಡಿವಿಲಿಯರ್ಸ್ ಅವರನ್ನು ಆಯ್ಕೆ ಮಾಡಿದ್ದಾರೆ. ಇದರ ಜೊತೆ ಫಾಫ್ ಡುಪ್ಲೆಸಿಸ್ ಅವರನ್ನು 5ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಆಯ್ಕೆ ಮಾಡಿದ್ದಾರೆ.
ಆಲ್ರೌಂಡರ್ಗಳಾಗಿ ವೆಸ್ಟ್ ಇಂಡೀಸ್ನ ಆ್ಯಂಡ್ರೆ ರಸೆಲ್ ಹಾಗೂ ಅಫ್ಘಾನಿಸ್ತಾನದ ರಶೀದ್ ಖಾನ್ ಅವರಿಗೆ ಸ್ಥಾನ ನೀಡಲಾಗಿದೆ. ಇನ್ನು ಬೌಲರ್ಗಳಾಗಿ ಸ್ಥಾನ ಪಡೆದಿರುವುದು ಸೌತ್ ಆಫ್ರಿಕಾದ ಇಮ್ರಾನ್ ತಾಹಿರ್, ಭಾರತದ ಜಸ್ಪ್ರೀತ್ ಬುಮ್ರಾ ಹಾಗೂ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್.
ಇನ್ನು ಈ ತಂಡದ ನಾಯಕನಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಹೆಸರಿಸಿದ್ದಾರೆ. ಅದರಂತೆ ತಬ್ರೇಝ್ ಶಂಸಿ ಅವರ ಸಾರ್ವಕಾಲಿಕ ಟಿ20 ಇಲೆವೆನ್ ಈ ಕೆಳಗಿನಂತಿದೆ…
ಇದನ್ನೂ ಓದಿ: ವಿಶ್ವ ದಾಖಲೆಯಾಟ… 378 ರನ್ಗಳೊಂದಿಗೆ ಇತಿಹಾಸ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್ಕೆ
ಕುತೂಹಲಕಾರಿ ವಿಷಯ ಎಂದರೆ ತಬ್ರೇಝ್ ಶಂಸಿ ಹೆಸರಿಸಿರುವ ಆಲ್ ಟೈಮ್ ಟಿ20 ಇಲೆವೆನ್ನಲ್ಲಿ ಪಾಕಿಸ್ತಾನದ ಯಾವುದೇ ಆಟಗಾರನಿಗೆ ಸ್ಥಾನ ನೀಡಲಾಗಿಲ್ಲ ಎಂಬುದು. ಹಾಗೆಯೇ ಶಂಸಿ ಅವರ ಟಿ20 ಇಲೆವೆನ್ನಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ಆಟಗಾರರು ಕೂಡ ಕಾಣಿಸಿಕೊಂಡಿಲ್ಲ.
Published On - 9:55 am, Mon, 25 August 25