AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umran Malik: ಆಡಿಸದಿದ್ರೂ ಪರವಾಗಿಲ್ಲ, ಮಲಿಕ್​ನನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಿ ಎಂದ ಖ್ಯಾತ ಕ್ರಿಕೆಟಿಗ

Umran Malik: ಈ ಬಾರಿ ಐಪಿಎಲ್​ ಸೀಸನ್​ನಲ್ಲಿ ನಿಯಮಿತವಾಗಿ 150 kmph ವೇಗದಲ್ಲಿ ಬೌಲಿಂಗ್ ಮಾಡಿರುವ ಉಮ್ರಾನ್ ಮಲಿಕ್ ಎಂಟು ಪಂದ್ಯಗಳಲ್ಲಿ 15.93 ಸರಾಸರಿಯಲ್ಲಿ 15 ವಿಕೆಟ್​ಗಳನ್ನು ಪಡೆದಿದ್ದಾರೆ.

Umran Malik: ಆಡಿಸದಿದ್ರೂ ಪರವಾಗಿಲ್ಲ, ಮಲಿಕ್​ನನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಿ ಎಂದ ಖ್ಯಾತ ಕ್ರಿಕೆಟಿಗ
Umran Malik
TV9 Web
| Updated By: ಝಾಹಿರ್ ಯೂಸುಫ್|

Updated on: Apr 28, 2022 | 6:25 PM

Share

IPL 2022:  ಐಪಿಎಲ್​ನ ವೇಗ ಅಸ್ತ್ರವಾಗಿ ಗುರುತಿಸಿಕೊಂಡಿರುವ ಉಮ್ರಾನ್ ಮಲಿಕ್ (Umran Malik) ಇದೀಗ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಅದರಲ್ಲೂ ಗುಜರಾತ್ ಟೈಟನ್ಸ್ ವಿರುದ್ದ ಕೇಲವ 25 ರನ್​ ನೀಡಿ 5 ವಿಕೆಟ್ ಉರುಳಿಸುವ ಮೂಲಕ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ಏಕೆಂದರೆ ಈ 5 ವಿಕೆಟ್​ಗಳಲ್ಲಿ 4 ಬೌಲ್ಡ್ ಎಂಬುದು ವಿಶೇಷ. ಅಂದರೆ ಒಬ್ಬ ಬೌಲರ್​ನ ಸಂಪೂರ್ಣ ಸಾಮರ್ಥ್ಯ ತೆರೆದಿಡುವುದು ಆತನ ಬ್ಯಾಟ್ಸ್​ಮನ್​ನ ವಂಚಿಸಿ ಬೌಲ್ಡ್ ಮಾಡುವುದರಲ್ಲಿ. ಹೀಗಾಗಿಯೇ ಉಮ್ರಾನ್ ಮಲಿಕ್ ಅವರ ಈ 5 ವಿಕೆಟ್ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಅದರಲ್ಲೂ ಯುವ ವೇಗಿ 5 ವಿಕೆಟ್ ಉರುಳಿಸುತ್ತಿದ್ದಂತೆ ಕಾಮೆಂಟ್ರಿ ಬಾಕ್ಸ್​ನಲ್ಲಿ ಟೀಮ್ ಇಂಡಿಯಾದ ದಂತಕಥೆ ಸುನಿಲ್ ಗಾವಸ್ಕರ್ ಸಂಭ್ರಮಿಸಿದ್ದರು ಎಂಬುದನ್ನು ಕೆವಿನ್ ಪೀಟರ್ಸನ್ ಬಹಿರಂಗಪಡಿಸಿದ್ದರು. ಇದೀಗ ಉಮ್ರಾನ್ ಮಲಿಕ್​ ಅವರನ್ನು ಟೀಮ್ ಇಂಡಿಯಾಗೆ ಆದಷ್ಟು ಬೇಗ ಆಯ್ಕೆ ಮಾಡಬೇಕೆಂದು ಗಾವಸ್ಕರ್ ಹೇಳಿದ್ದಾರೆ.

ಉಮ್ರಾನ್ ಮಲಿಕ್ ಅವರಿಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಗುತ್ತೆ ಎಂದು ನಾನು ಭಾವಿಸುತ್ತೇನೆ. ಭಾರತ ತಂಡದಲ್ಲಿ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಇರುವುದರಿಂದ ಅವರಿಗೆ ಪ್ಲೇಯಿಂಗ್ 11 ನಲ್ಲಿ ಆಡಲು ಅವಕಾಶ ಸಿಗದಿರಬಹುದು. ಇನ್ನು ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್ ಕೂಡ ಇದ್ದಾರೆ. ಹಾಗಾಗಿ ಚಾನ್ಸ್​ ಸಿಗುವುದು ಅನುಮಾನ. ಆದರೆ 22 ರ ಯುವ ವೇಗಿಯನ್ನು ತಂಡಕ್ಕೆ ಆಯ್ಕೆ ಮಾಡಬೇಕಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಆಟಗಾರರೊಂದಿಗೆ ಪ್ರಯಾಣಿಸುವುದು, ಅವರೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಳ್ಳುವುದು ದೊಡ್ಡ ವಿಷಯ. ಇದು ಯುವ ಆಟಗಾರ ಮೇಲೆ ಪರಿಣಾಮ ಬೀರುತ್ತದೆ. ಆ ಬಳಿಕ ಆತ ಮತ್ತೊಂದು ಹಂತಕ್ಕೇರಲಿದ್ದಾರೆ ಎಂದು ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ಉಮ್ರಾನ್ ಮಲಿಕ್ ಅವರನ್ನು ಮುಂಬುರುವ ಇಂಗ್ಲೆಂಡ್ ವಿರುದ್ದ ಸರಣಿಗೆ ಆಯ್ಕೆ ಮಾಡಿಕೊಳ್ಳಬೇಕು. ಪ್ರಮುಖ ಆಟಗಾರರೊಂದಿಗೆ ಆತ ಡ್ರೆಸಿಂಗ್ ರೂಮ್​ ಹಂಚಿಕೊಳ್ಳುವುದರಿಂದ ಮತ್ತಷ್ಟು ಆತ್ಮ ವಿಶ್ವಾಸ ಮೂಡಲಿದೆ. ಇದರಿಂದ ಯುವ ವೇಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾಣಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ ಎಂದು ಸುನಿಲ್ ಗಾವಸ್ಕರ್ ಹೇಳಿದ್ದಾರೆ.

ಈ ಬಾರಿ ಐಪಿಎಲ್​ ಸೀಸನ್​ನಲ್ಲಿ ನಿಯಮಿತವಾಗಿ 150 kmph ವೇಗದಲ್ಲಿ ಬೌಲಿಂಗ್ ಮಾಡಿರುವ ಉಮ್ರಾನ್ ಮಲಿಕ್ ಎಂಟು ಪಂದ್ಯಗಳಲ್ಲಿ 15.93 ಸರಾಸರಿಯಲ್ಲಿ 15 ವಿಕೆಟ್​ಗಳನ್ನು ಪಡೆದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಆಯ್ಕೆ ಸಮಿತಿ ಉಮ್ರಾನ್​ ಮಲಿಕ್ ಅವರ ಆಯ್ಕೆಗೂ ಆಸಕ್ತಿವಹಿಸಲಿದೆ. ಜೂನ್‌ನಲ್ಲಿ ಭಾರತದ ಇಂಗ್ಲೆಂಡ್ ಪ್ರವಾಸ ಆರಂಭವಾಗಲಿದೆ. ಕೋವಿಡ್-19 ಕಾರಣದಿಂದಾಗಿ ಕಳೆದ ವರ್ಷ ರದ್ದಾದ ಐದು ಪಂದ್ಯಗಳ ಸರಣಿಯ ಅಂತಿಮ ಟೆಸ್ಟ್ ಅನ್ನು ಕೂಡ ಈ ಸರಣಿಯಲ್ಲಿ ಆಡಲಿವೆ. ಇದರ ನಂತರ ಮೂರು ಪಂದ್ಯಗಳ ಟಿ20 ಸರಣಿ ಮತ್ತು3 ಪಂದ್ಯಗಳ ODI ಸರಣಿ ನಡೆಯಲಿದೆ. ಈ ಸರಣಿಗಾಗಿ 22 ರ ಯುವ ವೇಗಿ ಉಮ್ರಾನ್ ಮಲಿಕ್ ಅವರನ್ನು ಆಯ್ಕೆ ಮಾಡಬೇಕೆಂದು ಸುನಿಲ್ ಗಾವಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ: IPL 2022 VIDEO: ಏನೋ ಮಾಡ್ತೀಯಾ..? ಮೈದಾನದಲ್ಲೇ ಜಗಳಕ್ಕಿಳಿದ ಹರ್ಷಲ್-ಪರಾಗ್

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು