AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Cricket: ಅಫ್ಘಾನಿಸ್ತಾನದ ಕ್ರಿಕೆಟ್ ಕುರಿತಾಗಿ ಹೊಸ ಆದೇಶ ಹೊರಡಿಸಿದ ತಾಲಿಬಾನ್

ತಾಲಿಬಾನಿಗಳು ಅಫ್ಘಾನಿಸ್ತಾನದ ಧ್ವಜವನ್ನು ಕೆಳಗಿಸುತ್ತಿದ್ದಂತೆ ಇತ್ತ ಇಂಗ್ಲೆಂಡ್​ನಲ್ಲಿ ದಿ ಹಂಡ್ರೇಡ್ ಲೀಗ್​ ಆಡುತ್ತಿದ್ದ ರಶೀದ್ ಖಾನ್  ತನ್ನ ರಾಷ್ಟ್ರ ಧ್ವಜದ ಚಿತ್ರದೊಂದಿಗೆ ಕಣಕ್ಕಿಳಿದಿದ್ದರು.

Afghanistan Cricket: ಅಫ್ಘಾನಿಸ್ತಾನದ ಕ್ರಿಕೆಟ್ ಕುರಿತಾಗಿ ಹೊಸ ಆದೇಶ ಹೊರಡಿಸಿದ ತಾಲಿಬಾನ್
Rashid khan-Taliban
TV9 Web
| Edited By: |

Updated on:Aug 31, 2021 | 9:17 PM

Share

ಅಫ್ಘಾನಿಸ್ತಾನದ (Afghanistan) ಬಹುತೇಕ ಪ್ರದೇಶಗಳನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು (Taliban) ಆಡಳಿತದ ಚುಕ್ಕಾಣಿ ಹಿಡಿಯಲು ಮುಂದಾಗಿದೆ. ಉಗ್ರರ ಅಟ್ಟಹಾಸದಿಂದ ಇಡೀ ದೇಶದ ವ್ಯವಸ್ಥೆಯೇ ಅಲ್ಲೋಲ ಕಲ್ಲೋಲವಾಗಿದ್ದು, ಹೀಗಾಗಿ ಒಂದೊಂದೇ ವ್ಯವಸ್ಥೆಗಳನ್ನು ಸರಿಪಡಿಸಿ ಆಡಳಿತ ನಡೆಸುವ ಇರಾದೆಯಲ್ಲಿದೆ. ಈ ಹಿಂದೆ ಮಹಿಳಾ ಸ್ವಾತಂತ್ರ್ಯ ಹಾಗೂ ವಿದ್ಯಾಭ್ಯಾಸಗಳ ಕುರಿತಾಗಿ ಆದೇಶ ಹೊರಡಿಸಿದ್ದ ತಾಲಿಬಾನಿಗಳು ಇದೀಗ ಅಫ್ಘಾನಿಸ್ತಾನದ ಕ್ರಿಕೆಟ್ (Afghanistan Cricket)​ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದೆ. ಅದರಂತೆ ದೇಶದಲ್ಲಿ ಕ್ರಿಕೆಟ್ ಈ ಹಿಂದಿನಂತೆ ಮುಂದುವರಿಯಲಿದೆ ಎಂದು ಸಷ್ಟಪಡಿಸಿದೆ. ಇದರಿಂದ ಅಫ್ಘಾನಿಸ್ತಾನ್ ತಂಡವು ಮುಂದಿನ ಟಿ20 ವಿಶ್ವಕಪ್​ನಲ್ಲಿ (T20 World Cup 2021) ಭಾಗವಹಿಸುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೇ ಈ ಹಿಂದಿನ ವೇಳಾಪಟ್ಟಿಯಂತೆ ಸರಣಿಯನ್ನು ಆಡಲು ಕೂಡ ಅನುಮತಿ ನೀಡಿದೆ.

ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಬೇಕಿದೆ. ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯಗಳನ್ನು ನಿಗದಿತ ವೇಳಾಪಟ್ಟಿಯಲ್ಲಿ ನಡೆಸಲಾಗುವುದು ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದ್ದಾರೆ. ಎಸ್‌ಬಿಎಸ್ ಪಾಷ್ತೊ ಅವರೊಂದಿಗಿನ ಸಂಭಾಷಣೆಯಲ್ಲಿ, ತಾಲಿಬಾನ್ ಮುಖಂಡರು ಈಗಾಗಲೇ ನಿಗದಿ ಆಗಿರುವ ಪಂದ್ಯಗಳನ್ನು ಸಮಯಕ್ಕೆ ಸರಿಯಾಗಿ ನಡೆಸಲು ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಅಫ್ಘಾನಿಸ್ತಾನದೊಂದಿಗೆ ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಸಿದ್ಧತೆಗಳನ್ನು ಆರಂಭಿಸಿದೆ. ಉಭಯ ತಂಡಗಳ ನಡುವಿನ ಟೆಸ್ಟ್​ ಪಂದ್ಯವು ಹೋಬಾರ್ಟ್‌ನಲ್ಲಿ ನಡೆಯಲಿದೆ. ಅದಕ್ಕಾಗಿ ಸಿದ್ಧತೆ ನಡೆಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ವಕ್ತಾರರು ತಿಳಿಸಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯಾವು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದು, ಉಭಯ ಮಂಡಳಿಗಳು ಈ ಟೆಸ್ಟ್ ಪಂದ್ಯದ ಮೂಲಕ ಆ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ತಿಳಿಸಿದೆ.

ತಾಲಿಬಾನ್ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ದ ಸರಣಿ ಆಡಲು ಅವಕಾಶ ಮಾಡಿಕೊಟ್ಟಿರುವುದರಿಂದ ಅಫ್ಘಾನಿಸ್ತಾನ್ ತಂಡ ಟಿ20 ವಿಶ್ವಕಪ್​ನಲ್ಲೂ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಬಹುದು. ಆದರೆ ಟಿ20 ವಿಶ್ವಕಪ್​ಗೂ ಮುನ್ನ ಅಫ್ಘಾನಿಸ್ತಾನ್- ಪಾಕಿಸ್ತಾನ್ ವಿರುದ್ದ ಸರಣಿ ಆಡಬೇಕಿದೆ. ಈ ಸರಣಿ ನಡೆದರೆ ಅಫ್ಘಾನಿಸ್ತಾನ್ ತಂಡದ ಕ್ರಿಕೆಟ್ ಭವಿಷ್ಯ ಸ್ಪಷ್ಟವಾಗಲಿದೆ.

ರಶೀದ್ ಖಾನ್ ಪ್ರತಿರೋಧ:

ತಾಲಿಬಾನಿಗಳು ಈ ಹಿಂದೆ ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಸ್ಟಾರ್ ಕ್ರಿಕೆಟಿಗ ರಶೀದ್ ಖಾನ್ ಸೋಷಿಯಲ್ ಮೀಡಿಯಾ ಮೂಲಕ ಪ್ರತಿರೋಧ ತೋರಿದ್ದರು. “ನಮ್ಮ ದೇಶ ಸಂಕಷ್ಟದಲ್ಲಿದೆ. ದೇಶದ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಎಲ್ಲರೂ ಹುತಾತ್ಮರಾಗುತ್ತಿದ್ದಾರೆ. ಜನರು ಭಯದಿಂದ ಪಲಾಯನ ಮಾಡುವುದನ್ನು ಮುಂದುವರಿಸುತ್ತಿದ್ದಾರೆ. ದಯವಿಟ್ಟು ನಮ್ಮವರನ್ನು ಕೊಲ್ಲುವುದನ್ನು ತಡೆಯಿರಿ. ನಮಗೆ ಸಹಾಯ ಮಾಡಿ. ” ಎಂದು ರಶೀದ್ ಖಾನ್ ವಿಶ್ವ ನಾಯಕರಲ್ಲಿ ಮನವಿ ಮಾಡಿದ್ದರು.

ಅಷ್ಟೇ ಅಲ್ಲದೆ ತಾಲಿಬಾನಿಗಳು ಅಫ್ಘಾನಿಸ್ತಾನದ ಧ್ವಜವನ್ನು ಕೆಳಗಿಸುತ್ತಿದ್ದಂತೆ ಇತ್ತ ಇಂಗ್ಲೆಂಡ್​ನಲ್ಲಿ ದಿ ಹಂಡ್ರೇಡ್ ಲೀಗ್​ ಆಡುತ್ತಿದ್ದ ರಶೀದ್ ಖಾನ್  ತನ್ನ ರಾಷ್ಟ್ರ ಧ್ವಜದ ಚಿತ್ರದೊಂದಿಗೆ ಕಣಕ್ಕಿಳಿದಿದ್ದರು. ಟ್ರೆಂಟ್ ರಾಕೆಟ್ಸ್ ತಂಡದ ಪರ ಆಡಿದ್ದ ಸ್ಪಿನ್ ಮಾಂತ್ರಿಕ ಮುಖದ ಮೇಲೆ ಅಫ್ಘಾನ್ ಧ್ವಜವನ್ನು ಚಿತ್ರಿಸಿ ಮೈದಾನಕ್ಕಿಳಿದಿದ್ದರು. ಈ ಮೂಲಕ ದೇಶದ ಮೇಲಿನ ತನ್ನ ಪ್ರೀತಿಯನ್ನು ಹಾಗೂ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜದ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಪ್ರಯತ್ನ ಮಾಡಿದ್ದರು. ಅಲ್ಲದೆ ಇದುವೇ ನನ್ನ ರಾಷ್ಟ್ರೀಯ ಧ್ವಜ ಎಂದು ಪತಾಕೆ ಬದಲಿಸಿದ ತಾಲಿಬಾನಿಗಳಿಗೆ ಪರೋಕ್ಷ ಸಂದೇಶ ರವಾನಿಸಿದ್ದರು. ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ತಾಲಿಬಾನಿಗಳು ರಶೀದ್ ಖಾನ್ ವಿರುದ್ದ ಕ್ರಮ ಕೈಗೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: IPL 2022: ಐಪಿಎಲ್ ಹೊಸ ತಂಡಗಳಿಗೆ ಮೂಲ ಬೆಲೆ ಫಿಕ್ಸ್​: ಇಷ್ಟು ಮೊತ್ತ ನೀಡಿ ಖರೀದಿಸುವವರು ಯಾರು?

ಇದನ್ನೂ ಓದಿ: Pradeep Narwal: ಪ್ರೊ ಕಬಡ್ಡಿ ಲೀಗ್​ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಪ್ರದೀಪ್ ನರ್ವಾಲ್

ಇದನ್ನೂ ಓದಿ: ವಿಶ್ವದ ಅತೀ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಬಿಡುಗಡೆ

(Taliban says Afghanistan Cricket will continue without interruption)

Published On - 9:08 pm, Tue, 31 August 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?