VIDEO: ಕೆಣಕಿದ ಬಾಂಗ್ಲಾ ಬೌಲರ್: ವಿರಾಟ್ ಕೊಹ್ಲಿ ಫುಲ್ ಸೈಲೆಂಟ್

|

Updated on: Jun 23, 2024 | 8:31 AM

T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಗೆದ್ದು ಬೀಗಿದ್ದ ಭಾರತ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧ ಸಹ ಜಯ ಸಾಧಿಸಿದೆ. ಇನ್ನು ಟೀಮ್ ಇಂಡಿಯಾ ತನ್ನ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ.

VIDEO: ಕೆಣಕಿದ ಬಾಂಗ್ಲಾ ಬೌಲರ್: ವಿರಾಟ್ ಕೊಹ್ಲಿ ಫುಲ್ ಸೈಲೆಂಟ್
Tanzim - Virat Kohli
Follow us on

T20 World Cup 2024: ಟಿ20 ವಿಶ್ವಕಪ್​ನ 47ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ತಂದುಕೊಡುವಲ್ಲಿ ಯಶಸ್ವಿಯಾದರು.

ಮೊದಲ ವಿಕೆಟ್​ಗೆ 39 ರನ್ ಪೇರಿಸಿ ರೋಹಿತ್ ಶರ್ಮಾ (23) ಶಕೀಬ್ ಅಲ್ ಹಸನ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 27 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 37 ರನ್ ಬಾರಿಸಿದ್ದರು.

ಆದರೆ 9ನೇ ಓವರ್​ನಲ್ಲಿ ದಾಳಿಗಿಳಿದ ಯುವ ವೇಗಿ ತಂಝಿಮ್ ಹಸನ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಕೊಹ್ಲಿ ಕ್ಲೀನ್ ಬೌಲ್ಡ್ ಆದರು. ಇತ್ತ ವಿಕೆಟ್ ಸಿಗುತ್ತಿದ್ದಂತೆ ತಂಝಿಮ್ ಆಕ್ರಮಣಕಾರಿ ಸಂಭ್ರಮಾಚರಣೆಯೊಂದಿಗೆ ಕಿಂಗ್ ಕೊಹ್ಲಿಯನ್ನು ಕೆಣಕಲು ಯತ್ನಿಸಿದ್ದರು.

ಆದರೆ ಇದ್ಯಾವುದನ್ನೂ ಗಮನಿಸದೇ ವಿರಾಟ್ ಕೊಹ್ಲಿ ಪೆವಿಲಿಯನ್​ನತ್ತ ಮುಖ ಮಾಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಇದೀಗ ಬಾಂಗ್ಲಾದೇಶ್ ಬೌಲರ್​ನ ಈ ಆಕ್ರಮಣಕಾರಿ ಸಂಭ್ರಮಾಚರಣೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗೆದ್ದು ಬೀಗಿದ ಟೀಮ್ ಇಂಡಿಯಾ:

ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಹಾರ್ದಿಕ್ ಪಾಂಡ್ಯ 27 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 50 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

ಇದನ್ನೂ ಓದಿ: Pat Cummins: 2 ಹ್ಯಾಟ್ರಿಕ್ಸ್: ವಿಶ್ವ ದಾಖಲೆ ನಿರ್ಮಿಸಿದ ಕಮಿನ್ಸ್

197 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಪರ ನಾಯಕ ನಜ್ಮುಲ್ ಹೊಸೈನ್ ಶಾಂಟೋ 32 ಎಸೆತಗಳಲ್ಲಿ 40 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 50 ರನ್​ಗಳ ಭರ್ಜರಿ ಜಯ ಸಾಧಿಸಿದೆ.