ಎರಡೂವರೆ ವರ್ಷಗಳಲ್ಲಿ ಟೀಮ್ ಇಂಡಿಯಾ ಮುಂದಿದೆ 3 ವಿಶ್ವಕಪ್

Virat Kohli - Rohit Sharma: ಟೀಮ್ ಇಂಡಿಯಾ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ಖಚಿತಪಡಿಸಿದ್ದಾರೆ. ಹೀಗಾಗಿ ಈ ಇಬ್ಬರು ದಿಗ್ಗಜರು ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆ ಜಂಟಿಯಾಗಿ ಆಯೋಜಿಸುವ 2027ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಎರಡೂವರೆ ವರ್ಷಗಳಲ್ಲಿ ಟೀಮ್ ಇಂಡಿಯಾ ಮುಂದಿದೆ 3 ವಿಶ್ವಕಪ್
Team India

Updated on: Mar 12, 2025 | 2:03 PM

11 ವರ್ಷಗಳಲ್ಲಿ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲದ ಟೀಮ್ ಇಂಡಿಯಾ ಇದೀಗ 9 ತಿಂಗಳಲ್ಲಿ 2 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಈ ಎರಡು ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಟೀಮ್ ಇಂಡಿಯಾ ಮುಂದಿರುವುದು ಟಿ20 ವಿಶ್ವಕಪ್. ಈ ವಿಶ್ವಕಪ್ ಬೆನ್ನಲ್ಲೇ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿ ಕೂಡ ಆಡಲಿದೆ. ಇದರ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್ಸ್​ ಫೈನಲ್ ಆಡುವ ಅವಕಾಶ ಕೂಡ ದೊರೆಯಲಿದೆ. ಅಂದರೆ ಮುಂದಿನ ಎರಡೂವರೆಗೆ ವರ್ಷಗಳಲ್ಲಿ ಮೂರು ವಿಶ್ವಕಪ್ ಗೆಲ್ಲುವ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಟಿ20 ವಿಶ್ವಕಪ್:

2026ರ ಟಿ20 ವಿಶ್ವಕಪ್ ಫೆಬ್ರವರಿ ಮತ್ತು ಮಾರ್ಚ್​ನಲ್ಲಿ ನಡೆಯಲಿದೆ. ಮುಂದಿನ ವರ್ಷ ನಡೆಯಲಿರುವ ಈ ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ.

ಏಕದಿನ ವಿಶ್ವಕಪ್:

2027 ರಲ್ಲಿ ವಿಶ್ವಕಪ್ ಜರುಗಲಿದೆ. ಅಕ್ಟೋಬರ್ – ನವೆಂಬರ್ ನಡುವೆ ಜರುಗಲಿರುವ ಈ ಟೂರ್ನಿಯನ್ನು ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿದೆ.

ಇದನ್ನೂ ಓದಿ
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್:

2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯವು ಜೂನ್ ತಿಂಗಳಲ್ಲಿ ನಡೆಯಲಿದೆ. ಈ ಸರಣಿಯ ಫೈನಲ್ ಪಂದ್ಯಕ್ಕೆ ಇಂಗ್ಲೆಂಡ್​ನ ಲಾರ್ಡ್ಸ್​ ಮೈದಾನ ಆತಿಥ್ಯವಹಿಸಲಿದೆ.

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾಗೆ ಉತ್ತಮ ಅವಕಾಶ:

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈವರೆಗೆ ಏಕದಿನ ವಿಶ್ವಕಪ್ ಗೆದ್ದಿಲ್ಲ. ಇದೀಗ ಒನ್​ಡೇ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿರುವ ಹಿಟ್​ಮ್ಯಾನ್ 2027 ರಲ್ಲಿ ಕಣಕ್ಕಿಳಿದರೆ ಏಕದಿನ ವಿಶ್ವಕಪ್ ಕನಸನ್ನು ಈಡೇರಿಸಿಕೊಳ್ಳಬಹುದು.

ಹಾಗೆಯೇ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸಹ ಗೆದ್ದಿಲ್ಲ. ಈ ಇಬ್ಬರು ದಿಗ್ಗಜರು 2027 ರವರೆಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆದರೆ WTC ಚಾಂಪಿಯನ್ ಪಟ್ಟವನ್ನು ಸಹ ತಮ್ಮದಾಗಿಸಿಕೊಳ್ಳಬಹುದು.

ಇದನ್ನೂ ಓದಿ: ಯುಜ್ವೇಂದ್ರ ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

ಆದರೆ 37 ವರ್ಷದ ರೋಹಿತ್ ಶರ್ಮಾ ಇನ್ನೆರಡು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದೇ ಪ್ರಶ್ನೆ. ಅತ್ತ ವಿರಾಟ್ ಕೊಹ್ಲಿ ಉತ್ತಮ ಫಿಟ್​ನೆಸ್ ಹೊಂದಿದ್ದು, ಹೀಗಾಗಿ 2027ರ ಏಕದಿನ ವಿಶ್ವಕಪ್​ವರೆಗೆ ಮುಂದುವರೆಯುವುದನ್ನು ಎದುರು ನೋಡಬಹುದು. ಆದರೆ ರೋಹಿತ್ ಶರ್ಮಾ ಫಾರ್ಮ್​ನಲ್ಲಿದ್ದರೆ ಮಾತ್ರ ಮುಂದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.