AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಕ್ರಿಕೆಟಿಗ ಮತ್ತು ಬಿಸಿಸಿಐ ಅಧಿಕಾರಿಯಿಂದ ಲೈಂಗಿಕ ಕಿರುಕುಳ! ಭೂಗತ ಪಾತಕಿ ಪತ್ನಿಯ ಗಂಭೀರ ಆರೋಪ: ವರದಿ

ರಹ್ನುಮಾ ಭಾಟಿ ತನ್ನ ದೂರಿನಲ್ಲಿ ಪತಿ ತನ್ನ ವ್ಯಾಪಾರ ಪಾಲುದಾರರು ಮತ್ತು ಪ್ರಭಾವಿ ವ್ಯಕ್ತಿಗಳೊಂದಿಗೆ ದೈಹಿಕ ಸಂಬಂಧವನ್ನು ಹೊಂದಲು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಟೀಂ ಇಂಡಿಯಾ ಕ್ರಿಕೆಟಿಗ ಮತ್ತು ಬಿಸಿಸಿಐ ಅಧಿಕಾರಿಯಿಂದ ಲೈಂಗಿಕ ಕಿರುಕುಳ! ಭೂಗತ ಪಾತಕಿ ಪತ್ನಿಯ ಗಂಭೀರ ಆರೋಪ: ವರದಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 12, 2021 | 8:41 PM

Share

ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್, ಮಾಜಿ ವೇಗದ ಬೌಲರ್ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹಿರಿಯ ಅಧಿಕಾರಿಯ ವಿರುದ್ಧ ಅತ್ಯಾಚಾರ ಮತ್ತು ಕಿರುಕುಳದ ಆರೋಪಗಳನ್ನು ಮಾಡಲಾಗಿದೆ. ಮುಂಬೈನ ಮಹಿಳೆಯೊಬ್ಬರು ಪೊಲೀಸರಿಗೆ ನೀಡಿದ ದೂರಿನಲ್ಲಿ ಪತಿ ಸೇರಿದಂತೆ ಕ್ರಿಕೆಟರ್ ವಿರುದ್ಧ ಆರೋಪ ಮಾಡಿದ್ದಾರೆ. ಆರೋಪಿ ಮಹಿಳೆ ರೆಹನುಮಾ ಭಾಟಿ, ದರೋಡೆಕೋರ ರಿಯಾಜ್ ಭಾಟಿ ಅವರ ಪತ್ನಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಶಂಕಿತ ಸಹಚರ ಮತ್ತು ಅನೇಕ ಪ್ರಕರಣಗಳಲ್ಲಿ ಈತ ಆರೋಪಿ. ಎರಡು ತಿಂಗಳ ಹಿಂದೆ ಮುಂಬೈ ಪೊಲೀಸರಿಗೆ ದೂರು ಬಂದಿತ್ತು. ಆದರೆ, ಈ ಪ್ರಕರಣದಲ್ಲಿ ಪೊಲೀಸ್ ತನಿಖೆ ಮುಂದುವರಿದಿದ್ದು, ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ರಹ್ನುಮಾ ಭಾಟಿ ಸೆಪ್ಟೆಂಬರ್ 24 ರಂದು ಮುಂಬೈನ ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಈ ದೂರಿನಲ್ಲಿ ಮಹಿಳೆ ತನ್ನ ದರೋಡೆಕೋರ ಪತಿ, ಭಾರತ ತಂಡದ ಆಲ್‌ರೌಂಡರ್, ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಮಾಜಿ ಬೌಲರ್ ಮತ್ತು ರಿಯಾಜ್ ಭಾಟಿ ವಿರುದ್ಧ ಅತ್ಯಾಚಾರ ಮತ್ತು ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಆದರೆ, ಪೊಲೀಸರು ಈ ಪ್ರಕರಣದಲ್ಲಿ ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ.

ಪೊಲೀಸರಿಗೆ ಇನ್ನೂ ಸಾಕ್ಷ್ಯ ಸಿಕ್ಕಿಲ್ಲ ಸುದ್ದಿ ವೆಬ್‌ಸೈಟ್ ದಿ ಪ್ರಿಂಟ್‌ನ ವರದಿಯ ಪ್ರಕಾರ, ರಹ್ನುಮಾ ಭಾಟಿ ತನ್ನ ದೂರಿನಲ್ಲಿ ಪತಿ ತನ್ನ ವ್ಯಾಪಾರ ಪಾಲುದಾರರು ಮತ್ತು ಪ್ರಭಾವಿ ವ್ಯಕ್ತಿಗಳೊಂದಿಗೆ ದೈಹಿಕ ಸಂಬಂಧವನ್ನು ಹೊಂದಲು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಆರೋಪಕ್ಕೆ ಸಂಬಂಧಿಸಿದಂತೆ ಅವರು ಯಾವುದೇ ದಿನಾಂಕ, ಸ್ಥಳ ಅಥವಾ ವಿಳಾಸವನ್ನು ನೀಡಿಲ್ಲ. ದೂರು ಸ್ವೀಕರಿಸಿದಾಗಿನಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿಕೊಂಡಿವೆ, ಆದರೆ ಇದುವರೆಗೆ ಆರೋಪಗಳನ್ನು ದೃಢೀಕರಿಸುವ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಈ ಪ್ರಕರಣದಲ್ಲಿ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ.

ಪೊಲೀಸರು ಸಹಕರಿಸುತ್ತಿಲ್ಲ: ಭಾಟಿ ಕಳೆದ ಎರಡು ತಿಂಗಳಲ್ಲಿ ಹಲವು ಬಾರಿ ಪೊಲೀಸರನ್ನು ಸಂಪರ್ಕಿಸಿ ಎಫ್‌ಐಆರ್ ದಾಖಲಿಸುವಂತೆ ಮನವಿ ಮಾಡಿದ್ದರೂ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ತನಗೆ ಸಹಕರಿಸುತ್ತಿಲ್ಲ ಎಂದು ದೂರುದಾರರು ಉಲ್ಲೇಖಿಸಿದ್ದಾರೆ ಎಂದು ವೆಬ್‌ಸೈಟ್ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಭಾಟಿ ಅವರು ಅನೇಕ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಈ ವಿಷಯದಲ್ಲಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರೂ ಅವರಿಂದ ಹಣಕ್ಕಾಗಿ ಬೇಡಿಕೆಯಿಡಲಾಗುತ್ತಿದೆ ಎಂದು ಭಾಟಿ ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.

Published On - 8:40 pm, Fri, 12 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ