IND vs AUS T20I Series: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಿರಿಯರಿಗೆ ರೆಸ್ಟ್, ಹೊಸ ಮುಖಗಳಿಗೆ ಮಣೆ

Indian team for the Australia T20I series: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಸೂರ್ಯಕುಮಾರ್ ಯಾದವ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಸೇರಿದಂತೆ ಕೆಲ ಸ್ಟಾರ್ ಆಟಗಾರರು ವಿಶ್ವಕಪ್ ಅಭಿಯಾನದ ನಂತರ ವಿಶ್ರಾಂತಿ ಪಡೆದಿದ್ದಾರೆ.

IND vs AUS T20I Series: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಿರಿಯರಿಗೆ ರೆಸ್ಟ್, ಹೊಸ ಮುಖಗಳಿಗೆ ಮಣೆ
IND Squad AUS T20I
Follow us
|

Updated on:Nov 21, 2023 | 7:11 AM

ನವೆಂಬರ್ 23 ರಿಂದ ಪ್ರಾರಂಭವಾಗಲಿರುವ ಐದು ಪಂದ್ಯಗಳ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಗಾಯದ ನಂತರ ವಿಶ್ವಕಪ್ ತಂಡದಿಂದ ಹೊರಗುಳಿದಿದ್ದ ಆಲ್ ರೌಂಡರ್ ಅಕ್ಷರ್ ಪಟೇಲ್ ಈ ಪಂದ್ಯದ ಮೂಲಕ ಮರಳಲಿದ್ದಾರೆ. ಏತನ್ಮಧ್ಯೆ, ಭಾರತದ ವಿಶ್ವಕಪ್ ಅಭಿಯಾನದ ಭಾಗವಾಗಿದ್ದ ಸೂರ್ಯಕುಮಾರ್ ಯಾದವ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಸೇರಿದಂತೆ ಕೆಲ ಸ್ಟಾರ್ ಆಟಗಾರರು ವಿಶ್ವಕಪ್ ಅಭಿಯಾನದ ನಂತರ ವಿಶ್ರಾಂತಿ ಪಡೆದಿದ್ದಾರೆ. ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ಮೊದಲ ಮೂರು ಟಿ20ಗಳಿಂದ ಹೊರಗುಳಿದಿದ್ದಾರೆ. ರಾಯ್‌ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ20 ಪಂದ್ಯಗಳಿಗೆ ಉಪನಾಯಕನಾಗಿ ಅಯ್ಯರ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಇದನ್ನೂ ಓದಿ
Image
ವಿಶ್ವಕಪ್ ಮೇಲೆ ಕಾಲಿಟ್ಟು ಕೂತ ಮಿಚೆಲ್ ಮಾರ್ಷ್, ಉಗಿದರು ನೆಟ್ಟಿಗರು
Image
ವಿಶ್ವಕಪ್ ಹಸ್ತಾಂತರಿಸಿ ಪ್ಯಾಟ್ ಕಮಿನ್ಸ್‌ ಕೈಕುಲುಕದೇ ಹೋದರೆ ಮೋದಿ?
Image
ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್‌ ಗೆದ್ದಿದೆ
Image
ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾಗಿ ನೈತಿಕ ಸ್ಥೈರ್ಯ ತುಂಬಿದ ಪ್ರಧಾನಿ ಮೋದಿ

ಹಾರ್ದಿಕ್-ಚಹಲ್-ಸಂಜು ಔಟ್

ಪಾದದ ಗಾಯದ ಸಮಸ್ಯೆಯಿಂದಾಗಿ ಸ್ಟಾರ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಗೆ ಗೈರಾಗಿದ್ದಾರೆ. ಇದರ ಜೊತೆಗೆ ಎಚ್ಚರಿ ಎಂಬಂತೆ ಯುಜ್ವೇಂದ್ರ ಚಹಲ್ ಮತ್ತು ಸಂಜು ಸ್ಯಾಮ್ಸನ್ ಅವರನ್ನು ಕೂಡ ಆಯ್ಕೆ ಮಾಡಲಾಗಿಲ್ಲ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಚಹಲ್ ಮತ್ತು ಸ್ಯಾಮ್ಸನ್ ಅವರನ್ನು ಕೈಬಿಟ್ಟ ನಿರ್ಧಾರವು ಅಭಿಮಾನಿಗಳಿಗೆ ದೊಡ್ಡ ಆಘಾತವಾಗಿದೆ. ಜಿತೇಶ್ ಶರ್ಮಾ ಅವರನ್ನು ನಿಯೋಜಿತ ವಿಕೆಟ್ ಕೀಪರ್-ಬ್ಯಾಟರ್ ಆಗಿ ಮತ್ತು ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಅವರನ್ನು ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ.

ಸೋಲಿನ ನಡುವೆಯೂ ಗುರು ದ್ರಾವಿಡ್ ದಾಖಲೆ ಮುರಿದ ಕನ್ನಡಿಗ ಕೆಎಲ್ ರಾಹುಲ್

ಅಹ್ಮದಾಬಾದ್‌ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಆರನೇ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ಜೊತೆಗೆ ತಂಡದಲ್ಲಿ ತನ್ವೀರ್ ಸಂಘ, ನಾಥನ್ ಎಲ್ಲಿಸ್ ಮತ್ತು ಸ್ಪೆನ್ಸರ್ ಜಾನ್ಸನ್ ಕೂಡ ಇದ್ದಾರೆ.

ಈ ಸರಣಿಯು ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಪ್ರಾರಂಭವಾಗಿ ಡಿಸೆಂಬರ್ 3 ರಂದು ಬೆಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ. ಉಳಿದ ಮೂರು ಪಂದ್ಯಗಳು ನವೆಂಬರ್ 26 ರಂದು ತಿರುವನಂತಪುರದಲ್ಲಿ, ನವೆಂಬರ್ 28 ರಂದು ಗುವಾಹಟಿಯಲ್ಲಿ ಮತ್ತು ಡಿಸೆಂಬರ್ 1 ರಂದು ನಾಗ್ಪುರದಲ್ಲಿ ನಡೆಯಲಿದೆ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್ (ನಾಯಕ), ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:03 am, Tue, 21 November 23

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್