AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಮುಂದುವರೆದ ಟೀಮ್ ಇಂಡಿಯಾದ ಕಠಿಣ ಅಭ್ಯಾಸ: 3ನೇ ದಿನದ ಶಿಬಿರದಲ್ಲಿ ಏನೆಲ್ಲ ನಡೆಯಿತು?

Team India Practice in Aluru: ಏಷ್ಯಾಕಪ್ 2023 ಟೂರ್ನಿಗೆ ರೋಹಿತ್ ಶರ್ಮಾ ನೇತೃತ್ವದ ಭಾರತದ ಕ್ರಿಕೆಟ್ ತಂಡದ ತಯಾರಿ ಭರ್ಜರಿ ಆಗಿ ನಡೆಯುತ್ತಿದೆ. ಬೆಂಗಳೂರಿನ ಆಲೂರಿನಲ್ಲಿ ಟೀಮ್ ಇಂಡಿಯಾ ಆಟಗಾರರು ಮೂರನೇ ದಿನದ ಶಿಬಿರದಲ್ಲಿ ಕೂಡ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್​ನಲ್ಲಿ ಸತತವಾಗಿ ಪ್ರ್ಯಾಕ್ಟೀಸ್ ಮಾಡುತ್ತಿರುವುದು ಕಂಡುಬಂತು.

Asia Cup 2023: ಮುಂದುವರೆದ ಟೀಮ್ ಇಂಡಿಯಾದ ಕಠಿಣ ಅಭ್ಯಾಸ: 3ನೇ ದಿನದ ಶಿಬಿರದಲ್ಲಿ ಏನೆಲ್ಲ ನಡೆಯಿತು?
KL Rahul Kohli and Rohit
Vinay Bhat
|

Updated on: Aug 27, 2023 | 7:00 AM

Share

ಪಾಕಿಸ್ತಾನ ಹಾಗೂ ಶ್ರೀಲಂಕಾದಲ್ಲಿ ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ 2023 (Asia Cup 2023) ಟೂರ್ನಿಗೆ ಭಾರತ ಕ್ರಿಕೆಟ್ ತಂಡದ ತಯಾರಿ ಭರ್ಜರಿ ಆಗಿ ಸಾಗುತ್ತಿದೆ. ಬೆಂಗಳೂರಿನ ಹೊರವಲಯದಲ್ಲಿರುವ ಆಲೂರಿನಲ್ಲಿ ಬೀಡುಬಿಟ್ಟಿರುವ ಭಾರತ ತಂಡದ ಆಟಗಾರರು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಒಟ್ಟು 6-ದಿನಗಳ ಕಾಲ ಟೀಮ್ ಇಂಡಿಯಾಕ್ಕೆ ಏಷ್ಯಾಕಪ್ ಶಿಬಿರ ಏರ್ಪಡಿಸಲಾಗಿದ್ದು, 3ನೇ ದಿನದಂದು ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಬ್ಯಾಟಿಂಗ್ ಪ್ರಯೋಗವನ್ನು ನಡೆಸಲಾಯಿತು.

ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ 2 ನೇ ದಿನದಂದು ಒಟ್ಟಿಗೆ ಬ್ಯಾಟಿಂಗ್ ಮಾಡಿದರೆ, ಮೂರನೇ ದಿನ ರೋಹಿತ್ ಮತ್ತು ಕೆಎಲ್ ರಾಹುಲ್ ಜೊತೆಯಾಗಿ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು. ಇದರ ನಡುವೆ, ವಿರಾಟ್ ಕೊಹ್ಲಿ ಸ್ಪಿನ್ನರ್​ಗಳ ವಿರುದ್ಧ ಹೆಚ್ಚು ಅಭ್ಯಾಸ ನಡೆಸಿದರು. ನೆಟ್ಸ್‌ನಲ್ಲಿ ಸ್ಪಿನ್ ಬೌಲರ್‌ಗಳನ್ನು ಎದುರಿಸಿ ಕೆಲವು ಸ್ವೀಪ್ ಶಾಟ್‌ಗಳನ್ನು ಆಡಿದರು. 34 ವರ್ಷದ ವರುಣ್ ಚಕ್ರವರ್ತಿ, ಹೃತಿಕ್ ಶೋಕೀನ್ ಮತ್ತು ರಾಹುಲ್ ಚಹಾರ್ ವಿರುದ್ಧ ಕೊಹ್ಲಿ ನೆಟ್ಸ್‌ನಲ್ಲಿ ಬ್ಯಾಟ್ ಮಾಡುತ್ತಿರುವುದು ಕಂಡುಬಂತು.

KL Rahul: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಕೆಎಲ್ ರಾಹುಲ್

ಸ್ಪಿನ್ನರ್​ಗಳ ವಿರುದ್ಧ ಆಡಿದ ಬಳಿಕ ಕೊಹ್ಲಿ ಅವರು ಕೆಲಹೊತ್ತು ವಿಶ್ರಾಂತಿ ತೆಗೆದುಕೊಂಡು ಎಡಗೈ ವೇಗಿ ಅನಿಕೇತ್ ಚೌಧರಿ ವಿರುದ್ಧ ವೇಗದ ಬೌಲಿಂಗ್ ಮೂಲಕ ಅಭ್ಯಾಸ ನಡೆಸಿದರು. ರೋಹಿತ್ ಶರ್ಮಾ ಕೂಡ ಶಾಹಿನ್ ಅಫ್ರಿದಿ ವಿರುದ್ಧ ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳಲು ಎತ್ತರದ ವೇಗಿ ಅನಿಕೇತ್ ವಿರುದ್ಧ ನೆಟ್ಸ್‌ನಲ್ಲಿ ಸುದೀರ್ಘ ಪ್ರ್ಯಾಕ್ಟೀಸ್ ನಡೆಸಿದರು.

3 ನೇ ದಿನದ ಶಿಬಿರವು ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ಕೆಲ ಶುಭ ಸುದ್ದಿಗಳನ್ನು ನೀಡಿದೆ. ಏಷ್ಯಾಕಪ್ ಶಿಬಿರದ 2ನೇ ದಿನದಂದು ನೆಟ್ಸ್‌ನಲ್ಲಿ ಬ್ಯಾಟ್ ಮಾಡಿದ ಕೆಎಲ್ ರಾಹುಲ್, ಶನಿವಾರ ವಿಕೆಟ್ ಕೀಪಿಂಗ್ ಗ್ಲೌಸ್ ತೊಟ್ಟು ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು. ಹೀಗಿದ್ದರೂ ರಾಹುಲ್ ಪಾಕಿಸ್ತಾನದ ವಿರುದ್ಧ ಭಾರತದ ಏಷ್ಯಾಕಪ್ ಆರಂಭಿಕ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.

ವಿರಾಟ್, ರೋಹಿತ್, ಮತ್ತು ಕೆಎಲ್ ರಾಹುಲ್ ಹೊರತುಪಡಿಸಿ, ಶ್ರೇಯಸ್ ಅಯ್ಯರ್ ಮತ್ತು ಆಲ್ರೌಂಡರ್ ಶಾರ್ದೂಲ್ ಠಾಕೂರ್ ಕೂಡ ನೆಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಶಾರ್ದೂಲ್ ಕೆಲ ಬಿಗ್ ಶಾಟ್ ಮೂಲಕ ಗಮನ ಸೆಳೆದರು. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಕುಲ್ದೀಪ್ ಯಾದವ್ ಆಲೂರಿನಲ್ಲಿನ ನೆಟ್ಸ್‌ನಲ್ಲಿ ಬೌಲಿಂಗ್ ಅಭ್ಯಾಸ ನಡೆಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?