AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದೇಶದಲ್ಲಿ ಮೊದಲ ಬಾರಿಗೆ ಟಿ20 ಸರಣಿ ಆಡಲಿದೆ ಭಾರತ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

Team India's Bangladesh Tour 2025: ಭಾರತ ಕ್ರಿಕೆಟ್ ತಂಡವು ಐಪಿಎಲ್ ಬಳಿಕ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಒಳಗೊಂಡ ಈ ಪ್ರವಾಸ ಆಗಸ್ಟ್ 17 ರಿಂದ ಆರಂಭವಾಗಲಿದೆ. 2026ರ ಟಿ20 ವಿಶ್ವಕಪ್‌ಗೆ ಇದು ಪ್ರಮುಖ ಸಿದ್ಧತೆಯಾಗಿದ್ದು, ರೋಹಿತ್ ಮತ್ತು ಕೊಹ್ಲಿಗೆ ಈ ಪ್ರವಾಸದಿಂದ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಈ ಸರಣಿಯು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಂತರ ನಡೆಯಲಿದೆ.

ಈ ದೇಶದಲ್ಲಿ ಮೊದಲ ಬಾರಿಗೆ ಟಿ20 ಸರಣಿ ಆಡಲಿದೆ ಭಾರತ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
Team India
ಪೃಥ್ವಿಶಂಕರ
|

Updated on: Apr 16, 2025 | 3:52 PM

Share

ಐಪಿಎಲ್ 2025  (IPL 2025)ರ ನಂತರ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಮಾಡಲಿದ್ದು, ಎರಡೂ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳು ನಡೆಯಲಿವೆ. ಇದಾದ ನಂತರ ಭಾರತ ತಂಡ ಏಕದಿನ ಮತ್ತು ಟಿ20 ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (BCCI) ಈ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಟೀಂ ಇಂಡಿಯಾದ (Team India) ಈ ಪ್ರವಾಸವು ಆಗಸ್ಟ್ 17 ರಿಂದ ಪ್ರಾರಂಭವಾಗಲಿದ್ದು, ಕೊನೆಯ ಪಂದ್ಯ ಆಗಸ್ಟ್ 31 ರಂದು ನಡೆಯಲಿದೆ. 2025 ರ ಚಾಂಪಿಯನ್ಸ್ ಟ್ರೋಫಿ ನಂತರ ಇದು ಟೀಂ ಇಂಡಿಯಾದ ಮೊದಲ ಬಿಳಿ ಚೆಂಡಿನ ಸರಣಿಯಾಗಿದೆ. ಇದಲ್ಲದೆ, ಇದು ಬಾಂಗ್ಲಾದೇಶದಲ್ಲಿ ಟೀಂ ಇಂಡಿಯಾದ ಮೊದಲ ಟಿ20 ಸರಣಿಯೂ ಆಗಿರುತ್ತದೆ.

ಬಾಂಗ್ಲಾದೇಶ ಪ್ರವಾಸದ ವೇಳಾಪಟ್ಟಿ ಪ್ರಕಟ

ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತ ತಂಡ ಮೊದಲು 3 ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯ ಮೊದಲ ಪಂದ್ಯ ಆಗಸ್ಟ್ 17 ರಂದು ಮಿರ್ಪುರದಲ್ಲಿ ನಡೆಯಲಿದೆ. ಇದಾದ ನಂತರ, ಎರಡನೇ ಏಕದಿನ ಪಂದ್ಯ ಆಗಸ್ಟ್ 20 ರಂದು ಮಿರ್ಪುರದಲ್ಲಿ ನಡೆಯಲಿದೆ. ನಂತರ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಆಗಸ್ಟ್ 23 ರಂದು ಚಿತ್ತಗಾಂಗ್‌ನಲ್ಲಿ ನಡೆಯಲಿದೆ. ಏಕದಿನ ಸರಣಿಯ ನಂತರ, 3 ಪಂದ್ಯಗಳ ಟಿ20 ಸರಣಿಯೂ ನಡೆಯಲಿದೆ. ಟಿ20 ಸರಣಿಯು ಆಗಸ್ಟ್ 26 ರಂದು ಚಿತ್ತಗಾಂಗ್‌ನಲ್ಲಿ ಪ್ರಾರಂಭವಾಗಲಿದೆ. ಟಿ20 ಸರಣಿಯ ಎರಡನೇ ಪಂದ್ಯ ಆಗಸ್ಟ್ 29 ರಂದು ಮತ್ತು ಮೂರನೇ ಪಂದ್ಯ ಆಗಸ್ಟ್ 31 ರಂದು ಮಿರ್ಪುರದಲ್ಲಿ ನಡೆಯಲಿದೆ.

ಭಾರತ- ಬಾಂಗ್ಲಾ ನಡುವೆ 6 ಪಂದ್ಯಗಳು

ಮೊದಲ ಏಕದಿನ ಪಂದ್ಯ – ಆಗಸ್ಟ್ 17 (ಮಿರ್ಪುರ್)

ಎರಡನೇ ಏಕದಿನ ಪಂದ್ಯ- ಆಗಸ್ಟ್ 20 (ಮಿರ್ಪುರ್)

ಮೂರನೇ ಏಕದಿನ ಪಂದ್ಯ – ಆಗಸ್ಟ್ 23 (ಚಟೋಗ್ರಾಮ್)

ಮೊದಲ ಟಿ20 ಪಂದ್ಯ – ಆಗಸ್ಟ್ 26 (ಚಟ್ಟೋಗ್ರಾಮ್)

ಎರಡನೇ ಟಿ20 ಪಂದ್ಯ- ಆಗಸ್ಟ್ 29 (ಮಿರ್ಪುರ್)

ಮೂರನೇ ಟಿ20 ಪಂದ್ಯ – ಆಗಸ್ಟ್ 31 (ಮಿರ್ಪುರ್)

2026 ರ ಟಿ20 ವಿಶ್ವಕಪ್‌ಗೆ ಸಿದ್ಧತೆ

2026 ರ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಮೂರು ಪಂದ್ಯಗಳ ಸರಣಿಯು ಭಾರತಕ್ಕೆ ಪ್ರಮುಖವಾಗಿದೆ. ಈ ಪಂದ್ಯಾವಳಿ ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಯತ್ನಿಸಲಿದೆ. ಕಳೆದ ವರ್ಷ ವೆಸ್ಟ್ ಇಂಡೀಸ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಭಾರತ ತಂಡ ಪ್ರಶಸ್ತಿಯನ್ನು ಗೆದ್ದಿತ್ತು.

ತ್ರಿಕೋನ ಸರಣಿಗೆ ಟೀಂ ಇಂಡಿಯಾ ಪ್ರಕಟ; ನಾಲ್ವರಿಗೆ ಗೇಟ್​ಪಾಸ್, 3 ಹೊಸ ಬೌಲರ್‌ಗಳಿಗೆ ಅವಕಾಶ

ಮತ್ತೊಂದೆಡೆ, ಎಲ್ಲರ ಕಣ್ಣುಗಳು ಏಕದಿನ ಸರಣಿಯ ಮೇಲೂ ಇರುತ್ತವೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈ ಪ್ರವಾಸದಲ್ಲಿ ತಂಡದೊಂದಿಗೆ ಹೋಗುತ್ತಾರೋ ಇಲ್ಲವೋ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಏಕೆಂದರೆ ಈ ಇಬ್ಬರೂ ಆಟಗಾರರು ಈಗ ಟೆಸ್ಟ್ ಮತ್ತು ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಾರೆ. ಅದೇ ಸಮಯದಲ್ಲಿ, ಈ ಸರಣಿಯು ಇಂಗ್ಲೆಂಡ್ ಪ್ರವಾಸದ ನಂತರ ಆರಂಭವಾಗಲಿದೆ. ಹೀಗಾಗಿ, ಈ ಸರಣಿಯಲ್ಲಿ ರೋಹಿತ್ ಮತ್ತು ವಿರಾಟ್‌ಗೆ ವಿಶ್ರಾಂತಿ ನೀಡಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು