
ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ 4ನೇ ಏಕದಿನ ಪಂದ್ಯದಲ್ಲಿ ಕೇವು 89 ರನ್ಗಳಿಗೆ ಆಲೌಟ್ ಆಗಿ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ ಇಂದು ಅದೇ ಮೈದಾನದಲ್ಲಿ ನಡೆದ ಐದನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ರೋಚಕ ಜಯ ಸಾಧಿಸುವ ಮೂಲಕ 5 ಪಂದ್ಯಗಳ ಏಕದಿನ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಸರಣಿಯ ಮೊದಲೆರಡು ಪಂದ್ಯಗಳನ್ನು ಭಾರತ ಗೆದ್ದುಕೊಂಡಿತ್ತು. ಆ ಬಳಿಕ ಮೂರನೇ ಪಂದ್ಯ ಮಳೆಯಿಂದ ರದ್ದಾಯಿತು. 4ನೇ ಏಕದಿನ ಪಂದ್ಯವನ್ನು ನ್ಯೂಜಿಲೆಂಡ್ ಗೆದ್ದುಕೊಂಡರೆ, ಐದನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 209 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 187 ರನ್ಗಳಿಗೆ ಆಲೌಟ್ ಆಗುವ ಮೂಲಕ 22 ರನ್ಗಳಿಂದ ಸೋಲೊಪ್ಪಿಕೊಂಡಿತು.
Published On - 3:23 pm, Sun, 15 November 26