Rohit Sharma: ಭಾರತಕ್ಕೆ ದೊಡ್ಡ ಆಘಾತ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್
Rohit Sharma has tested positive: ಲೀಸೆಸ್ಟರ್ಷೈರ್ ಕೌಂಟಿ ತಂಡದ ವಿರುದ್ಧ ನಾಲ್ಕು ದಿನಗಳ ಅಭ್ಯಾಸ ಪಂದ್ಯ ನಡೆಯುತ್ತಿರುವಾಗಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಕೊರೊನಾ ಸೋಂಕು ತಗುಲಿದೆ.
ಬಾಕಿ ಉಳಿದಿರುವ ಒಂದು ಟೆಸ್ಟ್ ಪಂದ್ಯದ ಜೊತೆ ಇಂಗ್ಲೆಂಡ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಾಗಿ ಆಂಗ್ಲರ ನಾಡಿಗೆ ತೆರಳಿರುವ ಭಾರತ ಕ್ರಿಕೆಟ್ ತಂಡಕ್ಕೆ (IND vs ENG) ಇದೀಗ ದೊಡ್ಡ ಆಘಾತ ಉಂಟಾಗಿದೆ. ಲೀಸೆಸ್ಟರ್ಷೈರ್ ಕೌಂಟಿ ತಂಡದ ವಿರುದ್ಧ ನಾಲ್ಕು ದಿನಗಳ ಅಭ್ಯಾಸ ಪಂದ್ಯ ನಡೆಯುತ್ತಿರುವಾಗಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಕೊರೊನಾ ಸೋಂಕು ತಗುಲಿದೆ. ಲೀಸೆಸ್ಟರ್ನಲ್ಲಿ ನಡೆದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಲ್ಲಿ ರೋಹಿತ್ ಶರ್ಮಾ ಅವರಿಗೆ ಕೋವಿಡ್ -19 (Covid-19) ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ರ್ಯಾಪಿಡ್ ಟೆಸ್ಟ್ ನಡೆಸಲಾಗಿದ್ದು, ಇದರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಹಿಟ್ಮ್ಯಾನ್ ಅಭ್ಯಾಸ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಕೂಡ ಮಾಡಲಿಲ್ಲ. ರೋಹಿತ್ಗೆ ಕೊರೊನ ಪಾಸಿಟಿವ್ ಬಂದಿರುವ ಬಗ್ಗೆ ಬಿಸಿಸಿಐ ಟ್ವೀಟ್ ಮಾಡುವ ಮೂಲಕ ಮಾಹಿತಿ ತಿಳಿಸಿದೆ.
ಸದ್ಯ ರೋಹಿತ್ ಶರ್ಮಾ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೈದ್ಯಕೀಯ ತಂಡದೊಂದಿಗೆ ಪ್ರತ್ಯೇಕವಾಗಿ ಇರಿಸಲಾಗಿದೆ. “ಶನಿವಾರ ನಡೆಸಿದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ (ಆರ್‌ಎಟಿ) ನಂತರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಪ್ರಸ್ತುತ ತಂಡದ ಹೋಟೆಲ್ನಲ್ಲಿ ಪ್ರತ್ಯೇಕವಾಗಿದ್ದಾರೆ ಮತ್ತು ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ,” ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
Ranji Trophy Final: ದೀಪಕ್ ನೋಡಿ ಸಿಎಸ್ಕೆ ಎಂದು ಕೂಗಿದವರಿಗೆ ಖಡಕ್ ರಿಪ್ಲೇ ನೀಡಿದ ಆರ್ಸಿಬಿ ಫ್ಯಾನ್ಸ್; ವಿಡಿಯೋ
UPDATE – #TeamIndia Captain Mr Rohit Sharma has tested positive for COVID-19 following a Rapid Antigen Test (RAT) conducted on Saturday. He is currently in isolation at the team hotel and is under the care of the BCCI Medical Team.
— BCCI (@BCCI) June 25, 2022
ಅಭ್ಯಾಸ ಪಂದ್ಯದ ಮೊದಲ ದಿನ 246 ರನ್ ಗಳಿಸಿ ಡಿಕ್ಕೇರ್ ಘೋಷಿಸಿದ್ದ ರೋಹಿತ್ ಪಡೆ ಬಳಿಕ ಉತ್ತಮ ಬೌಲಿಂಗ್ ಪ್ರದರ್ಶಿಸಿತು. ಲೀಸೆಸ್ಟರ್ಷೈರ್ ಪರ ಆಡುತ್ತಿರುವ ರಿಷಭ್ ಪಂತ್ ಅರ್ಧಶತಕ ಸಿಡಿಸಿದರೂ ಭಾರತಕ್ಕೆ ದೊಡ್ಡ ತೊಂದರೆ ಆಗಲಿಲ್ಲ. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಬೌಲಿಂಗ್ ದಾಳಿಗೆ ತತ್ತರಿಸಿದ ಲೀಸೆಸ್ಟರ್ಷೈರ್ 244 ರನ್ಗೆ ಆಲೌಟ್ ಆಯಿತು. ಬಳಿಕ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ದ್ವಿತೀಯ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 80 ರನ್ ಗಳಿಸಿದೆ. 82 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು.
ಮೂರನೇ ದಿನದಾಟದಲ್ಲಿ ಕೂಡ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಬೊಂಬಾಟ್ ಅರ್ಧಶತಕ ಗಳಿಸಿದರು. ಇದರೊಂದಿಗೆ ಇಬ್ಬರೂ ಲಯಕ್ಕೆ ಮರಳುವ ಭರವಸೆ ಮೂಡಿಸಿದರು. ಭಾರತ ತಂಡವು ಎರಡನೇ ಇನಿಂಗ್ಸ್‌ನಲ್ಲಿ 364 ರನ್ ಗಳಿಸಿದೆ. ಒಟ್ಟು 366 ರನ್‌ಗಳ ಮುನ್ನಡೆ ಸಾಧಿಸಿದೆ. ರವೀಂದ್ರ ಜಡೇಜ (ಬ್ಯಾಟಿಂಗ್ 56) ಮತ್ತು ಮೊಹಮ್ಮದ್ ಸಿರಾಜ್ (ಬ್ಯಾಟಿಂಗ್ 1) ಕ್ರೀಸ್‌ನಲ್ಲಿದ್ದಾರೆ. ಇನಿಂಗ್ಸ್ ಆರಂಭಿಸಿದ ಭರತ್ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್‌ಗೆ 62 ರನ್ ಸೇರಿಸಿದರು. ಅಯ್ಯರ್ 89 ಎಸೆತಗಳಲ್ಲಿ 62 ರನ್ ಗಳಿಸಿದರು. ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ವಿರಾಟ್ 98 ಎಸೆತಗಳಲ್ಲಿ 67 ರನ್ ಗಳಿಸಿದರು. ಕೊಹ್ಲಿ ಬ್ಯಾಟ್ನಿಂದ 5 ಬೌಂಡರಿ ಮತ್ತು 2 ಸಿಕ್ಸರ್ಗಳು ಸೇರಿದ್ದವು. ಇಂದಿನ ಅಂತಿಮ ದಿನದಾಟ ಸಾಕಷ್ಟು ಕುತೂಹಲ ಕೆರಳಿಸಿದೆ.
ಮತ್ತೆ ತಂದೆಯಾಗಲಿದ್ದಾರೆ ರಾಬಿನ್ ಉತ್ತಪ್ಪ; ಪತ್ನಿ ಶೀತಲ್ ಬೇಬಿ ಬಂಪ್ ಫೋಟೋಗಳು ಸಖತ್ ವೈರಲ್
Published On - 7:17 am, Sun, 26 June 22