Rohit Sharma: ಭಾರತಕ್ಕೆ ದೊಡ್ಡ ಆಘಾತ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್

| Updated By: Vinay Bhat

Updated on: Jun 26, 2022 | 7:17 AM

Rohit Sharma has tested positive: ಲೀಸೆಸ್ಟರ್ಷೈರ್ ಕೌಂಟಿ ತಂಡದ ವಿರುದ್ಧ ನಾಲ್ಕು ದಿನಗಳ ಅಭ್ಯಾಸ ಪಂದ್ಯ ನಡೆಯುತ್ತಿರುವಾಗಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಕೊರೊನಾ ಸೋಂಕು ತಗುಲಿದೆ.

Rohit Sharma: ಭಾರತಕ್ಕೆ ದೊಡ್ಡ ಆಘಾತ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್
ರೋಹಿತ್ ಶರ್ಮಾ, ಆಡದ ಪಂದ್ಯಗಳು: ಟೆಸ್ಟ್-10, ODI-12, T20-9: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ನ್ಯೂಜಿಲೆಂಡ್ ವಿರುದ್ಧದ 5 ನೇ ಮತ್ತು ಅಂತಿಮ T20I, 3 ODI ಮತ್ತು 2 ಟೆಸ್ಟ್‌ಗಳನ್ನು ಗಾಯದ ಕಾರಣದಿಂದ ಕಳೆದುಕೊಂಡಿದ್ದಾರೆ. ಅಲ್ಲದೆ ಲಾಕ್‌ಡೌನ್ ನಂತರ ದೊಡ್ಡ ಬ್ರೇಕ್ ಕೂಡ ಸಿಕ್ಕಿತ್ತು. ಬಳಿಕ ರೋಹಿತ್, ಯುಎಇಯಲ್ಲಿ ನಡೆದ ಐಪಿಎಲ್‌ಗೆ ಫಿಟ್ ಆಗಿದ್ದರು. ಆದರೆ ಆಸ್ಟ್ರೇಲಿಯಾದಲ್ಲಿ ನಡೆದ ಮೂರು ODI ಮತ್ತು ಮೂರು T20I ಪಂದ್ಯಗಳ ಸರಣಿಗೂ ಮೊದಲು ಗಾಯಗೊಂಡರು. ಕೋವಿಡ್ ಪ್ರೋಟೋಕಾಲ್‌ನಿಂದಾಗಿ ಅವರು ಮೊದಲ ಎರಡು ಟೆಸ್ಟ್‌ಗಳನ್ನು ಸಹ ಆಡಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್​ನಲ್ಲಿ 4 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್ ಮತ್ತು ಟಿ20 ವಿಶ್ವಕಪ್ ಆಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಎರಡು ಟೆಸ್ಟ್‌ಗಳ ಮೊದಲು ಅವರು ವಿರಾಮ ತೆಗೆದುಕೊಂಡರು. ಗಾಯದ ಕಾರಣ ಅವರು ಡಿಸೆಂಬರ್-ಜನವರಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿಲ್ಲ. ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್-ಶ್ರೀಲಂಕಾ ಸರಣಿಯಲ್ಲಿ ಅವರು ಪುನರಾಗಮನ ಮಾಡಿದರು. ಬಳಿಕ ಸಂಪೂರ್ಣ ಐಪಿಎಲ್ ಆಡಿದ್ದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟಿ20ಯಿಂದ ವಿಶ್ರಾಂತಿ ಪಡೆದಿದ್ದರು. ಕೋವಿಡ್‌ನಿಂದಾಗಿ ಇಂಗ್ಲೆಂಡ್ ವಿರುದ್ಧ ಎಡ್ಜ್‌ಬಾಸ್ಟನ್ ಟೆಸ್ಟ್ ಆಡಲು ಸಾಧ್ಯವಾಗಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ರೋಹಿತ್ ಆಡಿದ್ದಕ್ಕಿಂತ ಹೆಚ್ಚು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದಾರೆ.
Follow us on

ಬಾಕಿ ಉಳಿದಿರುವ ಒಂದು ಟೆಸ್ಟ್​ ಪಂದ್ಯದ ಜೊತೆ ಇಂಗ್ಲೆಂಡ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಾಗಿ ಆಂಗ್ಲರ ನಾಡಿಗೆ ತೆರಳಿರುವ ಭಾರತ ಕ್ರಿಕೆಟ್ ತಂಡಕ್ಕೆ (IND vs ENG) ಇದೀಗ ದೊಡ್ಡ ಆಘಾತ ಉಂಟಾಗಿದೆ. ಲೀಸೆಸ್ಟರ್ಷೈರ್ ಕೌಂಟಿ ತಂಡದ ವಿರುದ್ಧ ನಾಲ್ಕು ದಿನಗಳ ಅಭ್ಯಾಸ ಪಂದ್ಯ ನಡೆಯುತ್ತಿರುವಾಗಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಕೊರೊನಾ ಸೋಂಕು ತಗುಲಿದೆ. ಲೀಸೆಸ್ಟರ್​​​ನಲ್ಲಿ ನಡೆದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಲ್ಲಿ ರೋಹಿತ್ ಶರ್ಮಾ ಅವರಿಗೆ ಕೋವಿಡ್ -19 (Covid-19) ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ರ್ಯಾಪಿಡ್ ಟೆಸ್ಟ್ ನಡೆಸಲಾಗಿದ್ದು, ಇದರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಹಿಟ್​ಮ್ಯಾನ್ ಅಭ್ಯಾಸ ಪಂದ್ಯದ​ ಎರಡನೇ ಇನ್ನಿಂಗ್ಸ್​​ನಲ್ಲಿ ಬ್ಯಾಟಿಂಗ್​ ಕೂಡ ಮಾಡಲಿಲ್ಲ. ರೋಹಿತ್​​ಗೆ ಕೊರೊನ ಪಾಸಿಟಿವ್ ಬಂದಿರುವ ಬಗ್ಗೆ ಬಿಸಿಸಿಐ ಟ್ವೀಟ್ ಮಾಡುವ ಮೂಲಕ ಮಾಹಿತಿ ತಿಳಿಸಿದೆ.

ಸದ್ಯ ರೋಹಿತ್ ಶರ್ಮಾ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೈದ್ಯಕೀಯ ತಂಡದೊಂದಿಗೆ ಪ್ರತ್ಯೇಕವಾಗಿ ಇರಿಸಲಾಗಿದೆ. “ಶನಿವಾರ ನಡೆಸಿದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ (ಆರ್‌ಎಟಿ) ನಂತರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಪ್ರಸ್ತುತ ತಂಡದ ಹೋಟೆಲ್​​ನಲ್ಲಿ ಪ್ರತ್ಯೇಕವಾಗಿದ್ದಾರೆ ಮತ್ತು ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ,” ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಇದನ್ನೂ ಓದಿ
Ranji Trophy Final 2022: 4ನೇ ದಿನದಾಟ ಅಂತ್ಯ; ಚಾಂಪಿಯನ್ ಪಟ್ಟಕ್ಕೇರುವ ಸನಿಹದಲ್ಲಿ ಮಧ್ಯಪ್ರದೇಶ
NZ vs ENG: ಅಯ್ಯೋಯ್ಯೋ ಇದೆಂಥಾ ಆಚರಣೆ; ಶತಕ ಸಿಡಿಸಿದ ಆಟಗಾರನಿಗೆ ಚಪ್ಪಲಿ, ಶೂಸ್ ತೋರಿಸಿದ ಅಭಿಮಾನಿಗಳು..!
NZ vs ENG: ಕಿವೀಸ್ ಎದುರು ಆಂಗ್ಲ ಜೋಡಿಗಳ ಅಬ್ಬರ; 62 ವರ್ಷಗಳ ಹಳೆಯ ದಾಖಲೆ ಉಡೀಸ್..!
SL vs AUS: ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೆ ಲಂಕಾ ತಂಡ ಪ್ರಕಟ; ನಿಷೇಧಕ್ಕೊಳಗಾಗಿದ್ದ ಸ್ಪಿನ್ನರ್​ಗೆ ಅವಕಾಶ

Ranji Trophy Final: ದೀಪಕ್ ನೋಡಿ ಸಿಎಸ್​ಕೆ ಎಂದು ಕೂಗಿದವರಿಗೆ ಖಡಕ್ ರಿಪ್ಲೇ ನೀಡಿದ ಆರ್​ಸಿಬಿ ಫ್ಯಾನ್ಸ್; ವಿಡಿಯೋ

 

ಅಭ್ಯಾಸ ಪಂದ್ಯದ ಮೊದಲ ದಿನ 246 ರನ್ ಗಳಿಸಿ ಡಿಕ್ಕೇರ್ ಘೋಷಿಸಿದ್ದ ರೋಹಿತ್ ಪಡೆ ಬಳಿಕ ಉತ್ತಮ ಬೌಲಿಂಗ್ ಪ್ರದರ್ಶಿಸಿತು. ಲೀಸೆಸ್ಟರ್ಷೈರ್ ಪರ ಆಡುತ್ತಿರುವ ರಿಷಭ್ ಪಂತ್ ಅರ್ಧಶತಕ ಸಿಡಿಸಿದರೂ ಭಾರತಕ್ಕೆ ದೊಡ್ಡ ತೊಂದರೆ ಆಗಲಿಲ್ಲ. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಬೌಲಿಂಗ್ ದಾಳಿಗೆ ತತ್ತರಿಸಿದ ಲೀಸೆಸ್ಟರ್ಷೈರ್ 244 ರನ್​ಗೆ ಆಲೌಟ್ ಆಯಿತು. ಬಳಿಕ ತನ್ನ ಎರಡನೇ ಇನ್ನಿಂಗ್ಸ್​ ಆರಂಭಿಸಿರುವ ಭಾರತ ದ್ವಿತೀಯ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 80 ರನ್ ಗಳಿಸಿದೆ. 82 ರನ್​ಗಳ ಮುನ್ನಡೆ ಪಡೆದುಕೊಂಡಿತ್ತು.

ಮೂರನೇ ದಿನದಾಟದಲ್ಲಿ ಕೂಡ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಬೊಂಬಾಟ್ ಅರ್ಧಶತಕ ಗಳಿಸಿದರು. ಇದರೊಂದಿಗೆ ಇಬ್ಬರೂ ಲಯಕ್ಕೆ ಮರಳುವ ಭರವಸೆ ಮೂಡಿಸಿದರು. ಭಾರತ ತಂಡವು ಎರಡನೇ ಇನಿಂಗ್ಸ್‌ನಲ್ಲಿ 364 ರನ್ ಗಳಿಸಿದೆ. ಒಟ್ಟು 366 ರನ್‌ಗಳ ಮುನ್ನಡೆ ಸಾಧಿಸಿದೆ. ರವೀಂದ್ರ ಜಡೇಜ (ಬ್ಯಾಟಿಂಗ್ 56) ಮತ್ತು ಮೊಹಮ್ಮದ್ ಸಿರಾಜ್ (ಬ್ಯಾಟಿಂಗ್ 1) ಕ್ರೀಸ್‌ನಲ್ಲಿದ್ದಾರೆ. ಇನಿಂಗ್ಸ್ ಆರಂಭಿಸಿದ ಭರತ್ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್‌ಗೆ 62 ರನ್ ಸೇರಿಸಿದರು. ಅಯ್ಯರ್ 89 ಎಸೆತಗಳಲ್ಲಿ 62 ರನ್‌ ಗಳಿಸಿದರು. ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ವಿರಾಟ್ 98 ಎಸೆತಗಳಲ್ಲಿ 67 ರನ್‌ ಗಳಿಸಿದರು. ಕೊಹ್ಲಿ ಬ್ಯಾಟ್​ನಿಂದ 5 ಬೌಂಡರಿ ಮತ್ತು 2 ಸಿಕ್ಸರ್​ಗಳು ಸೇರಿದ್ದವು. ಇಂದಿನ ಅಂತಿಮ ದಿನದಾಟ ಸಾಕಷ್ಟು ಕುತೂಹಲ ಕೆರಳಿಸಿದೆ.

ಮತ್ತೆ ತಂದೆಯಾಗಲಿದ್ದಾರೆ ರಾಬಿನ್ ಉತ್ತಪ್ಪ; ಪತ್ನಿ ಶೀತಲ್ ಬೇಬಿ ಬಂಪ್ ಫೋಟೋಗಳು ಸಖತ್ ವೈರಲ್

Published On - 7:17 am, Sun, 26 June 22