ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್

|

Updated on: Nov 16, 2024 | 11:53 AM

South Africa vs India: ಸೌತ್ ಆಫ್ರಿಕಾ-ಭಾರತ ನಡುವಣ 4 ಪಂದ್ಯಗಳ ಟಿ20 ಸರಣಿ ಮುಕ್ತಾಯಗೊಂಡಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಸೌತ್ ಆಫ್ರಿಕಾ ಒಂದು ಪಂದ್ಯದಲ್ಲಿ ಗೆಲುವು ದಾಖಲಿಸಿದೆ.

ಸೌತ್ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆಲುವು ದಾಖಲಿಸಿತ್ತು. ಇದಾದ ಬಳಿಕ ಬ್ಯಾಕ್ ಟು ಬ್ಯಾಕ್ ಎರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿ ಟೀಮ್ ಇಂಡಿಯಾ ಸರಣಿಯನ್ನು ವಶಪಡಿಸಿಕೊಂಡಿದೆ.

ಈ ಸರಣಿ ಗೆಲುವಿನ ಬಳಿಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ಸಂಪ್ರದಾಯವನ್ನು ಮುಂದುವರೆಸಿದ್ದು ವಿಶೇಷವಾಗಿತ್ತು. ಅಂದರೆ ಟ್ರೋಫಿ ಗೆದ್ದ ಬಳಿಕ ಚೊಚ್ಚಲ ಸರಣಿ ಆಡಿದ ಆಟಗಾರರಿಗೆ ಕಪ್ ನೀಡುವ ವಿಶಿಷ್ಠ ಸಂಪ್ರದಾಯಕ್ಕೆ ಧೋನಿ ನಾಂದಿ ಹಾಡಿದ್ದರು.

ಈ ಸಂಪ್ರದಾಯವನ್ನು ಆ ಬಳಿಕ ನಾಯಕರಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮುಂದುವರೆಸಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೂಡ ಅದೇ ಹಾದಿಯಲ್ಲೇ ಸಾಗಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧ ಸರಣಿ ಗೆದ್ದ ಬಳಿಕ ಟ್ರೋಫಿ ಸ್ವೀಕರಿಸಿದ ಸೂರ್ಯಕುಮಾರ್ ಯಾದವ್ ಅದನ್ನು ಚೊಚ್ಚಲ ಬಾರಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ ರಮಣ್​ದೀಪ್ ಸಿಂಗ್ ಹಾಗೂ ವಿಜಯಕುಮಾರ್ ವೈಶಾಕ್ ಅವರ ಕೈಗೆ ನೀಡಿದರು. ಇದೀಗ ಟೀಮ್ ಇಂಡಿಯಾ ನಾಯಕನ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.