ಫೈನಲ್ ಬಳಿಕ ಟೀಮ್ ಇಂಡಿಯಾ ಸಂಭ್ರಮ ಹೇಗಿತ್ತು? ಇಲ್ಲಿದೆ ಎಕ್ಸ್ಕ್ಲೂಸಿವ್ ವಿಡಿಯೋ
Champions Trophy Final 2025: ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 50 ಓವರ್ಗಳಲ್ಲಿ 251 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 49 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 4 ವಿಕೆಟ್ಗಳ ಜಯ ಸಾಧಿಸಿ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.
ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಗೆ ತೆರೆ ಬಿದ್ದಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ ಇದು ಭಾರತ ತಂಡದ ನಾಲ್ಕನೇ ಚಾಂಪಿಯನ್ಸ್ ಟ್ರೋಫಿ. ಇದಕ್ಕೂ ಮುನ್ನ 2000 ರಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಹಾಗೂ 2013 ರಲ್ಲಿ ಮಹೇಂದ್ರ ಸಿಂಗ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು.
ಇದೀಗ ರೋಹಿತ್ ಶರ್ಮಾ ಸಾರಥ್ಯದಲ್ಲಿ ಭಾರತ ತಂಡವು ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ 2024ರ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮತ್ತೊಮ್ಮೆ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಸಾಧನೆಯೊಂದಿಗೆ ಟೀಮ್ ಇಂಡಿಯಾ ಸಂಭ್ರಮಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಆ ವಿಡಿಯೋದ ತುಣುಕನ್ನು ಈ ಮೇಲೆ ನೀಡಲಾಗಿದೆ.