AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಮುಂಬೈನಲ್ಲಿ ಟೀಂ ಇಂಡಿಯಾ ವಿಜಯೋತ್ಸವ, ತೆರೆದ ಬಸ್​ನಲ್ಲಿ ವಿಶ್ವಕಪ್​ನೊಂದಿಗೆ ರೋಡ್ ಶೋ

ಟಿ20 ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾ ಈಗಾಗಲೇ ಬಾರ್ಬಡಾಸ್​ನಿಂದ ಹೊರಟ್ಟಿದ್ದು, ನಾಳೆ(ಜುಲೈ 04) ನವದೆಹಲಿಗೆ ಬಂದಿಳಿಯಲಿದೆ. ಬಳಿಕ ಭಾರತ ತಂಡ ವಿಶ್ವಕಪ್ ಹಿಡಿದು ಪ್ರಧಾನಿ ನರೇಂದ್ರ ನಿವಾಸಕ್ಕೆ ಭೇಟಿ ನೀಡಲಿದೆ. ನಂತರ ಮುಂಬೈಗೆ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಸಂಭ್ರಮಾಚರಣೆ ಮನೆ ಮಾಡಿದ್ದು, ಚಾಂಪಿಯನ್ಸ್​​ಗಳನ್ನ ಅದ್ಧೂರಿಯಾಗಿ ಬರಮಾಡಿಕೊಳ್ಳಲು ಸಕಲ ಸಿದ್ಧತೆಗಳು ನಡೆದಿವೆ. ಹಾಗಾದ್ರೆ, ಮುಂಬೈನಲ್ಲಿ ವಿಜಯಯೋತ್ಸವ ಎಲ್ಲಿ ನಡೆಯಲಿದೆ? ಸಂಭ್ರಮಾಚರಣೆ ಹೇಗೆ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ನಾಳೆ ಮುಂಬೈನಲ್ಲಿ ಟೀಂ ಇಂಡಿಯಾ ವಿಜಯೋತ್ಸವ, ತೆರೆದ ಬಸ್​ನಲ್ಲಿ ವಿಶ್ವಕಪ್​ನೊಂದಿಗೆ ರೋಡ್ ಶೋ
ಟೀಮ್ ಇಂಡಿಯಾ
ರಮೇಶ್ ಬಿ. ಜವಳಗೇರಾ
|

Updated on:Jul 03, 2024 | 10:36 PM

Share

ಬಿಸಿಸಿಐ ವ್ಯವಸ್ಥೆ ಮಾಡಿರುವ ಚಾರ್ಟರ್​ ಪ್ಲೈಟ್​ ಮೂಲಕ ಬುಧವಾರ ಬಾರ್ಬಡೋಸ್​ನಿಂದ ಹೊರಟಿರುವ ಟಿ20 ವಿಶ್ವಕಪ್​ ವಿಜೇತ(T20 World Cup Winners) ಟೀಮ್ ಇಂಡಿಯಾ(Team India) ನಾಳೆ (ಜುಲೈ 04) ನವದೆಹಲಿಗೆ ಬಂದಿಳಿಯಲಿದೆ. ಇತ್ತ ಮುಂಬೈನಲ್ಲಿ ವಿಜಯೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಗುರುವಾರ ಸಂಜೆ 5ರ ಸುಮಾರಿಗೆ ಭಾರತ ತಂಡವನ್ನು ತೆರೆದ ಬಸ್​​ನಲ್ಲಿ ಮೆರವಣಿಗೆ ಮಾಡಲಾಗುತ್ತದೆ. ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್‌ನಿಂದ ಮೆರವಣಿಗೆ ಮೂಲಕ ತೆರೆದ ಬಸ್​ನಲ್ಲಿ ವಾಂಖೆಡೆ ಸ್ಟೇಡಿಯಂಗೆ ಕರೆತರಲಾಗುತ್ತದೆ.

ಈ ರೋಡ್​ ಶೋನಲ್ಲಿ ಭಾರತ ತಂಡದ ಎಲ್ಲಾ ಆಟಗಾರರು ವಿಶ್ವಕಪ್​ನೊಂದಿಗೆ ತೆರೆದ ಬಸ್​ನಲ್ಲಿ ಅಭಿಮಾನಿಗಳತ್ತ ಕೈಬೀಸುತ್ತ ವಾಂಖೆಡೆ ಕ್ರೀಡಾಂಗಣಕ್ಕೆ ಬಂದು ವಿಜಯೋತ್ಸವ ಆಚರಿಸಲಿದ್ದಾರೆ. ಇದೇ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಘೋಷಣೆ ಮಾಡಿದ್ದ 125 ಕೋಟಿ ರೂಪಾಯಿ ಬಹುಮಾನವನ್ನು ತಂಡಕ್ಕೆ ನೀಡಲಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಟ್ರೋಫಿಯೊಂದಿಗೆ ವಿಮಾನ ಹತ್ತಿದ ಚಾಂಪಿಯನ್ಸ್, ಮೋದಿ ಭೇಟಿಗೆ ಮುಹೂರ್ತ ಫಿಕ್ಸ್​

ಈ ಒಂದು ವಿಜಯೋತ್ಸವದ  ಘಳಿಗೆಯನ್ನು ಕಣ್ತುಂಬಿಕೊಳ್ಳಲು,  ಟೀಂ ಇಂಡಿಯಾ ಜೊತೆ ಸಂಭ್ರಮಾಚರಣೆ ಮಾಡಲು ಫ್ಯಾನ್ಸ್​ಗೂ ಸಹ ಅವಕಾಶ ನೀಡಲಾಗಿದ್ದು, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಕ್ರಿಕೆಟ್​ ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಸಂಭ್ರಮ ಮನೆ ಮಾಡಿದೆ.

ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು. ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿತ್ತು. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿತ್ತು. ಹೀಗಾಗಿ ಭಾರತ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿತ್ತು. ಇದೀಗ ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Wed, 3 July 24

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More