AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಗೆ ಸ್ಪಷ್ಟ ಸಂದೇಶ ರವಾನಿಸಿದ ಗಂಭೀರ್

2027ರ ಏಕದಿನ ವಿಶ್ವಕಪ್​ಗಾಗಿ ಹೊಸ ತಂಡವನ್ನು ಕಟ್ಟಲು ಗೌತಮ್ ಗಂಭೀರ್ ಬಿಸಿಸಿಐ ಮುಂದೆ ಬೇಡಿಕೆಯಿಟ್ಟಿದ್ದಾರೆ. ಈ ಬೇಡಿಕೆಗೆ ಬಿಸಿಸಿಐ ಕಡೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೀಗಾಗಿ 2025ರ ಚಾಂಪಿಯನ್ಸ್ ಟ್ರೋಫಿ ಬಳಿಕ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಅದರಂತೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಏಕದಿನ ಕೆರಿಯರ್ ಅಂತ್ಯಗೊಂಡರೂ ಅಚ್ಚರಿಪಡಬೇಕಿಲ್ಲ.

Virat Kohli: ವಿರಾಟ್ ಕೊಹ್ಲಿಗೆ ಸ್ಪಷ್ಟ ಸಂದೇಶ ರವಾನಿಸಿದ ಗಂಭೀರ್
Virat Kohli
ಝಾಹಿರ್ ಯೂಸುಫ್
|

Updated on: Jul 20, 2024 | 12:10 PM

Share

ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಏಕದಿನ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇನ್ನು ಉಭಯ ತಂಡಗಳ ಉಪನಾಯಕನಾಗಿ ಕಾಣಿಸಿಕೊಂಡಿರುವುದು ಶುಭ್​ಮನ್ ಗಿಲ್. ಇಲ್ಲಿ ಉಪನಾಯಕನ ಸ್ಥಾನಕ್ಕೆ 24 ವರ್ಷದ ಶುಭ್​ಮನ್ ಗಿಲ್ ಅವರ ಆಯ್ಕೆಯು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಆದರೆ ಇಂತಹದೊಂದು ಅಚ್ಚರಿಯ ಹಿಂದಿರುವ ವ್ಯಕ್ತಿ ಟೀಮ್ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್.

ಈ ಒಂದು ಆಯ್ಕೆಯ ಮೂಲಕ ಗೌತಮ್ ಗಂಭೀರ್ ಟೀಮ್ ಇಂಡಿಯಾದ ಹಿರಿಯ ಆಟಗಾರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಬಳಿಕ ರೋಹಿತ್ ಶರ್ಮಾ ಏಕದಿನ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತ. ಅಂದರೆ ಚಾಂಪಿಯನ್ಸ್ ಟ್ರೋಫಿ ಬಳಿಕ ರೋಹಿತ್ ಶರ್ಮಾ ಮತ್ತೆ ಏಕದಿನ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಆದರೆ ವಿರಾಟ್ ಕೊಹ್ಲಿಯ ನಡೆಯೇನು ಎಂಬುದೇ ಕುತೂಹಲ. ಅದಕ್ಕೂ ಮುನ್ನವೇ ಕೊಹ್ಲಿಗೆ ಸ್ಪಷ್ಟ ಸಂದೇಶ ರವಾನಿಸಲು ಗಂಭೀರ್ ಇಲ್ಲಿ ಗಿಲ್ ಅವರನ್ನು ಉಪನಾಯಕನಾಗಿ ಆಯ್ಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಏಕೆಂದರೆ ಗೌತಮ್ ಗಂಭೀರ್ ಏಕದಿನ ಕ್ರಿಕೆಟ್​​ಗಾಗಿ ಹೊಸ ತಂಡವನ್ನು ಕಟ್ಟುವ ಇರಾದೆಯಲ್ಲಿದ್ದಾರೆ. 2027 ಏಕದಿನ ವಿಶ್ವಕಪ್ ಅನ್ನು ಮುಂದಿಟ್ಟುಕೊಂಡು ಗೌತಮ್ ಭರ್ಜರಿ ಪ್ಲ್ಯಾನ್ ರೂಪಿಸುತ್ತಿದ್ದಾರೆ. ಅಂದರೆ ಮುಂದಿನ 2 ವರ್ಷದೊಳಗೆ ಗಂಭೀರ್ ಯುವ ಪಡೆಯನ್ನೊಳಗೊಂಡ ಏಕದಿನ ತಂಡವನ್ನು ರೂಪಿಸುವುದು ಸ್ಪಷ್ಟ.

ಇದೇ ಕಾರಣಕ್ಕಾಗಿ ಹಿರಿಯ ಆಟಗಾರರಾದ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಅವರನ್ನೆಲ್ಲಾ ಹೊರಗಿಟ್ಟು 24 ವರ್ಷದ ಶುಭ್​ಮನ್ ಗಿಲ್​ಗೆ ಉಪನಾಯಕತ್ವ ನೀಡಿರುವುದು. ಇಲ್ಲಿ ಯುವ ಆಟಗಾರನನ್ನು ನಾಯಕನ ಸ್ಥಾನಕ್ಕೇರಿಸುವ ಸೂಚನೆ ನೀಡುವ ಮೂಲಕ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರನ್ನು 2027ರ ಏಕದಿನ ವಿಶ್ವಕಪ್​ಗೆ ಪರಿಗಣಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಗಂಭೀರ್ ರವಾನಿಸಿದ್ದಾರೆ. ಅಲ್ಲದೆ ಚಾಂಪಿಯನ್ಸ್ ಟ್ರೋಫಿಯ ಬಳಿಕ ಏಕದಿನ ತಂಡದಲ್ಲಿ ಬದಲಾವಣೆಯಾಗಲಿದೆ ಎಂಬುದರ ಮುನ್ಸೂಚನೆ ಕೂಡ ಇದಾಗಿದೆ.

2025 ರಲ್ಲಿ ನಡೆಯಲಿರುವ ಚಾಂಪಿಯನ್ಸ್​ ಟ್ರೋಫಿಯು ರೋಹಿತ್ ಶರ್ಮಾ ಪಾಲಿಗೆ ಕೊನೆಯ ಸೀಮಿತ ಓವರ್​ಗಳ ಟೂರ್ನಿ ಆಗಲಿದೆ. ಇದಾಗ್ಯೂ ವಿರಾಟ್ ಕೊಹ್ಲಿ ಭಾರತ ತಂಡದಲ್ಲಿ ಮುಂದುವರೆಯುವ ಇರಾದೆಯಲ್ಲಿದ್ದಾರೆ. ಆದರೆ 2027ರ ಏಕದಿನ ವಿಶ್ವಕಪ್​ ವೇಳೆಗೆ ಕೊಹ್ಲಿಗೆ 38 ವರ್ಷ ಆಗಲಿದೆ. ಹೀಗಾಗಿ ವಿಶ್ವಕಪ್ ತಂಡದಲ್ಲಿ ಕೊಹ್ಲಿಗೆ ಚಾನ್ಸ್ ನೀಡಲು ಗಂಭೀರ್ ಸುತಾರಂ ಒಪ್ಪುದಿಲ್ಲ ಎನ್ನಬಹುದು.

ಹೀಗಾಗಿಯೇ ಚಾಂಪಿಯನ್ಸ್ ಟ್ರೋಫಿ ಬಳಿಕ ವಿರಾಟ್ ಕೊಹ್ಲಿ ಏಕದಿನ ತಂಡದಿಂದ ಹೊರಗುಳಿಯಲು ಗೌತಮ್ ಗಂಭೀರ್ ಬಯಸಿದ್ದಾರೆ. ಅಲ್ಲದೆ ಶುಭ್​ಮನ್ ಗಿಲ್ ಅವರನ್ನು ಮುಂದಿಟ್ಟು 2027ರ ಏಕದಿನ ವಿಶ್ವಕಪ್​ಗಾಗಿ ಈಗಲೇ ತಂಡವನ್ನು ಕಟ್ಟುವ ಸೂಚನೆಯನ್ನು ಸಹ ನೀಡಿದ್ದಾರೆ.

ಇದನ್ನೂ ಓದಿ: KL Rahul: ರಾಹುಲ್ ಪಾಲಿಗೆ ರಾಹುಕಾಲ: ಉಪನಾಯಕತ್ವ ಕೈ ತಪ್ಪಿದ್ದೇಕೆ?

ಇಲ್ಲಿ ರೋಹಿತ್ ಶರ್ಮಾ ಅವರಂತೆ ವಿರಾಟ್ ಕೊಹ್ಲಿಯ ಕೆರಿಯರ್ ಅಂತ್ಯಕ್ಕೆ ಕೌಂಟ್ ಡೌನ್ ಅಂತು ಶುರುವಾಗಿದೆ ಅಥವಾ ಗೌತಮ್ ಗಂಭೀರ್ ಕೌಂಟ್ ಡೌನ್ ಶುರು ಮಾಡಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಬಳಿಕ ವಿರಾಟ್ ಕೊಹ್ಲಿ ಏಕದಿನ ತಂಡದಲ್ಲಿ ಮುಂದುವರೆಯಲಿದ್ದಾರಾ? ಎಂಬುದೇ ಈಗ ಯಕ್ಷ ಪ್ರಶ್ನೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್