AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 14 ವರ್ಷಗಳ ನಂತರ ಭಾರತದ ವಿರುದ್ಧ ಟಿ20 ಸರಣಿ ಗೆದ್ದ ಇಂಗ್ಲೆಂಡ್‌

Team India's T20 Crisis: ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ಪ್ರದರ್ಶನ ನಿರಾಶಾದಾಯಕವಾಗಿದೆ. ಟಿ20 ಸ್ಪೆಷಲಿಸ್ಟ್‌ಗಳಿದ್ದರೂ, ಇಂಗ್ಲೆಂಡ್ ವಿರುದ್ಧ 14 ವರ್ಷಗಳ ಅಜೇಯ ಸರಣಿ ದಾಖಲೆ ಮುರಿದು ಹೀನಾಯ ಸೋಲು ಅನುಭವಿಸಿದೆ. ಐಪಿಎಲ್‌ನಲ್ಲಿ ಮಿಂಚಿದ ಆಟಗಾರರು ವಿದೇಶಿ ನೆಲದಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ತಂಡದ ಬಂಡವಾಳ ಬಟಾಬಯಲಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ಗೆಲುವಿಗಾಗಿ ಹಾತೊರೆಯುತ್ತಿದ್ದು, ಮುಂದಿನ ಜಿಂಬಾಬ್ವೆ ಪ್ರವಾಸದ ಮೇಲೆ ಎಲ್ಲರ ಚಿತ್ತವಿದೆ.

IND vs ENG: 14 ವರ್ಷಗಳ ನಂತರ ಭಾರತದ ವಿರುದ್ಧ ಟಿ20 ಸರಣಿ ಗೆದ್ದ ಇಂಗ್ಲೆಂಡ್‌
Team India
ಪೃಥ್ವಿಶಂಕರ
|

Updated on: Jul 10, 2026 | 2:56 PM

Share

ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸದಲ್ಲಿ ಟೀಂ ಇಂಡಿಯಾ (Team India ) ಈ ರೀತಿಯ ಪ್ರದರ್ಶನ ನೀಡುತ್ತದೆ ಎಂದು ಯಾರೂ ಕೂಡ ಊಹಿಸಿರಲಿಲ್ಲ. ಹಾಲಿ ಟಿ20 ಚಾಂಪಿಯನ್ ಎನಿಸಿಕೊಂಡಿರುವ ಭಾರತ ತಂಡದಲ್ಲಿ ಟಿ20 ಸ್ಪೆಷಲಿಸ್ಟ್​​ಗಳೇ ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ಐರ್ಲೆಂಡ್ ತಂಡವನ್ನು ಟೀಂ ಇಂಡಿಯಾ ಸುಲಭವಾಗಿ ಮಣಿಸುತ್ತದೆ ಮತ್ತು ಇಂಗ್ಲೆಂಡ್‌ ವಿರುದ್ಧವೂ ತನ್ನ ಅಜೇಯ ಓಟವನ್ನು ಮುಂದುವರೆಸುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಈ ಎರಡು ಸರಣಿಗಳಲ್ಲಿ ಟೀಂ ಇಂಡಿಯಾದ ಬಂಡವಾಳ ಬಟಾಬಯಲಾಗಿದೆ. ಐಪಿಎಲ್​ನಲ್ಲಿ ಮಿಂಚಿದವರಿಗೆ ವಿದೇಶಿ ನೆಲದಲ್ಲಿ ತೀವ್ರ ಮುಖಭಂಗವಾಗಿದೆ. ಇದರ ಪರಿಣಾಮವಾಗಿ ಟೀಂ ಇಂಡಿಯಾ ಕೂಡ ಬರೋಬ್ಬರಿ 14 ವರ್ಷಗಳ ನಂತರ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿ ಸೋತ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ.

14 ವರ್ಷಗಳ ಅಜೇಯ ಓಟಕ್ಕೆ ಬ್ರೇಕ್

ವಾಸ್ತವವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟಿ20 ಸರಣಿ 2012 ರ ಡಿಸೆಂಬರ್​ನಿಂದ ಪ್ರಾರಂಭವಾಯಿತು. ಉಭಯ ತಂಡಗಳ ನಡುವೆ ನಡೆದ ಮೊದಲ ಸರಣಿಯು 1-1 ರ ಡ್ರಾದಲ್ಲಿ ಕೊನೆಗೊಂಡಿತ್ತು. ಅದರ ನಂತರ, ಎರಡೂ ತಂಡಗಳ ನಡುವೆ ನಡೆದ ಪ್ರತಿಯೊಂದು ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದೆ. 2012 ಮತ್ತು 2026 ರ ನಡುವೆ, ಎರಡೂ ದೇಶಗಳ ನಡುವೆ ಒಟ್ಟು ಆರು ಟಿ20 ಸರಣಿಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ ಐದು ಸರಣಿಗಳನ್ನು ಗೆದ್ದುಕೊಂಡರೆ, ಒಂದು ಸರಣಿ ಡ್ರಾದಲ್ಲಿ ಕೊನೆಗೊಂಡಿತ್ತು.

ಆದರೆ ಎರಡೂ ತಂಡಗಳ ನಡುವೆ ನಡೆದ ಏಳನೇ ಟಿ20 ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು ಹೀನಾಯವಾಗಿ ಸೋಲಿಸಿರುವ ಇಂಗ್ಲೆಂಡ್‌ ತಂಡ 3-0 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಈ ಮೂಲಕ ಟೀಂ ಇಂಡಿಯಾದ ಕಳೆದ 14 ವರ್ಷಗಳ ಅಜೇಯ ಓಟಕ್ಕೆ ತೆರೆ ಬಿದ್ದಿದೆ.

IND vs ENG: ‘ನಾನು ಸಂತೋಷವಾಗಿದ್ದೇನೆ’; ಹೀನಾಯ ಸೋಲಿನ ನಂತರ ಶ್ರೇಯಸ್ ಹೇಳಿದ್ದಿದು

ಅಯ್ಯರ್ ನಾಯಕತ್ವದಲ್ಲಿ ಗೆಲುವು ಮರಿಚಿಕೆ

ಶ್ರೇಯಸ್ ಅಯ್ಯರ್ ಭಾರತ ಟಿ20 ತಂಡದ ನಾಯಕನಾಗಿ ಅಧಿಕಾರವಹಿಸಿಕೊಂಡ ಬಳಿಕ ತಂಡ ಗೆಲುವಿಗಾಗಿ ಹಾತೋರೆಯುವಂತ್ತಾಗಿದೆ. ಇದುವರೆಗೆ ಅಯ್ಯರ್ ನಾಯಕತ್ವದಲ್ಲಿ 6 ಪಂದ್ಯಗಳನ್ನಾಡಿದ್ದು, ಆಡಿರುವ 5 ಪಂದ್ಯಗಳಲ್ಲೂ ಭಾರತ ಸೋತಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಇಂಗ್ಲೆಂಡ್‌ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಬಹುದಾದರೂ, ಐರ್ಲೆಂಡ್ ವಿರುದ್ಧದ ವೈಟ್ ವಾಶ್ ಮುಖಭಂಗವನ್ನು ಭಾರತೀಯರಿಗೆ ಮರೆಯಲಾಗುತ್ತಿಲ್ಲ. ಪ್ರಸ್ತುತ ಸತತ ಸೋಲುಗಳಿಂದ ಕಂಗೆಟ್ಟಿರುವ ಭಾರತ ಟಿ20 ತಂಡ ಮುಂದಿನ ಜಿಂಬಾಬ್ವೆ ಪ್ರವಾಸದಲ್ಲಿ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ