AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್​ನಲ್ಲಿ 90ವರ್ಷಗಳ ಇತಿಹಾಸ ಬದಲಿಸುತ್ತಾ ಟೀಂ ಇಂಡಿಯಾ?

India vs England Test Series: ಭಾರತ ತಂಡ ಕಳೆದ 18 ವರ್ಷಗಳಿಂದ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಗೆಲ್ಲಲು ಹರಸಾಹಸ ಪಡುತ್ತಿದೆ. ಶುಭ್‌ಮನ್ ಗಿಲ್ ನೇತೃತ್ವದ ಯುವ ತಂಡ ಈ ಬಾರಿ ಆ ಚರಿತ್ರೆಯನ್ನು ಬದಲಿಸಲು ಪ್ರಯತ್ನಿಸುತ್ತಿದೆ. ಆದರೆ 1-2 ಅಂತರದಿಂದ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾಕ್ಕೆ ಮ್ಯಾಂಚೆಸ್ಟರ್‌ನಲ್ಲಿ ಗೆಲ್ಲುವುದು ದೊಡ್ಡ ಸವಾಲು. ಅಂಕಿಅಂಶಗಳು ಭಾರತದ ವಿರುದ್ಧ ಇರುವುದರಿಂದ ಸರಣಿ ಗೆಲುವು ಕಷ್ಟಕರವಾಗಿದೆ.

IND vs ENG: ಇಂಗ್ಲೆಂಡ್​ನಲ್ಲಿ 90ವರ್ಷಗಳ ಇತಿಹಾಸ ಬದಲಿಸುತ್ತಾ ಟೀಂ ಇಂಡಿಯಾ?
Team India
ಪೃಥ್ವಿಶಂಕರ
|

Updated on: Jul 21, 2025 | 10:30 PM

Share

ಕಳೆದ 18 ವರ್ಷಗಳಿಂದ ಇಂಗ್ಲೆಂಡ್‌ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವುದು ಟೀಂ ಇಂಡಿಯಾಕ್ಕೆ (Team India) ಕನಸಾಗಿಯೇ ಉಳಿದಿದೆ. ಕನ್ನಡಿಗ ರಾಹುಲ್ ದ್ರಾವಿಡ್ (Rahul Dravid) ನಾಯಕತ್ವದಲ್ಲಿ 2007 ರ ಪ್ರವಾಸದಲ್ಲಿ ಆಂಗ್ಲರನ್ನು ಮಣಿಸಿ ಟೆಸ್ಟ್ ಸರಣಿ ಗೆದ್ದಿದ್ದ ಟೀಂ ಇಂಡಿಯಾಕ್ಕೆ ಆ ಬಳಿಕ ಸರಣಿ ಗೆಲುವು ಮರಿಚಿಕೆಯಾಗಿ ಉಳಿದಿದೆ. ದ್ರಾವಿಡ್ ಹೊದ ಬಳಿಕ ಧೋನಿ, ಕೊಹ್ಲಿ ರೋಹಿತ್​ರಂತಹ ಪ್ರತಿಭಾವಂತ ನಾಯಕರೂ ಇಂಗ್ಲೆಂಡ್‌ ಪ್ರವಾಸ ಮಾಡಿದರಾದರೂ, ಆಂಗ್ಲರನ್ನು ಅವರ ನೆಲದಲ್ಲಿ ಮಣಿಸಿ ಟೆಸ್ಟ್ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಲಿಲ್ಲ. ಇದೀಗ ಶುಭ್​ಮನ್ ಗಿಲ್ (Shubman Gill) ನಾಯಕತ್ವದಲ್ಲಿ ಇಂಗ್ಲೆಂಡ್‌ ಪ್ರವಾಸ ಮಾಡಿರುವ ಯಂಗ್ ಇಂಡಿಯಾ ತನ್ನ ಸರಣಿ ಗೆಲುವಿನ ಬರವನ್ನು ನೀಗಿಸುತ್ತಾ ಎಂದು ಕೋಟ್ಯಾಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಸರಣಿಯಲ್ಲಿ ಈಗಾಗಲೇ 1- 2 ಅಂತರದಿಂದ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾಕ್ಕೆ ಅದೊಂದು ಅಂಕಿ-ಅಂಶಗಳ ಆತಂಕ ಕಾಡಲಾರಂಭಿಸಿದೆ

ಯುವ ನಾಯಕ ಶುಭಮನ್ ಗಿಲ್ ನೇತೃತ್ವದಲ್ಲಿ ಯುವ ಮತ್ತು ಅನನುಭವಿ ಭಾರತೀಯ ತಂಡ ಈ ಬಾರಿಯ ಇಂಗ್ಲೆಂಡ್ ಪ್ರವಾಸಕ್ಕೆ ಬಂದಿದೆ. ಅಂತಹ ಪರಿಸ್ಥಿತಿಯಲ್ಲಿ, ಆರಂಭದಿಂದಲೂ ಟೀಂ ಇಂಡಿಯಾದಿಂದ ಹೆಚ್ಚಿನ ನಿರೀಕ್ಷೆಗಳಿರಲಿಲ್ಲ. ಆದರೆ ಸರಣಿಯ ಮೊದಲ ಪಂದ್ಯದಿಂದ ಟೀಂ ಇಂಡಿಯಾ ನೀಡಿದ ಬಲವಾದ ಪ್ರದರ್ಶನ ಎಲ್ಲರನ್ನೂ ಅಚ್ಚರಿಗೊಳಿಸಿತು. ಗಿಲ್ ಪಡೆ ಲೀಡ್ಸ್​ ಪಂದ್ಯವನ್ನು ಸೋತರೂ, ತಂಡದಿಂದ ನಿರೀಕ್ಷೆಗೂ ಮೀರಿದ ಪ್ರದರ್ಶನ ಕಂಡುಬಂದಿತ್ತು. ಆದಾಗ್ಯೂ ತಂಡ ಸೋಲನ್ನು ಅನುಭವಿಸಬೇಕಾಯಿತು. ಆದರೆ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದ್ದ ಗಿಲ್ ಪಡೆ ಲಾರ್ಡ್ಸ್‌ ಟೆಸ್ಟ್ ಪಂದ್ಯವನ್ನು ಗೆಲುವಿನ ಅಂಚಿನಲ್ಲಿ ಕೈಚೆಲ್ಲಿತ್ತು.

ಟೀಂ ಇಂಡಿಂ ಎಂದಿಗೂ ಗೆದ್ದಿಲ್ಲ

ಲಾರ್ಡ್ಸ್ ಟೆಸ್ಟ್‌ನಲ್ಲಿನ ಸೋಲಿನೊಂದಿಗೆ, ಟೀಂ ಇಂಡಿಯಾ 5 ಪಂದ್ಯಗಳ ಸರಣಿಯಲ್ಲಿ 1-2 ರಿಂದ ಹಿನ್ನಡೆ ಅನುಭವಿಸಿದೆ. ಆದಾಗ್ಯೂ ಸರಣಿ ಜಯಿಸಲು ಭಾರತಕ್ಕೆ ಇನ್ನು ಅವಕಾಶವಿದೆ. ಏಕೆಂದರೆ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ಬಾಕಿ ಉಳಿದಿದ್ದು, ಈ ಎರಡೂ ಪಂದ್ಯಗಳನ್ನು ಭಾರತ ಗೆಲ್ಲುವಲ್ಲಿ ಯಶಸ್ವಿಯಾದರೆ, ಟೆಸ್ಟ್ ಸರಣಿ ಗಿಲ್ ಪಡೆಯ ಕೈಸೇರಲಿದೆ. ಆದರೆ ಇತಿಹಾಸವನ್ನು ಕೆದಕುತ್ತಾ ಹೋದರೆ, ಅಂಕಿ ಅಂಶಗಳು ಭಾರತದ ವಿರುದ್ಧ ಇರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಇಂಗ್ಲೆಂಡ್‌ ಪ್ರವಾಸದಲ್ಲಿ ಟೀಂ ಇಂಡಿಯಾದ ಈ ಹಿಂದಿನ ಸರಣಿಗಳ ದಾಖಲೆಗಳನ್ನು ಗಮನಿಸಿದಾಗ, ಭಾರತ ತಂಡ ಯಾವಾಗ ಸರಣಿಯಲ್ಲಿ 1-2 ಅಂತರದಿಂದ ಹಿನ್ನಡೆ ಅನುಭವಿಸಿದೆಯೋ ಆಗೆಲ್ಲ ಸರಣಿಯನ್ನು ಸೋತಿದೆ. ಇದು ಮಾತ್ರವಲ್ಲದೆ ಭಾರತ ತಂಡಕ್ಕೆ ಸರಣಿಯನ್ನು ಡ್ರಾ ಮಾಡಿಕೊಳ್ಳಲು ಸಹ ಸಾಧ್ಯವಾಗಿಲ್ಲ. ಇದೀಗ ಈ ಸರಣಿಯಲ್ಲಿ 1-2 ಅಂತರದಿಂದ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ 90 ವರ್ಷಗಳ ಇತಿಹಾಸವನ್ನು ಬದಲಿಸುತ್ತಾ ಎಂಬುದು ಕುತೂಹಲ ಮೂಡಿಸಿದೆ.

IND vs ENG: ಮ್ಯಾಂಚೆಸ್ಟರ್‌ ಟೆಸ್ಟ್​ಗೆ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್‌; ತಂಡದಲ್ಲಿ 1 ಬದಲಾವಣೆ

ಭಾರತಕ್ಕೆ ಮ್ಯಾಂಚೆಸ್ಟರ್‌ ಸವಾಲು

ಒಂದೆಡೆ ಇಂಗ್ಲೆಂಡ್‌ ನೆಲದಲ್ಲಿ ಟೀಂ ಇಂಡಿಯಾದ ದಾಖಲೆ ಹೇಳಿಕೊಳ್ಳುವಂತಿಲ್ಲ. ಇದೀಗ ಇದರ ಜೊತೆಗೆ ಮ್ಯಾಂಚೆಸ್ಟರ್ ಸವಾಲು ಟೀಂ ಇಂಡಿಯಾ ಮುಂದಿದೆ. ಅದೆನೇಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾ ಇದುವರೆಗೆ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಭಾರತವು ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಒಟ್ಟು 9 ಟೆಸ್ಟ್ ಪಂದ್ಯಗಳನ್ನು ಆಡಿದೆ, ಅದರಲ್ಲಿ 4 ರಲ್ಲಿ ಸೋತಿದ್ದರೆ, ಉಳಿದ 5 ಪಂದ್ಯಗಳು ಡ್ರಾ ಆಗಿವೆ. ಆದ್ದರಿಂದ, ಟೀಂ ಇಂಡಿಯಾ ಮ್ಯಾಂಚೆಸ್ಟರ್ ಕೋಟೆಯನ್ನು ಬೇದಿಸುವುದರ ಜೊತೆಗೆ ಇತಿಹಾಸವನ್ನು ಬದಲಿಸಲು ಸರಣಿಯನ್ನು ಸಹ ಗೆಲ್ಲಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು