Team India: ಟೀಮ್ ಇಂಡಿಯಾ ಪರ 3 ಪಂದ್ಯವಾಡಿದ ಆಟಗಾರ ಈಗ ಕೋಚ್..!

ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಅವರು ಮುಖ್ಯ ಕೋಚ್ ಹುದ್ದೆಗೆ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್‌ನ ಮೊದಲ ಆಯ್ಕೆಯಾಗಿತ್ತು. ಆದರೆ ಅವರು ಬೇರೊಂದು ತಂಡದ ಕೋಚ್ ಆಗಿ ನೇಮಕವಾಗಿದ್ದಾರೆ.

Team India: ಟೀಮ್ ಇಂಡಿಯಾ ಪರ 3 ಪಂದ್ಯವಾಡಿದ ಆಟಗಾರ ಈಗ ಕೋಚ್..!
Laxmi Ratan Shukla
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 26, 2022 | 1:53 PM

ಭಾರತದ ಪರ ಮೂರು ಏಕದಿನ ಪಂದ್ಯಗಳನ್ನು ಆಡಿದ್ದ ಆಟಗಾರ ಇದೀಗ ರಣಜಿ ತಂಡದ ಕೋಚ್ ಆಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 3 ಪಂದ್ಯಗಳಲ್ಲಿ ಕೇವಲ 18 ರನ್​​ಗಳಿಸಿದ್ದ ಪಶ್ಚಿಮ ಬಂಗಾಳದ ಲಕ್ಷ್ಮಿ ರತನ್ ಶುಕ್ಲಾ (Laxmi Ratan Shukla) ಇದೀಗ ಬಂಗಾಳ ರಣಜಿ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಬಂಗಾಳ ತಂಡದ ಕೋಚ್ ಅರುಣ್ ಲಾಲ್ ರಾಜೀನಾಮೆ ನೀಡಿದ್ದರು. ಹೀಗಾಗಿ ಬದಲಿ ತರಬೇತುದಾರರ ಆಯ್ಕೆ ಪ್ರಕ್ರಿಯೆಯನ್ನು ಬಂಗಾಳ ಕ್ರಿಕೆಟ್ ಸಂಸ್ಥೆ ಆರಂಭಿಸಿತ್ತು. ಅದರಂತೆ ಇದೀಗ 41 ವರ್ಷದ ಲಕ್ಷ್ಮಿ ರತನ್ ಶುಕ್ಲಾ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಹಾಗೆಯೇ ವಿ ರಾಮನ್ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಿಸಲಾಗಿದೆ.

ಅರುಣ್ ಲಾಲ್ ಬಂಗಾಳ ಕ್ರಿಕೆಟ್ ತಂಡದ ಯಶಸ್ವಿ ಕೋಚ್ ಆಗಿ ಗುರುತಿಸಿಕೊಂಡಿದ್ದರು. ಅವರ ತರಬೇತಿಯಲ್ಲಿ, ತಂಡವು 2019-20 ರ ರಣಜಿ ಟ್ರೋಫಿಯ ಫೈನಲ್‌ಗೆ ಪ್ರವೇಶಿಸಿತ್ತು. ಆದರೆ ಫೈನಲ್ ಹಣಾಹಣಿಯಲ್ಲಿ ಬಂಗಾಳ ತಂಡವು ಮಧ್ಯಪ್ರದೇಶದ ವಿರುದ್ದ ಸೋಲನುಭವಿಸಿತು. ಇದಾಗ್ಯೂ ಅರುಣ್ ಲಾಲ್ ಕಳೆದ ತಿಂಗಳವರೆಗೆ ತಂಡದ ಕೋಚ್ ಆಗಿ ಮುಂದುವರೆದಿದ್ದರು. ಆದರೆ ಇತ್ತೀಚೆಗೆ 2ನೇ ವಿವಾಹವಾಗಿದ್ದ ಅವರು ಕೋಚ್ ಸ್ಥಾನದಿಂದ ಕೆಳಗಿಳಿದಿದ್ದರು.

ಹೀಗಾಗಿ ಕ್ರಿಕೆಟ್ ಅಸೋಷಿಯೇಷನ್ ಆಫ್ ಬಂಗಾಳ ಹೊಸ ಕೋಚ್​ನ ಹುಡುಕಾಟದಲ್ಲಿತ್ತು. ಸಿಎಬಿಯ ಮೊದಲ ಆಯ್ಕೆ ಲಕ್ಷ್ಮಿ ರತನ್ ಶುಕ್ಲಾ ಆಗಿರಲಿಲ್ಲ ಎಂಬುದು ಇಲ್ಲಿ  ವಿಶೇಷ. ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಅವರು ಮುಖ್ಯ ಕೋಚ್ ಹುದ್ದೆಗೆ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್‌ನ ಮೊದಲ ಆಯ್ಕೆಯಾಗಿತ್ತು. ಆದರೆ ಅವರು ಬಾಂಗ್ಲಾದೇಶ ಅಂಡರ್ 19 ತಂಡದ ಕೋಚ್ ಜವಾಬ್ದಾರಿವಹಿಸಿಕೊಂಡಿದ್ದಾರೆ. ಇದಾದ ಬಳಿಕ ಅಭಿಷೇಕ್ ನಾಯರ್ ನೇಮಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಆದರೀಗ ಅಂತಿಮವಾಗಿ ಲಕ್ಷ್ಮಿ ರತನ್ ಶುಕ್ಲಾ ಅವರನ್ನು ಬಂಗಾಳ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಲಕ್ಷ್ಮಿ ರತನ್ ಶುಕ್ಲಾ ಭಾರತ ಪರ 3 ಏಕದಿನ ಪಂದ್ಯಗಳನ್ನಾಡಿದ್ದು, ಈ ವೇಳೆ 18 ರನ್ ಗಳಿಸಿದ್ದಾರೆ. ಇದಲ್ಲದೆ 137 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು 141 ಲಿಸ್ಟ್ A ಪಂದ್ಯಗಳನ್ನು ಆಡಿದ್ದಾರೆ. ಶುಕ್ಲಾ ಅವರು ಬಂಗಾಳ ಅಂಡರ್ 23 ತಂಡದ ತರಬೇತುದಾರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಶುಕ್ಲಾ ಅವರಿಗೆ ಬಂಗಾಳ ಕ್ರಿಕೆಟ್ ತಂಡದ ಡ್ರೆಸ್ಸಿಂಗ್ ರೂಮ್ ಬಗ್ಗೆ ಚೆನ್ನಾಗಿ ಗೊತ್ತಿದೆ. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಯುವ ಕೋಚ್ ಅನ್ನು ಆಯ್ಕೆ ಮಾಡಲಾಗಿದೆ ಎಂದು ಬಂಗಾಳ ಕ್ರಿಕೆಟ್ ಅಸೋಷಿಯೇಷನ್ ತಿಳಿಸಿದೆ. ಇದರೊಂದಿಗೆ ಲಕ್ಷ್ಮಿ ರತನ್ ಶುಕ್ಲಾ ಬಂಗಾಳ ಪರ ಕೋಚ್​ ಸ್ಥಾನದೊಂದಿಗೆ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು