AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ‘ವಿಶ್ವಕಪ್’ ಸೋಲಿನ ಭೀತಿ..!

India vs Pakistan: ಮಹಾ ಶಿವರಾತ್ರಿ ದಿನದಂದೇ ಭಾರತ ತಂಡಕ್ಕೆ ಅಮೋಘ ಗೆಲುವು ದಕ್ಕಿದೆ. ಅದು ಸಹ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಅಭಿಮಾನಿಗಳಿಗೆ ವಿಶ್ವಕಪ್ ಸೋಲಿನ ಭೀತಿ ಎದುರಾಗಿದೆ.

ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ 'ವಿಶ್ವಕಪ್' ಸೋಲಿನ ಭೀತಿ..!
Team India
ಝಾಹಿರ್ ಯೂಸುಫ್
|

Updated on:Feb 16, 2026 | 2:34 PM

Share

ಭಾರತ ತಂಡವು ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸೂಪರ್-8 ಹಂತಕ್ಕೇರಿದೆ. ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 61 ರನ್​ಗಳ ಜಯ ಸಾಧಿಸಿದೆ.

ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ವಿಶ್ವಕಪ್ ಸೋಲಿನ ಭೀತಿ ಎದುರಾಗಿದೆ. ಅಂದರೆ ಶಿವರಾತ್ರಿಯಂದು ಪಂದ್ಯ ಗೆದ್ದರೆ ಭಾರತ ವಿಶ್ವಕಪ್ ಗೆಲ್ಲುವುದಿಲ್ಲ ಎಂಬ ಪ್ರತೀತಿ ಇದೆ. ಇದಕ್ಕೆ ಸಾಕ್ಷಿಯಾಗಿ ಈ ಹಿಂದಿನ ಅಂಕಿ ಅಂಶಗಳನ್ನು ಮುಂದಿಡಲಾಗುತ್ತಿದೆ. ಕಾಕತಾಳೀಯ ಎಂಬಂತೆ ಈ ಹಿಂದೆ ಭಾರತ ತಂಡವು ಶಿವರಾತ್ರಿಯ ದಿನದಂದು ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದರೂ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ.

  • 2003 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ಅಮೋಘ ಗೆಲುವು ದಾಖಲಿಸಿತ್ತು. ಮಹಾ ಶಿವರಾತ್ರಿ ದಿನ ನಡೆದಿದ್ದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ವಿಜಯ ಸಾಧಿಸಿತ್ತು.
  • 2015ರ ಏಕದಿನ ವಿಶ್ವಕಪ್​ನಲ್ಲಿ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಶಿವರಾತ್ತಿಯಂದು ನಡೆದಿದ್ದ ಆ ಪಂದ್ಯವನ್ನು ಟೀಮ್ ಇಂಡಿಯಾ 76 ರನ್​ಗಳಿಂದ ಗೆದ್ದುಕೊಂಡಿದ್ದರು.

ಈ ಎರಡೂ ವಿಶ್ವಕಪ್​ನಲ್ಲೂ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿರಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ಎರಡೂ ವಿಶ್ವಕಪ್​ಗಳಲ್ಲೂ ಆಸ್ಟ್ರೇಲಿಯಾ ವಿರುದ್ಧವೇ ಸೋಲನುಭವಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

  • 2003 ರ ಏಕದಿನ ವಿಶ್ವಕಪ್​ನ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 125 ರನ್​ಗಳ ಅಂತರದಿಂದ ಹೀನಾಯ ಸೋಲನುಭವಿಸಿತ್ತು.
  • 2015 ರ ಏಕದಿನ ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿತ್ತು.

ಅಂದರೆ ಶಿವರಾತ್ರಿಯಂದು ಭಾರತ ತಂಡ ಪಾಕಿಸ್ತಾನ್ ವಿರುದ್ಧ ಗೆದ್ದಾಗ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೇ ಕಾಕತಾಳೀಯತೆಯನ್ನು ಮುಂದಿಟ್ಟುಕೊಂಡು ಈ ಬಾರಿ ಭಾರತ ತಂಡ ಕಪ್ ಗೆಲ್ಲುವುದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ ‘ಒಳ’ಜಗಳ

ಆದರೆ ಮತ್ತೊಂದೆಡೆ ಈ ಬಾರಿ ಝಿಂಬಾಬ್ವೆ ತಂಡವು ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಅಂದರೆ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಝಿಂಬಾಬ್ವೆ ಗೆದ್ದಾಗೆಲ್ಲಾ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹೀಗಾಗಿ ಈ ಬಾರಿ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸುವುದನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

Published On - 2:09 pm, Mon, 16 February 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ