IND vs ENG: 14 ವರ್ಷ, 6 ಸರಣಿ; ಭಾರತದ ಅಜೇಯ ಓಟಕ್ಕೆ ಬೀಳುತ್ತಾ ಬ್ರೇಕ್?
India vs England 4th T20: ಇಂದು ಬ್ರಿಸ್ಟಲ್‌ನಲ್ಲಿ ನಡೆಯಲಿರುವ ಭಾರತ-ಇಂಗ್ಲೆಂಡ್ 4ನೇ T20 ಪಂದ್ಯ ಭಾರತಕ್ಕೆ ನಿರ್ಣಾಯಕವಾಗಿದೆ. ಸರಣಿಯಲ್ಲಿ ಜೀವಂತವಾಗಿರಲು ಮತ್ತು ಇಂಗ್ಲೆಂಡ್ ವಿರುದ್ಧದ 14 ವರ್ಷಗಳ ಅಜೇಯ T20 ಸರಣಿ ದಾಖಲೆಯನ್ನು ಉಳಿಸಿಕೊಳ್ಳಲು ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತೀಯ ತಂಡ ಗೆಲ್ಲಲೇಬೇಕಿದೆ. ಇಂಗ್ಲೆಂಡ್ ಗೆದ್ದರೆ ಸರಣಿ ಅದರ ಪಾಲಾಗಲಿದೆ. ಹೀಗಾಗಿ ಉಭಯ ತಂಡಗಳು ಭಾರಿ ಒತ್ತಡದಲ್ಲಿ ಕಣಕ್ಕಿಳಿಯಲಿವೆ.

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ 4ನೇ ಟಿ20 ಪಂದ್ಯ ಇಂದು ಅಂದರೆ ಜುಲೈ 9 ರಂದು ಬ್ರಿಸ್ಟಲ್‌ನಲ್ಲಿ (Bristol T20 match) ನಡೆಯಲಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ ಟಿ20 ಸರಣಿ ಅದರ ಪಾಲಾಗಲಿದೆ. ಇತ್ತ ಟೀಂ ಇಂಡಿಯಾ ಗೆದ್ದರೆ ಸರಣಿಯಲ್ಲಿ ಜೀವಂತವಾಗಿರಲಿದೆ. ಹೀಗಾಗಿ ಉಭಯ ತಂಡಗಳು ಗೆಲ್ಲಲೇಬೇಕಾದ ಒತ್ತಡದಲ್ಲಿ ಕಣಕ್ಕಿಳಿಯುತ್ತಿವೆ. ಅದರಲ್ಲೂ ಕಳೆದ 14 ವರ್ಷಗಳಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಮೇಲುಗೈ ಸಾಧಿಸಿರುವ ಟೀಂ ಇಂಡಿಯಾ ಸೋತರೆ ಅದರ ಗೆಲುವಿನ ಓಟಕ್ಕೆ ಬ್ರೇಕ್ ಬೀಳಲಿದೆ. ಇದು ಐರ್ಲೆಂಡ್ ವಿರುದ್ಧ ಸರಣಿ ಸೋತ ಅವಮಾನದಲ್ಲಿರುವ ಟೀಂ ಇಂಡಿಯಾಕ್ಕೆ ಮತ್ತೊಂದು ಆಘಾತವನ್ನು ನೀಡಲಿದೆ. ಹೀಗಾಗಿ ಶ್ರೇಯಸ್ ಅಯ್ಯರ್ ಪಡೆ ಈ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಿದೆ.
14 ವರ್ಷಗಳ ಅಜೇಯ ಓಟ
ವಾಸ್ತವವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟಿ20 ಸರಣಿ 2012 ರ ಡಿಸೆಂಬರ್ನಿಂದ ಪ್ರಾರಂಭವಾಯಿತು. ಉಭಯ ತಂಡಗಳ ನಡುವೆ ನಡೆದ ಮೊದಲ ಸರಣಿಯು 1-1 ರ ಡ್ರಾದಲ್ಲಿ ಕೊನೆಗೊಂಡಿತು. ಅದರ ನಂತರ, ಎರಡೂ ತಂಡಗಳ ನಡುವೆ ನಡೆದ ಪ್ರತಿಯೊಂದು ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದೆ. 2012 ಮತ್ತು 2026 ರ ನಡುವೆ, ಎರಡೂ ದೇಶಗಳ ನಡುವೆ ಒಟ್ಟು ಆರು ಟಿ20 ಸರಣಿಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ ಐದು ಸರಣಿಗಳನ್ನು ಗೆದ್ದುಕೊಂಡರಡ, ಒಂದು ಸರಣಿ ಡ್ರಾದಲ್ಲಿ ಕೊನೆಗೊಂಡಿತು.
ಪ್ರಸ್ತುತ ಎರಡೂ ತಂಡಗಳ ನಡುವೆ ಏಳನೇ ಟಿ20 ಸರಣಿ ನಡೆಯುತ್ತಿದೆ. ಈ 7ನೇ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಪ್ರದರ್ಶನವನ್ನು ನೋಡಿದರೆ, ಕಳೆದ 14 ವರ್ಷಗಳ ಅಜೇಯ ಓಟಕ್ಕೆ ತೆರೆ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಟೀಂ ಇಂಡಿಯಾ ತನ್ನ ದಾಖಲೆಯನ್ನು ಹಾಗೆ ಉಳಿಸಿಕೊಳ್ಳಬೇಕೆಂದರೆ ನಾಲ್ಕನೇ ಟಿ20 ಪಂದ್ಯವನ್ನು ಗೆಲ್ಲಲೇಬೇಕಿದೆ.
IND vs ENG: 4ನೇ ಟಿ20 ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದಿಂದ ಇಬ್ಬರು ಆಟಗಾರರು ಔಟ್
ಉಭಯ ತಂಡಗಳು
ಭಾರತೀಯ ತಂಡ:ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಸೂರ್ಯಾಂಶ್ ಶೆಡ್ಜ್, ವಾಷಿಂಗ್ಟನ್ ಸುಂದರ್.
ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ಫಿಲ್ ಸಾಲ್ಟ್, ಜೋಸ್ ಬಟ್ಲರ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಆದಿಲ್ ರಶೀದ್, ಜೋಶ್ ಟಂಗ್, ಜೋರ್ಡಾನ್ ಕಾಕ್ಸ್, ಸೋನಿ ಬೇಕರ್, ಲ್ಯೂಕ್ ವುಡ್, ಸಾಕಿಬ್ ಮಹಮೂದ್, ರೆಹಾನ್ ಅಹ್ಮದ್, ಜೇಮ್ಸ್ ಕೋಲ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:37 pm, Thu, 9 July 26




