
ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ 4ನೇ ಟಿ20 ಪಂದ್ಯ ಇಂದು ಅಂದರೆ ಜುಲೈ 9 ರಂದು ಬ್ರಿಸ್ಟಲ್‌ನಲ್ಲಿ (Bristol T20 match) ನಡೆಯಲಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ ಟಿ20 ಸರಣಿ ಅದರ ಪಾಲಾಗಲಿದೆ. ಇತ್ತ ಟೀಂ ಇಂಡಿಯಾ ಗೆದ್ದರೆ ಸರಣಿಯಲ್ಲಿ ಜೀವಂತವಾಗಿರಲಿದೆ. ಹೀಗಾಗಿ ಉಭಯ ತಂಡಗಳು ಗೆಲ್ಲಲೇಬೇಕಾದ ಒತ್ತಡದಲ್ಲಿ ಕಣಕ್ಕಿಳಿಯುತ್ತಿವೆ. ಅದರಲ್ಲೂ ಕಳೆದ 14 ವರ್ಷಗಳಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಮೇಲುಗೈ ಸಾಧಿಸಿರುವ ಟೀಂ ಇಂಡಿಯಾ ಸೋತರೆ ಅದರ ಗೆಲುವಿನ ಓಟಕ್ಕೆ ಬ್ರೇಕ್ ಬೀಳಲಿದೆ. ಇದು ಐರ್ಲೆಂಡ್ ವಿರುದ್ಧ ಸರಣಿ ಸೋತ ಅವಮಾನದಲ್ಲಿರುವ ಟೀಂ ಇಂಡಿಯಾಕ್ಕೆ ಮತ್ತೊಂದು ಆಘಾತವನ್ನು ನೀಡಲಿದೆ. ಹೀಗಾಗಿ ಶ್ರೇಯಸ್ ಅಯ್ಯರ್ ಪಡೆ ಈ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಿದೆ.
ವಾಸ್ತವವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟಿ20 ಸರಣಿ 2012 ರ ಡಿಸೆಂಬರ್ನಿಂದ ಪ್ರಾರಂಭವಾಯಿತು. ಉಭಯ ತಂಡಗಳ ನಡುವೆ ನಡೆದ ಮೊದಲ ಸರಣಿಯು 1-1 ರ ಡ್ರಾದಲ್ಲಿ ಕೊನೆಗೊಂಡಿತು. ಅದರ ನಂತರ, ಎರಡೂ ತಂಡಗಳ ನಡುವೆ ನಡೆದ ಪ್ರತಿಯೊಂದು ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದೆ. 2012 ಮತ್ತು 2026 ರ ನಡುವೆ, ಎರಡೂ ದೇಶಗಳ ನಡುವೆ ಒಟ್ಟು ಆರು ಟಿ20 ಸರಣಿಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ ಐದು ಸರಣಿಗಳನ್ನು ಗೆದ್ದುಕೊಂಡರಡ, ಒಂದು ಸರಣಿ ಡ್ರಾದಲ್ಲಿ ಕೊನೆಗೊಂಡಿತು.
ಪ್ರಸ್ತುತ ಎರಡೂ ತಂಡಗಳ ನಡುವೆ ಏಳನೇ ಟಿ20 ಸರಣಿ ನಡೆಯುತ್ತಿದೆ. ಈ 7ನೇ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಪ್ರದರ್ಶನವನ್ನು ನೋಡಿದರೆ, ಕಳೆದ 14 ವರ್ಷಗಳ ಅಜೇಯ ಓಟಕ್ಕೆ ತೆರೆ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಟೀಂ ಇಂಡಿಯಾ ತನ್ನ ದಾಖಲೆಯನ್ನು ಹಾಗೆ ಉಳಿಸಿಕೊಳ್ಳಬೇಕೆಂದರೆ ನಾಲ್ಕನೇ ಟಿ20 ಪಂದ್ಯವನ್ನು ಗೆಲ್ಲಲೇಬೇಕಿದೆ.
IND vs ENG: 4ನೇ ಟಿ20 ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದಿಂದ ಇಬ್ಬರು ಆಟಗಾರರು ಔಟ್
ಭಾರತೀಯ ತಂಡ:ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಸೂರ್ಯಾಂಶ್ ಶೆಡ್ಜ್, ವಾಷಿಂಗ್ಟನ್ ಸುಂದರ್.
ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ಫಿಲ್ ಸಾಲ್ಟ್, ಜೋಸ್ ಬಟ್ಲರ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಆದಿಲ್ ರಶೀದ್, ಜೋಶ್ ಟಂಗ್, ಜೋರ್ಡಾನ್ ಕಾಕ್ಸ್, ಸೋನಿ ಬೇಕರ್, ಲ್ಯೂಕ್ ವುಡ್, ಸಾಕಿಬ್ ಮಹಮೂದ್, ರೆಹಾನ್ ಅಹ್ಮದ್, ಜೇಮ್ಸ್ ಕೋಲ್ಸ್.
Published On - 3:37 pm, Thu, 9 July 26