
ನಮೀಬಿಯಾ ವಿರುದ್ಧದ ಪಂದ್ಯವನ್ನು 93 ರನ್ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್ನಲ್ಲಿ (T20 World Cup 2026) ಸತತ ಎರಡನೇ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಸೂಪರ್ 8 ಸುತ್ತಿನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇದು ಮಾತ್ರವಲ್ಲದೆ ನಮೀಬಿಯಾ ವಿರುದ್ಧದ ಈ ಪಂದ್ಯದಲ್ಲಿ ನಡೆದ ಅದೊಂದು ಘಟನೆ ಈ ಬಾರಿಯೂ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಲಿದೆ ಎನ್ನುತ್ತಿದೆ. ವಾಸ್ತವವಾಗಿ ನಮೀಬಿಯಾ ವಿರುದ್ಧ ಭಾರತದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಕೇವಲ 12 ರನ್‌ಗಳಿಸಿ ಸ್ಟಂಪ್ ಔಟಾದರು. ಸೂರ್ಯ ಸ್ಟಂಪ್ ಔಟ್ ಆದ ಕೂಡಲೇ ಈ ಬಾರಿ ಭಾರತ ತಂಡ ಫೈನಲ್ಗೇರಲಿದೆ ಎಂದು ಈ ಹಿಂದಿನ ಇತಿಹಾಸ ಭವಿಷ್ಯ ನುಡಿಯುತ್ತಿದೆ. ಇದಕ್ಕೆ ಪೂರಕವಾಗಿ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತದ ನಾಯಕ ಸ್ಟಂಪ್ ಔಟ್ ಆದಾಗಲೆಲ್ಲಾ, ಟೀಂ ಇಂಡಿಯಾ ಯಾವಾಗಲೂ ಫೈನಲ್ ತಲುಪಿದೆ.
2000 ರ ವಿಶ್ವಕಪ್ನಲ್ಲಿ ಸೌರವ್ ಗಂಗೂಲಿ ಭಾರತ ತಂಡದ ನಾಯಕರಾಗಿದ್ದರು. ಈ ಟೂರ್ನಿಯಲ್ಲಿ ಕೀನ್ಯಾ ವಿರುದ್ಧದ ಪಂದ್ಯದಲ್ಲಿ ಗಂಗೂಲಿ ಸ್ಟಂಪ್ ಔಟ್ ಆಗಿದ್ದರು. ಆ ಆವೃತ್ತಿಯಲ್ಲಿ ಭಾರತ ಫೈನಲ್ ಆಡಿತ್ತು. ನಂತರ, 2011 ರ ವಿಶ್ವಕಪ್ನಲ್ಲಿ ಎಂಎಸ್ ಧೋನಿ ಕೂಡ ವೆಸ್ಟ್ ಇಂಡೀಸ್ ವಿರುದ್ಧ ಸ್ಟಂಪ್ ಔಟ್ ಆಗಿದ್ದರು. ಆಗಲೂ ಭಾರತ ತಂಡ ಫೈನಲ್ ತಲುಪಿತ್ತು. 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ನ್ಯೂಜಿಲೆಂಡ್ ವಿರುದ್ಧ ಸ್ಟಂಪ್ ಔಟ್ ಆಗಿದ್ದರೆ, ಇತ್ತ ಟೀಂ ಇಂಡಿಯಾ ಮತ್ತೊಮ್ಮೆ ಫೈನಲ್ ತಲುಪಿತ್ತು. ಈಗ, ಸೂರ್ಯಕುಮಾರ್ ಯಾದವ್ ಕೂಡ ನಮೀಬಿಯಾ ವಿರುದ್ಧ ಸ್ಟಂಪ್ ಔಟ್ ಆಗಿದ್ದಾರೆ. ಹಾಗಾದರೆ ಈ ಬಾರಿಯೂ ಟೀಂ ಇಂಡಿಯಾ ಫೈನಲ್ ಆಡಲಿದೆಯೇ? ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.
ಸೂರ್ಯಕುಮಾರ್ ಯಾದವ್ ನಮೀಬಿಯಾ ವಿರುದ್ಧ 12 ರನ್‌ಗಳಿಗೆ ಔಟಾದರಾದರೂ ಹಿಂದಿನ ಪಂದ್ಯದಲ್ಲಿ ಅಜೇಯ 84 ರನ್ ಗಳಿಸಿ ಟೀಂ ಇಂಡಿಯಾವನ್ನು ಗೆಲುವಿನತ್ತ ಕೊಂಡೊಯ್ದರು. ಯುಎಸ್ಎ ವಿರುದ್ಧ ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗ, ಸೂರ್ಯ ದೊಡ್ಡ ಇನ್ನಿಂಗ್ಸ್ ಆಡಿ ತಂಡವನ್ನು ಉತ್ತಮ ಸ್ಕೋರ್‌ಗೆ ಕೊಂಡೊಯ್ಯಲು ಸಹಾಯ ಮಾಡಿದ್ದರು.
T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ
ಈ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ಮಾಡಿ 209 ರನ್ ಕಲೆಹಾಕಿತು. ಆರಂಭಿಕ ಸಂಜು ಸ್ಯಾಮ್ಸನ್ 22 ರನ್ ಗಳಿಸಿ ಔಟಾದರೆ, ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, 24 ಎಸೆತಗಳಲ್ಲಿ 61 ರನ್ ಗಳಿಸಿದರು. ಉಳಿದಂತೆ ತಿಲಕ್ ವರ್ಮಾ 25 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 27 ಎಸೆತಗಳಲ್ಲಿ 52 ರನ್‌ಗಳ ಕೊಡುಗೆ ನೀಡಿದರು.
ಈ ಗುರಿ ಬೆನ್ನಟ್ಟಿದ ನಮೀಬಿಯಾ ಪವರ್‌ಪ್ಲೇನಲ್ಲಿ 57 ರನ್‌ಗಳನ್ನು ಗಳಿಸುವ ಮೂಲಕ ಸ್ಫೋಟಕ ಆರಂಭವನ್ನು ಪಡೆದುಕೊಂಡಿತು. ಆರಂಭಿಕರಾದ ಜಾನ್ ಫ್ರೈಲಿಂಕ್ ಮತ್ತು ಲಾರೆನ್ ಸ್ಟೀನ್‌ಕ್ಯಾಂಪ್ ಉತ್ತಮ ಜೊತೆಯಾಟ ಕಟ್ಟಿದರು. ಆದಾಗ್ಯೂ, ಪವರ್‌ಪ್ಲೇ ಮುಗಿದ ನಂತರ, ನಮೀಬಿಯಾದ ಇನ್ನಿಂಗ್ಸ್ ಕುಸಿಯಿತು. ವರುಣ್ ಚಕ್ರವರ್ತಿ ಸತತ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಪಡೆದರು. ನಂತರ ಅಕ್ಷರ್ ಪಟೇಲ್ ಎರಡು ವಿಕೆಟ್‌ಗಳನ್ನು ಪಡೆದರು. ಹಾಗೆಯೇ ಹಾರ್ದಿಕ್ ಪಾಂಡ್ಯ 18 ನೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದು ನಮೀಬಿಯಾದ ಸೋಲನ್ನು ಖಚಿತಪಡಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:30 pm, Fri, 13 February 26