Asian Games 2023: ಏಷ್ಯನ್​ ಗೇಮ್ಸ್​ಗೆ ಭಾರತ ತಂಡ ಪ್ರಕಟ; ಧವನ್​ಗಿಲ್ಲ ಸ್ಥಾನ! ಹೊಸಬನಿಗೆ ನಾಯಕತ್ವ

Team India for Asian Games 2023: ಸೆಪ್ಟೆಂಬರ್‌ನಲ್ಲಿ ಚೀನಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ ಭಾರತ ಪುರುಷ ಹಾಗೂ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ.

Asian Games 2023: ಏಷ್ಯನ್​ ಗೇಮ್ಸ್​ಗೆ ಭಾರತ ತಂಡ ಪ್ರಕಟ; ಧವನ್​ಗಿಲ್ಲ ಸ್ಥಾನ! ಹೊಸಬನಿಗೆ ನಾಯಕತ್ವ
ಟೀಂ ಇಂಡಿಯಾ (ಪ್ರಾತಿನಿಧಿಕ ಚಿತ್ರ)
Follow us
ಪೃಥ್ವಿಶಂಕರ
|

Updated on: Jul 15, 2023 | 6:08 AM

ಸೆಪ್ಟೆಂಬರ್‌ನಲ್ಲಿ ಚೀನಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ (Asian Games 2023) ಭಾರತ ಪುರುಷ ಹಾಗೂ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. ಮಹಿಳಾ ತಂಡದಲ್ಲಿ ಹೆಚ್ಚು ಆವಿಷ್ಕಾರಕ್ಕೆ ಮುಂದಾಗದ ಬಿಸಿಸಿಐ (BCCI), ಪುರುಷರ ತಂಡದ ಆಯ್ಕೆಯಲ್ಲಿ ಅಚ್ಚರಿ ಮೂಡಿಸಿದೆ. ಈ ಹಿಂದೆ ವರದಿಯಾಗಿದ್ದ ಎಲ್ಲಾ ಊಹಾಪೋಹಗಳನ್ನು ತಪ್ಪಾಗಿ ಸಾಬೀತುಪಡಿಸಿರುವ ಬಿಸಿಸಿಐ, ಶಿಖರ್ ಧವನ್​ಗೆ (Shikhar Dhawan) ತಂಡದ ನಾಯಕತ್ವವನ್ನು ನೀಡುವುದಿರಲಿ ಕನಿಷ್ಠ ಪಕ್ಷ ತಂಡದಲ್ಲೂ ಅವಕಾಶ ನೀಡಿಲ್ಲ. ಹೀಗಾಗಿ ತಂಡದ ಸಾರಥ್ಯವನ್ನು ಯುವ ಬ್ಯಾಟರ್ ರುತುರಾಜ್ ಗಾಯಕ್ವಾಡ್​ಗೆ ಹಸ್ತಾಂತರಿಸಿದ್ದು, ರಿಂಕು ಸಿಂಗ್ (Rinku Singh), ಜಿತೇಶ್ ಶರ್ಮಾ, ಶಿವಂ ದುಬೆ ಸೇರಿದಂತೆ ಹಲವು ಐಪಿಎಲ್ ಸ್ಟಾರ್​ಗಳಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

19ನೇ ಏಷ್ಯನ್ ಕ್ರೀಡಾಕೂಟವು ಚೀನಾದ ಹ್ಯಾಂಗ್‌ಝೌನಲ್ಲಿ ಸೆಪ್ಟೆಂಬರ್ 23 ರಿಂದ ಆರಂಭವಾಗಲಿದ್ದು ಈ ಬಾರಿ ಮಹಿಳಾ ಮತ್ತು ಪುರುಷರ ಟಿ20 ಕ್ರಿಕೆಟ್ ಅನ್ನು ಸಹ ಈ ಕ್ರೀಡಾಕೂಟದಲ್ಲಿ ಸೇರಿಸಲಾಗಿದೆ. ಇದೇ ಮೊದಲ ಬಾರಿಗೆ ಭಾರತ ತಂಡಕ್ಕೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಲು ಬಿಸಿಸಿಐ ಅನುಮತಿ ನೀಡಿದ್ದು, ಇದೀಗ ಮಂಡಳಿಯು ಎರಡೂ ತಂಡಗಳನ್ನು ಪ್ರಕಟಿಸಿದೆ.

IND vs AFG: ಏಷ್ಯನ್ ಗೇಮ್ಸ್​ ಆಡಲಿದೆ ಟೀಂ ಇಂಡಿಯಾ; ಅಫ್ಘಾನ್ ವಿರುದ್ಧದ ಏಕದಿನ ಸರಣಿ ಮುಂದೂಡಿಕೆ!

ಧವನ್ ಕ್ರಿಕೆಟ್ ಕೆರಿಯರ್ ಅಂತ್ಯ?

ಈ ಮೊದಲೇ ಹೇಳಿದಂತೆ ಭಾರತ ಪುರುಷ ತಂಡದಲ್ಲಿ ಪ್ರಮುಖ ಹೆಸರುಗಳಿಲ್ಲ. ಅದಕ್ಕೆ ಪ್ರಮುಖ ಕಾರಣವೂ ಇದ್ದು, ಏಷ್ಯನ್ ಗೇಮ್ಸ್ ಜೊತೆಗೆ ಟೀಂ ಇಂಡಿಯಾ ಏಷ್ಯಾಕಪ್ ಹಾಗೂ ವಿಶ್ವಕಪ್ ಆಡಬೇಕಿದೆ. ಆದ್ದರಿಂದ ಹಿರಿಯ ಭಾರತ ತಂಡವನ್ನು ಈ ಎರಡೂ ಟೂರ್ನಿಗಳಿಗಾಗಿ ಮೀಸಲಿಟ್ಟಿರುವ ಬಿಸಿಸಿಐ, ಭಾರತ ಬಿ ತಂಡವನ್ನು ಏಷ್ಯನ್ ಗೇಮ್ಸ್​ಗೆ ಕಳುಹಿಸುತ್ತಿದೆ. ಹೀಗಾಗಿ ಹಿರಿಯರ ಅನುಪಸ್ಥಿತಿಯಲ್ಲಿ ಅನುಭವಿ ಶಿಖರ್ ಧವನ್​ಗೆ ತಂಡದ ನಾಯಕತ್ವ ನೀಡಬಹುದು ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಎಲ್ಲರನ್ನೂ ಅಚ್ಚರಿಗೊಳಿಸಿರುವ ಬಿಸಿಸಿಐ, ಧವನ್​ಗೆ ನಾಯಕತ್ವವಿರಲಿ, ತಂಡದಲ್ಲಿ ಸ್ಥಾನ ಕೂಡ ನೀಡಿಲ್ಲ.​

ಆಯ್ಕೆಗಾರರು ನಾಯಕತ್ವದ ಜವಾಬ್ದಾರಿಯನ್ನು ಮಹಾರಾಷ್ಟ್ರದ ನಾಯಕ ಮತ್ತು ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಆರಂಭಿಕ ಆಟಗಾರ ರುತುರಾಜ್​ ಗಾಯಕ್‌ವಾಡ್‌ಗೆ ವಹಿಸಿದ್ದಾರೆ. ಗಾಯಕ್ವಾಡ್ ಅವರ ನಾಯಕತ್ವದ ಅನುಭವವನ್ನು ಗಮನದಲ್ಲಿಟ್ಟುಕೊಂಡು ಈ ಜವಾಬ್ದಾರಿಯನ್ನು ನೀಡಲಾಗಿದೆ. ಇವರಲ್ಲದೆ, ವೆಸ್ಟ್ ಇಂಡೀಸ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ ಕೂಡ ತಂಡದಲ್ಲಿದ್ದಾರೆ.

ಮೊದಲ ಬಾರಿಗೆ ಭಾರತ ತಂಡದಲ್ಲಿ ರಿಂಕು

ಅಷ್ಟೇ ಅಲ್ಲ ರಿಂಕು ಸಿಂಗ್ ಹಾಗೂ ಪಂಜಾಬ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಪ್ರಭಾಸಿಮ್ರಾನ್ ಸಿಂಗ್ ಕೂಡ ಇದೇ ಮೊದಲ ಬಾರಿಗೆ ಸೀನಿಯರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟಿ20 ಸರಣಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ರಿಂಕು ಸಿಂಗ್ ಹೆಸರು ಇದರಲ್ಲಿ ವಿಶೇಷವಾಗಿದೆ. ಈ ಇಬ್ಬರೂ ಆಟಗಾರರು ಐಪಿಎಲ್ 2023ರ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ಏಷ್ಯನ್ ಕ್ರೀಡಾಕೂಟಕ್ಕೆ ಭಾರತ ಪುರುಷರ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್).

ಸ್ಟ್ಯಾಂಡ್‌ಬೈ  ಆಟಗಾರರು- ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ ಮತ್ತು ಸಾಯಿ ಸುದರ್ಶನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ