MS Dhoni: ಗುರೂಜಿ ಅವತಾರದಲ್ಲಿ ಮಿಂಚಿದ ಧೋನಿ; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಖತ್ ವೈರಲ್

MS Dhoni: ಈ ಲುಕ್‌ನಲ್ಲಿ ಧೋನಿ ಹಳದಿ ಬಣ್ಣದ ಕುರ್ತಾ ಧರಿಸಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಈ ವೈರಲ್ ಫೋಟೋದಲ್ಲಿ, ಧೋನಿ ಕೈಯಲ್ಲಿ ಜಪಮಾಲೆಯೂ ಕಂಡುಬರುತ್ತದೆ.

MS Dhoni: ಗುರೂಜಿ ಅವತಾರದಲ್ಲಿ ಮಿಂಚಿದ ಧೋನಿ; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಖತ್ ವೈರಲ್
ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಅಖಾಡದಿಂದ ದೂರವಿರಬಹುದು ಆದರೆ ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಾರಿ ಧೋನಿ ಹೊಸ ಲುಕ್‌ನಿಂದ ಟ್ರೆಂಡಿಂಗ್ ಆಗಿದ್ದು ಅವರ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.
Follow us
TV9 Web
| Updated By: ಪೃಥ್ವಿಶಂಕರ

Updated on: Aug 11, 2022 | 2:32 PM

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ತಮ್ಮ ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ವಿದಾಯ ಹೇಳಿದ ಬಳಿಕ ತಮ್ಮ ನೆಚ್ಚಿನ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಸೋಶಿಯಲ್ ಮೀಡಿಯಾಗಳಿಂದ (social media) ಆದಷ್ಟು ಅಂತರ ಕಾಯ್ದುಕೊಳ್ಳುವ ಧೋನಿ, ಅಪರೂಪಕ್ಕೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ರಸದೌತಣ ನೀಡುತ್ತಿರುತ್ತಾರೆ. ಮಹೇಂದ್ರ ಸಿಂಗ್ ಧೋನಿ ಯಾವುದೇ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡರೆ, ಅದು ಸಾಮಾಜಿಕ ಜಾಲತಾಣಗಳಲ್ಲಿ ಬಹಳ ವೇಗವಾಗಿ ವೈರಲ್ ಆಗುತ್ತಿದೆ. ಇತ್ತೀಚಿಗೆ ಅಂತಹದೊಂದು ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ವಾಸ್ತವವಾಗಿ, ಈ ಚಿತ್ರದಲ್ಲಿ, ಧೋನಿ ಗುರೂಜಿ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಧೋನಿ, ಟೀಂ ಇಂಡಿಯಾದ ಲೆಜೆಂಡರಿ ನಾಯಕರಲ್ಲಿ ಒಬ್ಬರೆಂದು ಹೆಸರುವಾಸಿಯಾಗಿರುವುದು ಗೊತ್ತೇ ಇದೆ. ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಪಂಡಿತ್ ವೇಷದಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಲುಕ್‌ನಲ್ಲಿ ಧೋನಿ ಹಳದಿ ಬಣ್ಣದ ಕುರ್ತಾ ಧರಿಸಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಈ ವೈರಲ್ ಫೋಟೋದಲ್ಲಿ, ಧೋನಿ ಕೈಯಲ್ಲಿ ಜಪಮಾಲೆಯೂ ಕಂಡುಬರುತ್ತದೆ. ವೈರಲ್ ಆದ ಫೋಟೋ ಧೋನಿಯ ಹೊಸ ಜಾಹೀರಾತಿರಬಹುದೆಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
MS Dhoni: ಕ್ಯಾಪ್ಟನ್ ಕೂಲ್​ ಧೋನಿಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್! ಕಾರಣವೇನು?
Image
ದುಬಾರಿ ಬೆಲೆಯ ಖಾಸಗಿ ಜೆಟ್ ಹೊಂದಿರುವ ಟೀಂ ಇಂಡಿಯಾ ಕ್ರಿಕೆಟಿಗರಿವರು..!
Image
Ravindra Jadeja: ಸಿಎಸ್​ಕೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್​ಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಿದ ಜಡೇಜಾ
View this post on Instagram

A post shared by Isika Mahi (@isikamahi)

ಅಂತರಾಷ್ಟ್ರೀಯ ಕ್ರಿಕೆಟ್​ಗೆ ಧೋನಿ ವಿದಾಯ ಹೇಳಿದ್ದರೂ ಐಪಿಎಲ್​ನಲ್ಲಿ ಧೋನಿ ವೈಭವ ಕಾಣುತ್ತಲೇ ಇದೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿಯ ಆಟವನ್ನು ಈ ಪಂದ್ಯಾವಳಿಯಲ್ಲಿ ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಯಾವಾಗಲೂ ಕಾತುರರಾಗಿರುತ್ತಾರೆ.

ಭಾರತದ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ 2007 ರಲ್ಲಿ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಂಡರು. ನಾಯಕತ್ವವನ್ನು ವಹಿಸಿಕೊಂಡ ನಂತರ ಅವರು ಹಿಂತಿರುಗಿ ನೋಡಲಿಲ್ಲ. ಧೋನಿ ನಾಯಕತ್ವದಲ್ಲಿ ಭಾರತ ತಂಡ T20 ವಿಶ್ವಕಪ್, 50 ಓವರ್ಗಳ ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತು. ಅದೇ ಸಮಯದಲ್ಲಿ, ಅವರ ನಾಯಕತ್ವದಲ್ಲಿ, ಭಾರತವು ಟೆಸ್ಟ್ನಲ್ಲಿ ನಂಬರ್ ಒನ್ ತಂಡವಾಯಿತು.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್