Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Jun 20, 2022 | 11:40 AM

Team India: ಐರ್ಲೆಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್.

Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Team India
Follow us on

ಒಂದು ತಂಡದಲ್ಲಿ 6 ನಾಯಕರುಗಳು ಇರುತ್ತಾರೆಯೇ?…ಪ್ರಸ್ತುತ ಟೀಮ್ ಇಂಡಿಯಾದ ಸನ್ನಿವೇಶವನ್ನು ಗಮನಿಸಿದರೆ ಯಾಕೆ ಇರಬಾರದಾ ಎಂದು ಕೇಳಬಹುದಷ್ಟೇ. ಏಕೆಂದರೆ ಟೀಮ್ ಇಂಡಿಯಾ ಕಳೆದ 8 ತಿಂಗಳಲ್ಲಿ 6 ನಾಯಕರುಗಳನ್ನು ಕಣಕ್ಕಳಿಸಿದ್ದಾರೆ. ಅಂದರೆ ಟೀಮ್ ಇಂಡಿಯಾವನ್ನು ಒಂದು ವರ್ಷದೊಳಗೆ 6 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಅಚ್ಚರಿಯಾದರೂ ಇದು ಸತ್ಯ. ಟೀಮ್ ಇಂಡಿಯಾ ನಾಯಕತ್ವಕ್ಕೆ ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ಹಲವರು ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಹೀಗೆ ಕಳೆದ 8 ತಿಂಗಳಲ್ಲಿ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡವರೆಂದರೆ…

  • ವಿರಾಟ್ ಕೊಹ್ಲಿ
  • ರೋಹಿತ್ ಶರ್ಮಾ
  • ಶಿಖರ್ ಧವನ್
  • ಕೆಎಲ್ ರಾಹುಲ್
  • ರಿಷಬ್ ಪಂತ್
  • ಹಾರ್ದಿಕ್ ಪಾಂಡ್ಯ

ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ಟೀಮ್ ಇಂಡಿಯಾದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಅವರು ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಉಪನಾಯಕರಾಗಿದ್ದ ಕೆಎಲ್ ರಾಹುಲ್ ಅವರು ಟೀಮ್ ಇಂಡಿಯಾ ನಾಯಕರಾಗಿ ಪದಾರ್ಪಣೆ ಮಾಡಿದ್ದರು.

ಮತ್ತೊಂದೆಡೆ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ದ ಸರಣಿ ಆಡುತ್ತಿದ್ದ ವೇಳೆ ಶಿಖರ್ ಧವನ್ ಮೀಸಲು ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಶ್ರೀಲಂಕಾ ವಿರುದ್ದದ ಸರಣಿಯ ಮೂಲಕ ಶಿಖರ್ ಧವನ್ ಸೀಮಿತ ಓವರ್​ಗಳ ಸರಣಿಯಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಇನ್ನು ಸೌತ್ ಆಫ್ರಿಕಾ ವಿರುದ್ದ ಮುಗಿದ ಟಿ20 ಸರಣಿಗೆ ಕೆಎಲ್ ರಾಹುಲ್ ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಸರಣಿಯಿಂದ ಹೊರಗುಳಿದ ಕಾರಣ ರಿಷಭ್ ಪಂತ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ದದ ಸರಣಿಗೆ ಸಜ್ಜಾಗುತ್ತಿದೆ. ಇತ್ತ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಸರಣಿಗೆ ತೆರಳಿದ್ದಾರೆ. ಹೀಗಾಗಿ ಐರ್ಲೆಂಡ್ ವಿರುದ್ದದ ಸರಣಿಗೆ ಟೀಮ್ ಇಂಡಿಯಾ ಮೀಸಲು ತಂಡವನ್ನು ಆಯ್ಕೆ ಮಾಡಲಾಗಿದೆ.

ವಿಶೇಷ ಎಂದರೆ ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಇದರೊಂದಿಗೆ ಕೇವಲ 8 ತಿಂಗಳಲ್ಲಿ ಟೀಮ್ ಇಂಡಿಯಾವನ್ನು 6 ನಾಯಕರುಗಳು ಮುನ್ನಡೆಸಿದಂತಾಗಲಿದೆ. ವಿಶೇಷ ಎಂದರೆ ಶಿಖರ್ ಧವನ್ ಹೊರತುಪಡಿಸಿದರೆ ಉಳಿದ 5 ಮಂದಿ ಆಟಗಾರರು ಈಗಲೂ ಟೀಮ್ ಇಂಡಿಯಾದ ಭಾಗವಾಗಿದ್ದಾರೆ. ಅದರಲ್ಲೂ ಪ್ಲೇಯಿಂಗ್​ ಇಲೆವೆನ್ ಖಾಯಂ ಸದಸ್ಯರು. ಅಂದರೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ 5 ನಾಯಕರಿರುವುದು ವಿಶೇಷ.

ಐರ್ಲೆಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ದೀಪಕ್ ಹೂಡಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್

ಇಂಗ್ಲೆಂಡ್​ ವಿರುದ್ದದ ಟೆಸ್ಟ್​ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.

 

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.