AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Final: ಸೇಡಿಗೆ ಕಾದು ಕುಳಿತ ಭಾರತ: ವಿಶ್ವಕಪ್​ ಫೈನಲ್​ನಲ್ಲಿ ಮತ್ತೊಮ್ಮೆ ಇಂಡೋ-ಆಸೀಸ್ ಮುಖಾಮುಖಿ

India U19 vs Australia U19 World Cup Final: ಉದಯ್ ಸಹರಾನ್ ನಾಯಕತ್ವದ ಭಾರತ ತಂಡ ಒಂಬತ್ತನೇ ಬಾರಿಗೆ ಅಂಡರ್-19 ವಿಶ್ವಕಪ್ ಫೈನಲ್ ತಲುಪಿದೆ. ಇದೀಗ ಎರಡನೇ ಸೆಮಿಫೈನಲ್ ಫಲಿತಾಂಶದಿಂದಾಗಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್ ನಲ್ಲಿ ಮುಖಾಮುಖಿಯಾಗಲಿವೆ. ಟೀಮ್ ಇಂಡಿಯಾಕ್ಕೆ ಇದೊಂದು ಸೇಡಿನ ಪಂದ್ಯ ಕೂಡ ಹೌದು.

IND vs AUS Final: ಸೇಡಿಗೆ ಕಾದು ಕುಳಿತ ಭಾರತ: ವಿಶ್ವಕಪ್​ ಫೈನಲ್​ನಲ್ಲಿ ಮತ್ತೊಮ್ಮೆ ಇಂಡೋ-ಆಸೀಸ್ ಮುಖಾಮುಖಿ
INDU19 vs AUSU19 Final
Vinay Bhat
| Edited By: |

Updated on:Feb 09, 2024 | 11:28 AM

Share

ನವೆಂಬರ್ 19, 2023 ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದ ಘಟನೆ ಭಾರತೀಯ ಅಭಿಮಾನಿಗಳಿಗೆ ಎಂದೂ ಮರೆಯಲು ಸಾಧ್ಯವಿಲ್ಲ. ಐಸಿಸಿ ಪುರುಷರ ಏಕದಿನ ವಿಶ್ವಕಪ್ ಫೈನಲ್​ನಲ್ಲಿ (ICC ODI World Cup Final) ಆಸ್ಟ್ರೇಲಿಯಾ ವಿರುದ್ಧ ಸೋತು ಭಾರತ ಟ್ರೋಫಿ ಗೆಲ್ಲುವ ಆಸೆ ನುಚ್ಚುನೂರಾಯಿತು. ಇದೀಗ ಆ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ ಬಂದಿದೆ. ಅದುಕೂಡ ವಿಶ್ವಕಪ್​ನಲ್ಲೇ. ಐಸಿಸಿ ಅಂಡರ್-19 ವಿಶ್ವಕಪ್ 2024 ರ ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿ ಆಗಲಿದೆ. ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಪಾಕಿಸ್ತಾನವನ್ನು ಸೋಲಿಸಿದ್ದು, ಇದೀಗ ಭಾನುವಾರ ಅಂದರೆ ಫೆಬ್ರವರಿ 11 ರಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಟ್ರೋಫಿಗಾಗಿ ಸೆಣಸಲಿವೆ.

ಸೀನಿಯರ್ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಂತಿಮ ಕದನ ನಡೆದಂತೆ, ಈಗ ಅದೇ ದೃಶ್ಯ ಜೂನಿಯರ್ ವಿಶ್ವಕಪ್‌ನಲ್ಲಿಯೂ ಕಂಡುಬರಲಿದೆ. ಇಲ್ಲಿ ಗೆದ್ದು ಸೇಡು ತೀರಿಸಿಕೊಳ್ಳಲು ಭಾರತದ ಯುವ ಪಡೆ ಸಜ್ಜಾಗುತ್ತಿದೆ. ಈ ಪಂದ್ಯ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ಭರ್ತಿ 15 ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ರವೀಂದ್ರ ಜಡೇಜಾ

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ಹೇಗಿತ್ತು?

ಈ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಕೇವಲ 179 ರನ್ ಗಳಿಸಿತಷ್ಟೆ. ಪಾಕಿಸ್ತಾನದ ಕೇವಲ 3 ಆಟಗಾರರು ಮಾತ್ರ ಎರಡಂಕಿ ದಾಟಲು ಸಾಧ್ಯವಾಯಿತು. ಅಜಾನ್ ಅವೈಸ್ ಮತ್ತು ಅರಾಫತ್ ಮಿನ್ಹಾಸ್ ತಲಾ 52 ರನ್ ಗಳಿಸಿದರು. ಇನ್ನುಳಿದ ಎಲ್ಲಾ ಬ್ಯಾಟ್ಸ್‌ಮನ್‌ಗಳು ಸಂಪೂರ್ಣ ವಿಫಲರಾಗಿ ಪೆವಿಲಿಯನ್ ಸೇರಿಕೊಂಡರು. ಆಸ್ಟ್ರೇಲಿಯಾ ಪರ ಟಾಮ್ ಸ್ಟಾರ್ಕರ್ 6 ವಿಕೆಟ್ ಪಡೆಯುವ ಮೂಲಕ ಪಾಕಿಸ್ತಾನದ ಬ್ಯಾಟಿಂಗ್‌ನ ಬೆನ್ನು ಮುರಿದರು. ಟಾಮ್ ಕೇವಲ 9.5 ಓವರ್‌ಗಳಲ್ಲಿ ಕೇವಲ 24 ರನ್ ನೀಡಿ 6 ವಿಕೆಟ್ ಪಡೆದರು.

ಸೆಮಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದ ಕ್ಷಣ:

View this post on Instagram

A post shared by ICC (@icc)

ಟಾರ್ಗೆಟ್ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ಗೆಲುವು ಸುಲಭವಾಗಿ ದಕ್ಕಲಿಲ್ಲ. ವಿಕೆಟ್ ಕಳೆದುಕೊಂಡೇ ಸಾಗಿದ ಕಾಂಗರೂ ಪಡೆ ಕೊನೆಯ ಓವರ್‌ನಲ್ಲಿ ಜಯ ಕಂಡಿತು. ಅದುಕೂಡ 1 ವಿಕೆಟ್ ಬಾಕಿಯಿತ್ತಷ್ಟೆ. ರೋಚಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಹ್ಯಾರಿ ಡಿಕ್ಸನ್ ಮತ್ತು ಆಲಿವರ್ ಪೀಕ್ ಅದ್ಭುತ ಬ್ಯಾಟಿಂಗ್ ನಡೆಸಿದರು. ಒಂದು ಸಮಯದಲ್ಲಿ ಆಸ್ಟ್ರೇಲಿಯ ತಂಡ 59 ರನ್‌ಗಳಾಗುವಷ್ಟರಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು, ಆದರೆ ನಂತರ ಆಸ್ಟ್ರೇಲಿಯಾ ತಂಡವು ಪುನರಾಗಮನ ಮಾಡಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಏಕದಿನ ಸರಣಿಗೆ ಲಂಕಾ ತಂಡ ಪ್ರಕಟ; ಮಾಜಿ ನಾಯಕನನ್ನೇ ಕೈಬಿಟ್ಟ ಮಂಡಳಿ..!

ಸೆಮಿ ಫೈನಲ್‌ನಲ್ಲಿ ಭಾರತಕ್ಕೆ ಜಯ

ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 2 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ ಫೈನಲ್‌ಗೆ ಪ್ರವೇಶಿಸಿತು. ಸೆಮಿಫೈನಲ್‌ನಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 244 ರನ್ ಗಳಿಸಿತ್ತು, ಇದಕ್ಕೆ ಉತ್ತರವಾಗಿ ಟೀಮ್ ಇಂಡಿಯಾ 49ನೇ ಓವರ್‌ನಲ್ಲಿ ಈ ಗುರಿಯನ್ನು ತಲುಪಿತು. ಭಾರತದ ಪರ ನಾಯಕ ಉದಯ್ ಸಹರಾನ್ 81 ರನ್ ಮತ್ತು ಸಚಿನ್ ದಾಸ್ 96 ರನ್ ಗಳಿಸಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದರು.

ಅಂಡರ್-19 ವಿಶ್ವಕಪ್‌ನಲ್ಲಿ ಒಟ್ಟಾರೆ ಒಂಬತ್ತನೇ ಬಾರಿಗೆ ಮತ್ತು ಸತತ ಐದನೇ ಬಾರಿಗೆ ಟೀಮ್ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾರತ ತಂಡ ಅಂಡರ್-19 ವಿಶ್ವಕಪ್‌ನ ಅತ್ಯಂತ ಯಶಸ್ವಿ ತಂಡವಾಗಿದ್ದು, ಈವರೆಗೆ 5 ಬಾರಿ ಪ್ರಶಸ್ತಿ ಗೆದ್ದಿದೆ. 2000 ರಲ್ಲಿ ಪ್ರಾರಂಭವಾದ ಟೂರ್ನಿಯಲ್ಲಿ ಭಾರತ 2008, 2012, 2018 ಮತ್ತು 2022 ರಲ್ಲಿ ವಿಶ್ವಕಪ್ ಗೆದ್ದು ಬೀಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 am, Fri, 9 February 24

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು